ಭರವಸೆ ಈಡೇರಿಸದೇ ಬಿಜೆಪಿ ಜನಾಕ್ರೋಶಕ್ಕೆ ತುತ್ತಾಗಿದೆ: ಉಗ್ರಪ್ಪ ಟೀಕೆ

By Govindaraj S  |  First Published Sep 7, 2022, 12:18 PM IST

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಎಲ್ಲ ರಂಗಗಳಲ್ಲಿಯೂ ವಿಫಲವಾಗಿ ಜನಾಕ್ರೊಶಕ್ಕೆ ತುತ್ತಾಗಿದೆಂದು ಮಾಜಿ ಸಂಸದ ಹಾಗೂ ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ವಿ.ಎಸ್‌.ಉಗ್ರಪ್ಪ ಟೀಕಿಸಿದರು. 


ಚಿಂತಾಮಣಿ (ಸೆ.07): ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಎಲ್ಲ ರಂಗಗಳಲ್ಲಿಯೂ ವಿಫಲವಾಗಿ ಜನಾಕ್ರೊಶಕ್ಕೆ ತುತ್ತಾಗಿದೆಂದು ಮಾಜಿ ಸಂಸದ ಹಾಗೂ ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ವಿ.ಎಸ್‌.ಉಗ್ರಪ್ಪ ಟೀಕಿಸಿದರು. ನಗರದ ಎಂ.ಸಿ.ಆಂಜನೇಯರೆಡ್ಡಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ರಾಹುಲ್‌ಗಾಂಧೀ ನೇತೃತ್ವದಲ್ಲಿ ನಡೆಯಲಿರುವ ಭಾರತದ ಐಕ್ಯತಾ ಯಾತ್ರೆಯ ಪೂವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಜೀವನ ನಿರ್ವಹಣೆ ತ್ರಾಸದಾಯಕವಾಗಿದ್ದರೂ ಇದಾವುದರ ಅರಿವೇ ಇಲ್ಲದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಡೆಯುತ್ತಿದ್ದು ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಹಲವಾರು ರೀತಿ ಸೌಲಭ್ಯವನ್ನು ನೀಡುತ್ತೇವೆಂಬ ಭರವಸೆಯಲ್ಲೇ ಕಾಲ ನೂಕುವುದೇ ಈ ಸರ್ಕಾರಗಳ ಮಹತ್ತರ ಸಾಧನೆಯಾಗಿದೆಯೆಂದು ವ್ಯಂಗ್ಯವಾಡಿದ ಉಗ್ರಪ್ಪ, ಕಳೆದ 2 ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ರೈತರಿಗೆ ಬೆಳೆ ನಷ್ಟಹಣವನ್ನು ಕೊಡುತ್ತೇವೆಂಬ ಭರಸವೆ ಭರವಸೆಯಾಗಿಯೇ ಉಳಿದು ಹೋಯಿತು. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಗ್ರಾಮೀಣ ಪ್ರದೇಶದವರಿಗೆ ಉದ್ಯೋಗ ಖಾತ್ರಿ ಯೋಜನೆಯನ್ನು ತರುವ ಮೂಲಕ ಪ್ರತಿಯೊಬ್ಬರಿಗೂ ತಮ್ಮ ಸ್ವಂತ ಜಮೀನಿನಲ್ಲಿ ಉದ್ಯೋಗವನ್ನು ಸೃಷ್ಟಿಮಾಡುವ ಅವಕಾಶವನ್ನು ದೊರಕಿಸಿಕೊಟ್ಟಿತು ಎಂದರು.

Tap to resize

Latest Videos

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 75 ಕಿ.ಮೀ ಕಾಂಗ್ರೆಸ್‌ ಪಾದಯಾತ್ರೆ: ಉಗ್ರಪ್ಪ

ಮಾಜಿ ಶಾಸಕ ಡಾ. ಎಂ.ಸಿ.ಸುಧಾಕರ್‌ ಮಾತನಾಡಿ, ರಾಜ್ಯದಲ್ಲಿ ಶೇ.40 ಕಮಿಷನ್‌ ನಡೆಯುತ್ತಿದೆ. ಆದರೆ ಚಿಂತಾಮಣಿಯಲ್ಲಿ ಪ್ರಿಪೇಡ್‌ ಕರೆನ್ಸಿಯಂತೆ ಗುತ್ತಿಗೆದಾರರು ಕಮೀಷನ್‌ ನೀಡಿದರೆ ಮಾತ್ರ ಕಾಮಗಾರಿಗೆ ಶಾಸಕರು ಚಾಲನೆ ನೀಡುತ್ತಿದ್ದಾರೆ. ಇಂತಹ ಅಕ್ರಮ ಹಣವನ್ನು ಮತದಾರರಿಗೆ ನೀಡುವ ಮೂಲಕ ತಮ್ಮ ಪಾಪವನ್ನು ತೊಳೆದುಕೊಳ್ಳುತ್ತಿದ್ದಾರೆಂದು ಆರೋಪ ಮಾಡಿದರು. ಈ ಸಂಧರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ಉಸ್ತುವಾರಿ ಅಭೀಷೇಕ್‌ ದತ್‌, ಶಿಡ್ಲಘಟ್ಟಶಾಸಕ ವಿ.ಮುನಿಯಪ್ಪ, ಚಿಂತಾಮಣಿ ಕಾಂಗ್ರೇಸ್‌ ಉಸ್ತುವಾರಿ ಸಂಪಂಗಿ, ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಅಡ್ಡಗಲ್‌ ಶ್ರೀಧರ್‌, ಡಿ.ಸಿ.ಸಿ. ಬ್ಯಾಂಕ್‌ ನಿರ್ದೇಶಕ ನಾಗಿರೆಡ್ಡಿ, ಕೆ.ಎಂ.ಎಫ್‌ ನಿರ್ದೇಶಕ ಅಶ್ವತ್ಥನಾರಾಯಣ ಬಾಬು, ಮಾಜಿ ಜಿ.ಪಂ ಸದಸ್ಯ ಸ್ಕೂಲ್‌ ಸುಬ್ಬಾರೆಡ್ಡಿ, ಕಾರ್ಯಕರ್ತರು ಹಾಜರಿದ್ದರು.

ಕಮಿಷನ್‌ ತನಿಖೆಯಾದರೆ ಸರ್ಕಾರದ ಬಹುಪಾಲು ಸಚಿವರು ಜೈಲಿಗೆ: ರಾಜ್ಯ ಸರ್ಕಾರದ 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಿದರೆ ಈ ಸರ್ಕಾರದ ಬಹುತೇಕ ಸಚಿವರು ಜೈಲಿಗೆ ಹೋಗುವುದು ಗ್ಯಾರಂಟಿ ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಬಹುತೇಕ ಶಾಸಕರು ಹಾಗೂ ಮಂತ್ರಿಗಳು ಕಮಿಷನ್‌ ಪಡೆಯುತ್ತಿರುವ ಬಗ್ಗೆ ಸಾಕಷ್ಟುದೂರುಗಳಿವೆ. ನ್ಯಾಯಾಂಗ ತನಿಖೆಗೆ ಒಳಪಡಿಸುವುದಾದರೆ ಸೂಕ್ತ ದಾಖಲೆಗಳನ್ನು ನೀಡುವುದಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಗುತ್ತಿಗೆದಾರರ ಸಂಘ ಹೇಳಿದೆ. ಆದರೆ, ಈ ಬಗ್ಗೆ ಸೂಕ್ತ ಉತ್ತರ ನೀಡದೆ ಜಾರಿಗೊಳ್ಳುತ್ತಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಒಂದು ವೇಳೆ ಯಾವುದೇ ಕಮಿಷನ್‌ ಪಡೆದಿಲ್ಲ ಎನ್ನುವುದಾದರೆ ತನಿಖೆಗೆ ಹಿಂದೇಟು ಹಾಕುತ್ತಿರುವುದು ಏಕೆ? ಎಂದು ಪ್ರಶ್ನಿಸಿದರು.

PSI Recruitment Scam ಸಚಿವ ಅಶ್ವಥ್‌ ನಾರಾಯಣ್ ಸಹೋದರ ಹಗರಣದಲ್ಲಿ ಭಾಗಿ!

ಆಪರೇಷನ್‌ ಕಮಲದ ಜನಕ: ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನದ ಬಗ್ಗೆ ನಂಬಿಕೆಗಳಿಲ್ಲ. ಹೀಗಾಗಿಯೇ ಆಪರೇಷನ್‌ ಕಮಲ ಮಾಡಿ ಸಂವಿಧಾನ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ, ಗೋವಾಗಳಲ್ಲಿ ಆಪರೇಷನ್‌ ಕಮಲ ನಡೆಸಿದ್ದು, ಇದೀಗ ದೆಹಲಿಗೆ ಕೈ ಹಾಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆಎಸೆಯಲು ಯುವಕರನ್ನು ಪ್ರೇರೇಪಿಸುವುದು, ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿದರು ಎಂಬ ವಿಚಾರಗಳನ್ನಿಟ್ಟುಕೊಂಡು ಜನಸಾಮಾನ್ಯರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಮರೆಮಾಚಲು ರಾಜ್ಯದ ಬಿಜೆಪಿ ಸರ್ಕಾರ ಯತ್ನಿಸಿದೆ ಎಂದು ವಿ.ಎಸ್‌. ಉಗ್ರಪ್ಪ ಆರೋಪಿಸಿದರು.

click me!