ಮುನಿರತ್ನ ಪರ ಕೆಲಸ ಮಾಡಿದ್ರೆ ಮುಂದಿದೆ ಕಷ್ಟ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

By Suvarna NewsFirst Published Oct 30, 2020, 8:08 PM IST
Highlights

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆ ಕಾಂಗ್ರೆಸ್-ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಬಿರುಸಿನ ಪ್ರಚಾರ ಕೈಗೊಂಡಿವೆ. ಇದರ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಖಡಕ್ ವಾರ್ನ್ ಮಾಡಿದ್ದಾರೆ.

ಬೆಂಗಳೂರು, (ಅ.30): ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಇಂದು (ಶುಕ್ರವಾರ) ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಜಾಲಹಳ್ಳಿ, ಪೀಣ್ಯ ಮತ್ತಿತರ ವಾರ್ಡ್ ನಲ್ಲಿ ರೋಡ್‌ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ  ಪೊಲೀಸರು ಒಂದು ಪಕ್ಷದ ಪರ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದರು.

ಬೈ ಎಲೆಕ್ಷನ್: ಯುದ್ಧಕ್ಕೂ ಮುನ್ನ ಕಾಂಗ್ರೆಸ್, ಜೆಡಿಎಸ್ ಶಸ್ತ್ರ ತ್ಯಾಗ ಮಾಡಿದ್ವಾ..?

ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಎಂದು ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಖಡಕ್ ಆಗಿ ಹೇಳಿದರು.

ಇನ್ನು ನವೆಂಬರ್ 3ರಂದು  ಮತದಾನ ನಡೆಯಲಿದ್ದು, ನವೆಂಬರ್ 10ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.

click me!