ಜಗದೀಶ್ ಶೆಟ್ಟರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ, ಕಾಂಗ್ರೆಸ್ ಸೇರ್ಪಡೆಗೆ ತಯಾರಿ!

Published : Apr 16, 2023, 10:34 PM ISTUpdated : Apr 16, 2023, 10:38 PM IST
ಜಗದೀಶ್ ಶೆಟ್ಟರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ, ಕಾಂಗ್ರೆಸ್ ಸೇರ್ಪಡೆಗೆ ತಯಾರಿ!

ಸಾರಾಂಶ

ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜಗದೀಶ್ ಶೆಟ್ಟರ್‌ನ್ನು ಕಾಂಗ್ರೆಸ್‌ಗೆ ಕರೆತರಲು ಪ್ರಯತ್ನಗಳು ನಡೆಯುತ್ತಿದೆ. ಇಂದು ಕಾಂಗ್ರೆಸ್ ನಾಯಕರು ಶೆಟ್ಟರ್ ನಿವಾಸಕ್ಕೆ ತೆರಳಿ ಚರ್ಚಿಸಿದ್ದಾರೆ. ಸುರ್ಜೆವಾಲ, ಡಿಕೆ ಶಿವಕುಮಾರ್ ಬೆನ್ನಲ್ಲೇ, ಇದೀಗ ಸಿದ್ದರಾಮಯ್ಯ ಶೆಟ್ಟರ್ ನಿವಾಸಕ್ಕೆ ಆಗಮಿಸಿದ್ದಾರೆ.

ಬೆಂಗಳೂರು(ಏ.16): ಟಿಕೆಟ್ ನಿರಾಕರಣೆಯಿಂದ ಬೇಸತ್ತು ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ತಯಾರಿ ಚುರುಕಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ಶೆಟ್ಟರ್ ಜೊತೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಶೆಟ್ಟರ್ ನಿವಾಸಕ್ಕೆ ತೆರಳಿದ ರಣದೀಪ್ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದಾರೆ. ಇದೀಗ ಸಿದ್ದರಾಮಯ್ಯ ಶೆಟ್ಟರ್ ನಿವಾಸಕ್ಕೆ ಆಗಮಿಸಿ ಮಾತುಕತೆಯಲ್ಲಿ ತೊಡಗಿದ್ದಾರೆ. ಸಿದ್ದರಾಮಯ್ಯ ಜೊತೆ ಒಂದೇ ಕಾರಿನಲ್ಲಿ ಜಮೀರ್ ಅಹಮ್ಮದ್ ಕೂಡ ಆಗಮಿಸಿದ್ದಾರೆ. 

ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ರಾಜೀನಾಮೆ ಘೋಷಿಸಿದ ಜಗದೀಶ್ ಶೆಟ್ಟರ್ ಇಂದು ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಬೆಂಗಳೂರಿಗೆ ಆಗಮಿಸಿದ ಶೆಟ್ಟರ್ ಜೊತೆ ಕಾಂಗ್ರೆಸ್ ನಾಯಕರು ಸತತ ಮಾತುಕತೆ ನಡೆಸುತ್ತಿದ್ದಾರೆ.ಎಂಬಿ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಈಗಾಗಲೇ ಶೆಟ್ಟರ್ ಜೊತೆ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ, ಬಿಜೆಪಿಯತ್ತ ಚಿತ್ತ!

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕುರಿತು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿರುವ ರಾಹುಲ್ ಗಾಂಧಿ ಮಹತ್ವದ ಸೂಚನೆ ನೀಡಿದ್ದಾರೆ. ರಾಹುಲ್ ಗಾಂಧಿ ಜೊತೆಗಿನ ಚರ್ಚೆ ಬಳಿಕ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇರವಾಗಿ ಶೆಟ್ಟರ್ ಮನೆಗೆ ತೆರಳಿ ಮಾತುಕತೆ ನಡೆಸುತ್ತಿದ್ದಾರೆ. ಶೆಟ್ಟರ್ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಿಎಂ. ಹೀಗಾಗಿ ಕಾಂಗ್ರೆಸ್ ಸೇರಿಕೊಂಡರೆ ಯಾವ ರೀತಿ ನಡೆಸಿಕೊಳ್ಳಬೇಕು. ಯಾವ ಜವಾಬ್ದಾರಿ ನೀಡಬೇಕು.ಶೆಟ್ಟರ್ ಷರತ್ತುಗಳ ಕುರಿತು ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ.  

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕುರಿತು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿರುವ ರಾಹುಲ್ ಗಾಂಧಿ ಮಹತ್ವದ ಸೂಚನೆ ನೀಡಿದ್ದಾರೆ. ರಾಹುಲ್ ಗಾಂಧಿ ಜೊತೆಗಿನ ಚರ್ಚೆ ಬಳಿಕ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇರವಾಗಿ ಶೆಟ್ಟರ್ ಮನೆಗೆ ತೆರಳಿ ಮಾತುಕತೆ ನಡೆಸುತ್ತಿದ್ದಾರೆ. ಶೆಟ್ಟರ್ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಿಎಂ. ಹೀಗಾಗಿ ಕಾಂಗ್ರೆಸ್ ಸೇರಿಕೊಂಡರೆ ಯಾವ ರೀತಿ ನಡೆಸಿಕೊಳ್ಳಬೇಕು. ಯಾವ ಜವಾಬ್ದಾರಿ ನೀಡಬೇಕು.ಶೆಟ್ಟರ್ ಷರತ್ತುಗಳ ಕುರಿತು ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ.  

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್‌ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಮುನಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರ ಮನವೊಲಿಕೆ ಪ್ರಯತ್ನ ನಿನ್ನೆ ವಿಫಲವಾಗಿತ್ತು. ಹೀಗಾಗಿ  ಶಾಸಕ ಸ್ಥಾನ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ, ‘ನನ್ನ ಸ್ಪರ್ಧೆ ಖಚಿತ, ಪಕ್ಷೇತರನಾಗಿ ಸ್ಪರ್ಧೆಯೋ ಅಥವಾ ಯಾವುದಾದರೂ ಪಕ್ಷದಿಂದ ಸ್ಪರ್ಧಿಸಬೇಕೋ ಎಂಬುದರ ಬಗ್ಗೆ ನಂತರ ತೀರ್ಮಾನಿಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ. 

ನಿನ್ನೆ ಜೆಡಿಎಸ್ ಇಂದು ಮತ್ತೆ ಬಿಜೆಪಿ, ಮಾಜಿ ಶಾಸಕ ನಾಗರಾಜು ನಡೆಯಿಂದ ಕಾರ್ಯಕರ್ತರಿಗೆ ಗೊಂದಲ!

ಶನಿವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದ ಧರ್ಮೇಂದ್ರ ಪ್ರಧಾನ್‌ ಅವರು ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಜೋಶಿ ಜೊತೆ ಶೆಟ್ಟರ್‌ ಮನೆಗೆ ಆಗಮಿಸಿ, ಮನವೊಲಿಕೆ ಯತ್ನ ನಡೆಸಿದರು. ಆದರೆ, ವರಿಷ್ಠರಿಂದ ಟಿಕೆಟ್‌ ಭರವಸೆ ಸಿಗದ ಕಾರಣ ಆಕ್ರೋಶಗೊಂಡ ಶೆಟ್ಟರ್‌, ರಾಜೀನಾಮೆ ನಿರ್ಧಾರಕ್ಕೆ ಬಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ