Karnataka Politics: 'ಅಭಿವೃದ್ಧಿಗಾಗಿ ಕಾಂಗ್ರೆಸ್ಸಿಗರು ಬಿಜೆಪಿಗೆ'

Published : Jun 10, 2022, 10:24 AM IST
Karnataka Politics: 'ಅಭಿವೃದ್ಧಿಗಾಗಿ ಕಾಂಗ್ರೆಸ್ಸಿಗರು ಬಿಜೆಪಿಗೆ'

ಸಾರಾಂಶ

*  ಬಹುತೇಕ ಕಾಂಗ್ರೆಸ್‌ ಪಕ್ಷದವರು ನಮ್ಮ ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡುತ್ತಿದ್ದಾರೆ *  ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷದ ಮುಖ್ಯ ಮುಖಂಡರೇ ಬಿಜೆಪಿಗೆ ಬಹುತೇಕರು ಬರಲಿದ್ದಾರೆ *  80 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ 

ಯಲಹಂಕ(ಜೂ.10):  ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪಕ್ಷದ ಮುಖ್ಯ ಮುಖಂಡರೇ ಬಿಜೆಪಿಗೆ ಬಹುತೇಕರು ಬರಲಿದ್ದಾರೆ ಎಂದು ಶಾಸಕ ಎಸ್‌.ಅರ್‌.ವಿಶ್ವನಾಥ್‌ ಹೇಳಿದರು.

ತಾಲೂಕಿನ ಬ್ಯಾಲಕೆರೆ, ಮಾದನಾಯಕನಹಳ್ಳಿ ಸೇರಿದಂತೆ ವಿವಿಧೆಡೆಯಲ್ಲಿ 80 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬಹುತೇಕ ಕಾಂಗ್ರೆಸ್‌ ಪಕ್ಷದವರು ನಮ್ಮ ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡುತ್ತಿದ್ದಾರೆ. ನಮಗೆ ಕೆಲಸಗಳು ಆಗಬೇಕು. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷದ ಮುಖ್ಯ ಮುಖಂಡರೇ ಬಿಜೆಪಿಗೆ ಬಹುತೇಕರು ಬರಲಿದ್ದಾರೆ ಎಂದರು.

ರಾಜ್ಯಸಭಾ ಚುನಾವಣೆ 2022: ಬಿಜೆಪಿ 45 ಶಾಸಕರು ಮತ ಚಲಾವಣೆ, ನಿರ್ಮಲಾ ಗೆಲವು ಅಧಿಕೃತ ಘೋಷಣೆ ಬಾಕಿ

ಮಾದನಾಯಕನಹಳ್ಳಿಯಿಂದ ಕಡಬಗೆರೆ ಕ್ರಾಸ್‌ವರೆಗೆ, ಗಂಗೊಂಡನಹಳ್ಳಿಯಿಂದ ಕಾಚೋಹಳ್ಳಿ ಮಾಗಡಿ ರಸ್ತೆಗೆ 18ಕೀ.ಮೀ ಉದ್ದದ 37 ಕೋಟಿ ವೆಚ್ಚದ ಡಾಂಬರೀಕರಣ, ಕೆಜಿ ಲಕ್ಕೇನಹಳ್ಳಿಯಲ್ಲಿ 38 ಕೋಟಿ ವೆಚ್ಚದ ಬಿಡಿಎ ಅನುದಾದಡಿಯಲ್ಲಿ ಕಾಂಕ್ರಿಟ್‌ ರಸ್ತೆ ಮತ್ತು ಚರಂಡಿ ಕಾಮಗಾರಿ, ಬ್ಯಾಲಕೆರೆಯಿಂದ ತರಬನಹಳ್ಳಿಯವರೆಗೆ 2.90 ಕೋಟಿ ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಹನುಮಯ್ಯ ಮತ್ತಿತರರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ