ಗ್ರೀನ್ ಝೋನ್‌ಗಳಲ್ಲಿ ಮದ್ಯದ ಅಂಗಡಿ ತೆರೆಯಲು ಅವಕಾಶ ಕೊಡಬೇಕೆಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದ ಸಿದ್ದರಾಮಯ್ಯ ಇದೀಗ ಮತ್ತೊಂದು ಸಲಹೆ ಕೊಟ್ಟಿದ್ದಾರೆ.
ಬೆಂಗಳೂರು, (ಮೇ.01): ಲಾಕ್‌ಡೌನ್ ಸಡಿಲಿಕೆ ಮಾಡಿ. ಇಲ್ಲವಾದ್ರೆ ಆರ್ಥಿಕ ಸಂಕಷ್ಟ ಎದುರಾಗಲಿದೆ ಎಂದು ಸರ್ಕಾರಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಇಂದು (ಶುಕ್ರವಾರ) ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಲಾಕ್‌ಡೌನ್ ಮುಂದುವರಿಸಿದರೆ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರಗೊಳ್ಳಲಿದೆ. ಈ ನಿಟ್ಟಿನಲ್ಲಿ ಕೆಲವೊಂದು ಮುನ್ನೆಚ್ಚರಿಕೆಗಳನ್ನು ಕೈಗೊಂಡು ಹಸಿರು, ಆರೆಂಜ್ ವಲಯಗಳಲ್ಲಿ ಲಾಕ್‌ಡೌನ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
undefined
ಕೆಂಪು ವಲಯಗಳನ್ನು ತೆರವುಗೊಳಿಸುವುದು ಬೇಡ, ಆರೆಂಜ್, ಗ್ರೀನ್ ಝೋನ್‌ಗಳಲ್ಲಿ ಲಾಕ್‌ಡೌನ್ ಸಡಿಲ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
14 ದಿನದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿಗೆ 10 ಕೋಟಿ ನಷ್ಟ, ಇಲ್ಲಿದೆ ಫೋಟೋಸ್
ಲಾಕ್‌ಡೌನ್ ಜಾರಿಯಿಂದ ಕಾರ್ಮಿಕರು, ರೈತರು ಸಂಕಷ್ಟದಲ್ಲಿದ್ದಾರೆ. ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹಿನ್ನೆಡೆಯಾಗಿದೆ. ಇದನ್ನು ಮತ್ತೆ ಸರಿದಾರಿಗೆ ತರುವ ನಿಟ್ಟಿನಲ್ಲಿ ಲಾಕ್‌ಡೌನ್ ಸಡಿಲಗೊಳಿಸಿ. ಆದರೆ ಈ ಸಂದರ್ಭದಲ್ಲಿ ಬಹಳ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.
ಲಾಕ್‌ಡೌನ್ ಜಾರಿಯ ಪರಿಣಾಮ ಅಸಂಘಟಿತ ಕಾರ್ಮಿಕರು, ಸಾಂಪ್ರಾದಾಯಿಕ ಕೆಲಸಗಾರರು ಸಂಕಷ್ಟದಲ್ಲಿದ್ದು, ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. ಇದರಿಂದ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಬರುತ್ತದೆ, ಪರಿಣಾಮ ಆರ್ಥಿಕ ಚಟುವಟಿಕೆ ಕೂಡಾ ಚೇತರಿಕೆಗೊಳ್ಳುತ್ತದೆ ಎಂದು ತಿಳಿಸಿದರು.
ಅನಗತ್ಯ ವೆಚ್ಚಕ್ಕೆ ಸರ್ಕಾರ ಕಡಿವಾಣ ಹಾಕಲಿ. ನಿಗಮ ಮತ್ತು ಮಂಡಳಿಗಳಲ್ಲಿ ಅಲ್ಲಿಯ ಅಧಿಕಾರಿಗಳು ಕಾರು ಇನ್ನಿತರ ಸೌಲಭ್ಯ ಪಡೆಯುತ್ತಿದ್ದಾರೆ. ಇದು ಸಹ ಅನಗತ್ಯ ವೆಚ್ಚದ ಒಂದು ಬಾಗ. ಸಿಎಂ ಯಡಿಯೂರಪ್ಪ ಅಧಿಕಾರಿಗಳು ಹೇಳಿದ್ದನ್ನ ಕೇಳಬಾರದು. ಯಡಿಯೂರಪ್ಪ ಸ್ವತಃ ಚಿಂತನೆ ಮಾಡದಿದ್ರೆ ಕಷ್ಟವಾಗಲಿದೆ. ಅವರು ಸ್ವಂತಿಕೆ ಬಳಿಸಿ ಕೆಲ ನಿರ್ಧಾರಗಳನ್ನ ತೆಗೆದುಕೊಳ್ಳಬೇಕು ಎಂದು ಬಿಎಸ್‌ವೈಗೆ ಸಲಹೆ ನೀಡಿದರು.