
ಬೆಳಗಾವಿ, (ಏ.10): ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಈಗ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು (ಶನಿವಾರ) ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ತಿರುಗೇಟು ನೀಡಿದರು.
ಶಾಸಕ ಯತ್ನಾಳ್ ಹೈಕಮಾಂಡ್ ಬಿಜೆಪಿ ಬಿಗ್ ಶಾಕ್: ಪಕ್ಷದಿಂದ ಗೇಟ್ ಪಾಸ್ ಫಿಕ್ಸ್!
ಯತ್ನಾಳ್ ಒಬ್ಬ ಬಿಜೆಪಿ ಹಿರಿಯ ಮುಖಂಡ. ಅವರು ಏನು ಹೇಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದ ಸಿದ್ದರಾಮಯ್ಯ, ಬಸನಗೌಡ ಪಾಟೀಲ ಯತ್ನಾಳ್ ಅವರ ಮಾತು ಕೇಳಿದರೆ ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ ಅಂತಾ ಅನಿಸುತ್ತೆ ಅಲ್ವಾ ಎಂದು ಪ್ರಶ್ನಿಸಿದರು.
ಸತೀಶ್ ಜಾರಕಿಹೊಳಿ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂಬ ಸಿ.ಟಿ.ರವಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಮಂಗಳ ಅಂಗಡಿಗೆ ಏನು ಮಾಡಿದರು ಎಂದು ಸಿದ್ದರಾಮಯ್ಯ ಮರು ಪ್ರಶ್ನೆ ಮಾಡಿದರು. ಸಿ.ಟಿ.ರವಿ ಅವರಿಗೆಲ್ಲ ನಾವು ಉತ್ತರ ಕೊಡಬೇಕಾಗಿಲ್ಲ. ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಮೊದಲು ಯಾರ ಹೆಸರು ಕೇಳಿ ಬರುತ್ತಿತ್ತು. ಸಿಟಿ ರವಿ ಯಾವಾಗಲೂ ಸುಳ್ಳೇ ಹೇಳುತ್ತಾನೆ ಎಂದರು.
ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಜನರಿಂದ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.