ಸರ್ಕಾರ ವಿರುದ್ಧ ಸ್ಪೀಕರ್‌ ಕಾಗೇರಿಗೆ ಸಿದ್ದು ದೂರು

By Kannadaprabha NewsFirst Published Jun 11, 2021, 7:20 AM IST
Highlights
  • ಸ್ಪೀಕರ್‌ ಕಾಗೇರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ
  • ಕೊರೋನಾ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಅವಕಾಶ ಕೋರಿಕೆ
  • ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು (ಜೂ.11): ಕೊರೋನಾ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕೋರಿದ್ದಾರೆ.

 ‘ಸರ್ಕಾರ ಜೀವಂತವಾಗಿದ್ದರೆ ವಿಪಕ್ಷ ನಾಯಕರು ಪತ್ರ ಬರೆದ ಕೂಡಲೇ ಮಾಹಿತಿ ನೀಡುತ್ತಿತ್ತು. ವಿರೋಧ ಪಕ್ಷದ ನಾಯಕನ ಶಾಸನಾತ್ಮಕ ಅಧಿಕಾರವನ್ನು ಸರ್ಕಾರ ನಿರ್ಲಕ್ಷಿಸಿದೆ. ಉದ್ದೇಶಪೂರ್ವಕವಾಗಿ ಮಾಹಿತಿ ಕೊಡದೆ ಹಕ್ಕು ಚ್ಯುತಿಯನ್ನುಂಟು ಮಾಡಿದೆ’ ಎಂದು ಸ್ಪೀಕರ್‌ಗೆ ಬರೆದ ಪತ್ರದಲ್ಲಿ ದೂರಿದ್ದಾರೆ.

'ಬಿಜೆಪಿಗೆ ಬೇಡವಾದ ಕೂಸಾದ ಬಿಎಸ್‌ವೈ, ಕಿತ್ತು ಹಾಕಲು ಹೈಕಮಾಂಡ್ ಸಿದ್ಧತೆ' .

ಈಗಾಗಲೇ ರಾಜ್ಯ ಸರ್ಕಾರದಲ್ಲಿಯೂ ಸಿಎಂ ಬದಲಾವಣೆ ಗೊಂದಲ ಮೂಡಿದ್ದು, ಇದೇ ವೇಳೆ ಸಿದ್ದರಾಮಯ್ಯ ಸ್ಪೀಕರ್‌ಗೆ ಸರ್ಕಾರದ ವಿರುದ್ಧವೇ ದೂರಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!