ಮುಖ್ಯಮಂತ್ರಿ ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಹೋಗಿದ್ದ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸಿನಕ್ಕೇ ವಿರೋಧ ವ್ಯಕ್ತವಾಗಿದೆ. ಹಲವು ನಾಯಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು (ಮಾ.01]: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಡೆಗೆ ಸ್ವ ಪಕ್ಷದಿಂದಲೇ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ ಕಿಸಾನ್ ಕಾಂಗ್ರೆಸ್‌ನ ಅಧ್ಯಕ್ಷ ಸಚಿನ್ ಮೀಗಾ ಅವರು, ನೀವು (ಸಿದ್ದರಾಮಯ್ಯ) ನೀಡಿರುವ ಸಂದೇಶವನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ನಾವು ಹತಾಶರಾಗಿದ್ದು, ಮುಂದೆ ಇಂತಹ ಸನ್ನಿವೇಶಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಿ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
undefined
ರಾಜಕೀಯ ಕ್ರಾಂತಿ: BL ಸಂತೋಷ್ ಭೇಟಿಯಾದ ಜೆಡಿಎಸ್ ಶಾಸಕ...
ಅರಮನೆ ಮೈದಾನದಲ್ಲಿ ನಡೆದ ಬಿ.ಎಸ್.ಯಡಿಯೂರಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ಬಗ್ಗೆ ಸಚಿನ್ ಮೀಗಾ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ತೋರಿದ್ದಾರೆ.
‘ನಾವು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಬಿಜೆಪಿ ನಾಯಕರ ವಿರುದ್ಧ ಹೋರಾಡಬೇಕಾಗಿದೆ. ಆದರೆ, ನಮ್ಮ ನಾಯಕರಾದ ನೀವು (ಸಿದ್ದರಾಮಯ್ಯ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದೀರಿ. ತಾವು ನಮ್ಮಂತಹ ಕಾಂಗ್ರೆಸ್ ಕಾರ್ಯಕರ್ತರಿಗೆ ಕಳುಹಿಸುತ್ತಿರುವ ಸಂದೇಶವನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಇಂತಹ ಸನ್ನಿವೇಶಗಳು ಮತ್ತೆ ಪುನರಾವರ್ತಿಸದಂತೆ ಜಾಗ್ರತೆ ವಹಿಸಲು ಮನವಿ ಮಾಡಿಕೊಳ್ಳುತ್ತೇನೆ. ನಾವು ಹತಾಶರಾಗಿದ್ದೇವೆ’ ಎಂದು ಹೇಳಿದ್ದಾರೆ.
ಮಾರ್ಚ್ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ