'ಏಕಪತ್ನಿವ್ರತಸ್ಥ: ಬಿಎಸ್​ವೈ ಮೇಲೂ ಸಂಶಯ ಮೂಡುವಂತೆ ಸುಧಾಕರ್ ಹೇಳಿಕೆ ನೀಡಿದ್ದಾರೆ'

Published : Mar 24, 2021, 06:54 PM ISTUpdated : Mar 24, 2021, 06:57 PM IST
'ಏಕಪತ್ನಿವ್ರತಸ್ಥ: ಬಿಎಸ್​ವೈ ಮೇಲೂ ಸಂಶಯ ಮೂಡುವಂತೆ ಸುಧಾಕರ್ ಹೇಳಿಕೆ ನೀಡಿದ್ದಾರೆ'

ಸಾರಾಂಶ

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಸಿಂಗಲ್ ಹೆಂಡ್ತಿ ಚಾಲೆಂಜ್‌ಗೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಅದರಲ್ಲೂ ಪ್ರತಿಪಕ್ಷ ಕಾಂಗ್ರೆಸ್, ಸುಧಾಕರ್ ಮೇಲೆ ಮುಗಿಬಿದ್ದಿದೆ.

ಬೆಂಗಳೂರು, (ಮಾ.24): ಆರೋಗ್ಯ ಸಚಿವ ಸುಧಾಕರ್ ಅವರ ಏಕಪತ್ನಿ ವ್ರತಸ್ಥ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ತಿರುಗೇಟು ನೀಡಿದ್ದಾರೆ. 

ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಸುಧಾಕರ್, ಎಲ್ಲರೂ ಏಕಪತ್ನಿ ವ್ರತಸ್ಥರಾ? 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆಯೂ ತನಿಖೆಯಾಗಲಿ ಎಂದು ಹೇಳಿ ವಿವಾದಕ್ಕೀಡಾಗಿದ್ದಾರೆ.

ಅನೈತಿಕ ಸಂಬಂಧ ಹೇಳಿಕೆ: ಸಿಎಂ ತರಾಟೆ ಬೆನ್ನಲ್ಲೇ ಎಚ್ಚೆತ್ತ ಸುಧಾಕರ್! 

ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮಂತ್ರಿ ಸುಧಾಕರ್‌ ಬಹಳ ಉದ್ಧಟತನದ ಮಾತನ್ನ ಹೇಳಿದ್ದಾರೆ. 225 ಜನರ ಮೇಲೆ ಸಂಶಯ ಬರುವ ರೀತಿ ಮಾತನ್ನಾಡಿದ್ದಾರೆ. ಮನೆಯಲ್ಲೂ ಸಂಶಯ ಮೂಡುವಂತೆ ಹೇಳಿದ್ದಾರೆ. ಸಿಎಂ ಯಡಿಯೂರಪ್ಪ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮೇಲೂ ಸಂಶಯ ಮೂಡುವಂತೆ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದು ಬೇಜವಾಬ್ದಾರಿ ಹೇಳಿಕೆ.. 225 ರಲ್ಲಿ ಹೆಣ್ಣು ಮಕ್ಕಳು ಇದ್ದಾರೆ. ಇವರು ಹೊರಗೆ ಏನು ಹೇಳಬೇಕು..? ಇವರು ರಾಜೀನಾಮೆ ಕೊಡಬೇಕು. ಸುಧಾಕರ್ ಸೇರಿದಂತೆ ಆರು ಜನ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದೇವೆ. ಇವರ ಸಿಡಿಗಳು ಇವೆ ಅದಕ್ಕೆ ವಿಲಿವಿಲಿ ಅಂತಾ ಒದ್ದಾಡ್ತಿದ್ದಾರೆ. ಸದನಕ್ಕೆ ಒಂದು ಗೌರವ ಇರುತ್ತೆ, ಸದನದ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!