ನಾಯಕತ್ವ ಗೊಂದಲ: ಸೋನಿಯಾ ಗಾಂಧಿ ಓಕೆ ಎಂದರೆ ಸಿದ್ದು, ಡಿಕೆಶಿಗೆ ದೆಹಲಿಗೆ ಬುಲಾವ್‌?

Published : Nov 30, 2025, 11:50 AM IST
Congress Leadership

ಸಾರಾಂಶ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಶಾಸಕ ಶರತ್‌ ಬಚ್ಚೇಗೌಡ ಅವರೊಂದಿಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸಭೆ ನಡೆಸಿದ್ದಾರೆ.

ನವದೆಹಲಿ (ನ.30): ರಾಜ್ಯದ ನಾಯಕತ್ವ ಬದಲಾವಣೆ ಬಿಕ್ಕಟ್ಟಿಗೆ ಇತಿಶ್ರೀ ಹಾಡುವ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್‌ ವರಿಷ್ಠರು ಕಸರತ್ತು ಆರಂಭಿಸಿದ್ದಾರೆ. ಇದರ ಭಾಗವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಶಾಸಕ ಶರತ್‌ ಬಚ್ಚೇಗೌಡ ಅವರೊಂದಿಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸಭೆ ನಡೆಸಿದ್ದಾರೆ. ಈ ವೇಳೆ ರಾಹುಲ್‌ ಅವರು ರಾಜ್ಯದ ಕಾಂಗ್ರೆಸ್‌ ಬೆಳವಣಿಗೆಗಳು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು 43 ನಿಮಿಷ ಚರ್ಚೆ ನಡೆದಿದ್ದು, ಎಐಸಿಸಿ ಅಧ್ಯಕ್ಷ, ಶಾಸಕ, ಸಚಿವರು ಒಟ್ಟಾರೆ ಬೆಳವಣಿಗೆಗಳ ಚಿತ್ರಣವನ್ನು ರಾಹುಲ್‌ ಗಾಂಧಿ ಅವರಿಗೆ ಅರಿಕೆ ಮಾಡುವ ಪ್ರಯತ್ನ ನಡೆಸಿದ್ದಾರೆ. ಅಂತಿಮವಾಗಿ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ದೆಹಲಿಗೆ ಬರುವಂತೆ ಬುಲಾವ್‌ ನೀಡುವ ಸಾಧ್ಯತೆಗಳಿವೆ.

ಸುದೀರ್ಘ ಚರ್ಚೆ: ಖರ್ಗೆ ನಿವಾಸದಲ್ಲಿ ನಡೆದ ಚರ್ಚೆಯ ವೇಳೆ ರಾಹುಲ್‌ ಅವರು, ರಾಜ್ಯದ ವಿದ್ಯಮಾನಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಅವರ ಪ್ರಶ್ನೆಗಳಿಗೆ ಮಲ್ಲಿಕಾರ್ಜುನ ಖರ್ಗೆ ಮಾಹಿತಿ ನೀಡಿದ್ದಾರೆ. ಸೋನಿಯಾ ಗಾಂಧಿ ಅವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಮಾಡೋಣ ಎಂದು ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕೇವಲ ಸಿಎಂ- ಡಿಸಿಎಂ ಬದಲಾವಣೆ ಮಾತ್ರ ಅಲ್ಲ, ಕೆಪಿಸಿಸಿ ಅಧ್ಯಕ್ಷರ ಆಯ್ಕೆಗಳ ಬಗ್ಗೆ ರಾಹುಲ್‌ ಗಾಂಧಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಿ ಬಳಿಕ ಸಿಎಂ- ಡಿಸಿಎಂ ಅವರಿಗೆ ಮಾಹಿತಿ ನೀಡಿ ಒಂದೆರಡು ದಿನದಲ್ಲೇ ಇಬ್ಬರನ್ನೂ ದೆಹಲಿಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ಎಐಸಿಸಿ ಉನ್ನತ ಮೂಲಗಳು ಮಾಹಿತಿ ನೀಡಿವೆ.

ಸಭೆಯಲ್ಲಿ ಆಗಿದ್ದೇನು?

- ಕರ್ನಾಟಕ ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ ದಿಲ್ಲಿಯಲ್ಲಿ ಮಹತ್ವದ ಸಭೆ
- ಸಭೆಯಲ್ಲಿ ಖರ್ಗೆ, ರಾಹುಲ್‌, ಪ್ರಿಯಾಂಕ್‌ ಖರ್ಗೆ, ಶರತ್‌ ಬಚ್ಚೇಗೌಡ ಕೂಡ ಭಾಗಿ
- ಗೊಂದಲಗಳ ಬಗ್ಗೆ ಸೋನಿಯಾ ಗಾಂಧಿ ಅವರಿಗೆ ಮಾಹಿತಿ ನೀಡಲು ನಿರ್ಣಯ
- ಮೇಡಂ ಅಸ್ತು ಎಂದರೆ ಸಿದ್ದು, ಡಿಕೆಗೆ ಬುಲಾವ್‌. ಈ ಬಗ್ಗೆ 2 ದಿನದಲ್ಲಿ ನಿರ್ಣಯ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ