ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರಣ ಕೊಟ್ಟಿದ್ದಾರೆ.
ಬೆಂಗಳೂರು, (ಫೆ.23) : ಶಿವಮೊಗ್ಗದ ಹುಣಸೋಡು ಗ್ರಾಮದ ಕಲ್ಲು ಕ್ರಷರ್ನಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಫೋಟ ಪ್ರಕರಣದಲ್ಲಿ 8 ಮಂದಿಯ ದೇಹಗಳು ಛಿದ್ರಛಿದ್ರಗೊಂಡು ಮೃತಪಟ್ಟಿದ್ದ ಕಹಿ ಘಟನೆ ಮಾಸುವ ಮುನ್ನವೇ ಮತ್ತೊಂದು ಸ್ಫೋಟ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ್ದು, ಮೃತರ ಸಂಖ್ಯೆ 6ಕ್ಕೇರಿದೆ.
ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುವೆ ಎಂದು ಟ್ವಿಟ್ಟರ್ ಮೂಲಕ ಒತ್ತಾಯಿಸಿದ್ದಾರೆ.
ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್: ಭೇಟಿ ಬಳಿಕ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ
ಸಿದ್ದು ಗಂಭೀರ ಆರೋಪ
ಸಿದ್ದರಾಮಯಯ್ಯ ತಮ್ಮ ಟ್ವೀಟ್ ನಲ್ಲಿ ರಾಜ್ಯ ಸರ್ಕಾರವನ್ನು ಆರೋಪಿಸಿದ್ದು, ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಅವರು ಪ್ರಶ್ನಿಸಿದ್ದಾರೆ.
ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ.
ಈ ಅಮಾಯಕ ಕಾರ್ಮಿಕರು,
ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ.
3/6
ಇನ್ನು, ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪನವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯದಲ್ಲಿಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಷಾಮೀಲಾಗಿದ್ದಾರೆ.
ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ,
ಉಸ್ತುವಾರಿ ಸಚಿವ ಅವರ ಗಮನಕ್ಕೆ ಬಂದಿರಲಿಲ್ಲವೇ?
5/6