ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್‌ ವರಿಷ್ಠರ ಬ್ರೇಕ್‌!

Published : Jan 15, 2025, 05:00 AM IST
ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್‌ ವರಿಷ್ಠರ ಬ್ರೇಕ್‌!

ಸಾರಾಂಶ

ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡು ವಿಧಾನ ಪರಿಷತ್ ಸದಸ್ಯರಾಗಿದ್ದ ಡಿ.ಟಿ. ಶ್ರೀನಿವಾಸ್ ಅವರನ್ನು ಪಕ್ಷದ ಪ್ರಮುಖ ಮುಂಚೂಣಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆಗೆ ದುಡಿದ ಪಕ್ಷದ ವಿವಿಧ ಹಾಲಿ, ಮಾಜಿ ಶಾಸಕರು, ಮುಖಂಡರ ಕಣ್ಣು ಕೆಂಪಾಗಿಸಿತ್ತು. 

ಬೆಂಗಳೂರು(ಜ.15):  ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್‌ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಡಿದ್ದ ಆದೇಶವನ್ನು ಕಾಂಗ್ರೆಸ್ ಹೈಕಮಾಂಡ್ ತಡೆ ಹಿಡಿದಿದೆ. 

ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡು ವಿಧಾನ ಪರಿಷತ್ ಸದಸ್ಯರಾಗಿದ್ದ ಡಿ.ಟಿ. ಶ್ರೀನಿವಾಸ್ ಅವರನ್ನು ಪಕ್ಷದ ಪ್ರಮುಖ ಮುಂಚೂಣಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆಗೆ ದುಡಿದ ಪಕ್ಷದ ವಿವಿಧ ಹಾಲಿ, ಮಾಜಿ ಶಾಸಕರು, ಮುಖಂಡರ ಕಣ್ಣು ಕೆಂಪಾಗಿಸಿತ್ತು. ಈ ಸಂಬಂಧ ಕೆಲ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ದೂರನ್ನೂ ನೀಡಿದ್ದರು. ಅಲ್ಲದೆ, ಶ್ರೀನಿವಾಸ್ ಅವರನ್ನು ನೇಮಕ ಮಾಡಲು ಎಐಸಿಸಿ ಅಧ್ಯಕ್ಷರ ಅನುಮೋದನೆ ಕೂಡ ಪಡೆದಿರಲಿಲ್ಲ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಐಸಿಸಿ ಒಬಿಸಿ ಘಟಕದ ಅಧ್ಯಕ್ಷ ಅಜಯ್ ಸಿಂಗ್ ಯಾದವ್ ಅವರು ಡಿ.ಟಿ.ಶ್ರೀನಿವಾಸ್ ಅವರ ನೇಮಕಾತಿ ಆದೇಶವನ್ನು ತಡೆಹಿಡಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷಗಿರಿ ರೇಸ್‌ಗೆ ಜಾರಕಿಹೊಳಿ: ಸತೀಶ್ ಎಂಟ್ರಿಯಿಂದ ರೋಚಕ ತಿರುವು!

ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ಪರಿಷತ್‌ನ ಕೆಲ ಹಿರಿಯ ಸದಸ್ಯರು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರ ಎದುರಲ್ಲೇ ಈ ನೇಮಕಾತಿಗೆ ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಪಕ್ಷದ ಇತರೆ ಒಬಿಸಿ ಶಾಸಕರು ಕೂಡ ದನಿಗೂಡಿಸಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ನೇಮಕ ತಡೆ ಹಿಡಿಯಲಾಗಿದೆ.

ನೇಮಕಕ್ಕೆ ಬ್ರೇಕ್ ಏಕೆ? 

• ಎಂಎಲ್‌ಸಿ ಡಿ.ಟಿ.ಶ್ರೀನಿವಾಸ್ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದರು 
• ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಅಧ್ಯಕ್ಷ ಹುದ್ದೆ ನೀಡಲಾಗಿತ್ತು 
• ಶ್ರೀನಿವಾಸ್ ನೇಮಕಕ್ಕೆ ಎಐಸಿಸಿಯಿಂದ ಯಾವುದೇ ಅನುಮೋದನೆ ಪಡೆದಿರಲಿಲ್ಲ . ಅಂಥವರ ನೇಮಕ ಏಕೆ ಎಂದು ಸಿಎಲ್‌ಪಿ ಸಭೆಯಲ್ಲಿ ಶಾಸಕರಿಂದ ತೀವ್ರ ಆಕ್ಷೇಪ 
• ಹಲವು ವರ್ಷಗಳಿಂದ ದುಡಿದವರಿಗೆ ಹುದ್ದೆ ಏಕೆ ಕೊಟ್ಟಿಲ್ಲ ಎಂದು ಪ್ರಶ್ನೆ ಬೆನ್ನಲ್ಲೇ ಎಐಸಿಸಿ ಒಬಿಸಿ ಘಟಕದ ಅಧ್ಯಕ್ಷರಿಂದ ನೇಮಕಾತಿಗೆ ತಡೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!