ನಮ್ಮಿಂದ ಹಣ ಪಡೆದುಕೊಂಡು ಜಿಟಿಡಿ ಬಿಜೆಪಿ ಪರ ಕೆಲಸ ಮಾಡಿದ್ರು ಎಂದು ಮುಖಂಡರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ
ಬೆಂಗಳೂರು (ಡಿ.01): ಜಿ.ಟಿ.ದೇವೇಗೌಡ ಅವರು ನಮ್ಮಿಂದಲೇ ಹಣ ಪಡೆದು ಬಿಜೆಪಿ ಪರ ಕೆಲಸ ಮಾಡಿದ್ದಾರೆ. ಜೆಡಿಎಸ್‌ನವರಿಗೆ ನಮಗಿಂತ ಬಿಜೆಪಿ ಪರವೇ ಒಲವು ಹೆಚ್ಚು. ಹೀಗಾಗಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಮೈತ್ರಿ ಸಹವಾಸ ಮಾಡಬಾರದು ಎಂದು ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ದೇವನಹಳ್ಳಿ ಬಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪಕ್ಷದೊಂದಿಗಿನ ಮೈತ್ರಿ ರಾಜಕಾರಣದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳದಿದ್ದರೆ ಲೋಕಸಭೆ ಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆಲ್ಲಬಹುದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇನ್ನೆರಡು ವರ್ಷ ಜೆಡಿಎಸ್‌ನಲ್ಲಿ ಇರ್ತೀನಿ : ದೇವೇಗೌಡ ..
ಅಲ್ಲದೆ, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಪರ ಪೂರಕವಾಗಿ ಕೆಲಸ ಮಾಡಲಿಲ್ಲ. ಬದಲಿಗೆ ಬಿಜೆಪಿಯ ಅಭ್ಯರ್ಥಿಗಳ ಪರ ಕೆಲಸ ಮಾಡಿ ಕಾಂಗ್ರೆಸ್‌ನ ಹೀನಾಯ ಸೋಲಿಗೆ ಕಾರಣವಾಗಬೇಕಾಗಿ ಬಂತು. ಜೆಡಿಎಸ್‌ಗೆ ನಮಗಿಂತಲೂ ಬಿಜೆಪಿ ಪರವೇ ಒಲವು ಜಾಸ್ತಿ. ಕಾರಣ ಮತ್ತೆ ಜೆಡಿಎಸ್ ಸಹವಾಸ ಮಾಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.