ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ, ಮಲ್ಲಿಕಾರ್ಜುನ ಖರ್ಗೆಗೆ ಅಧ್ಯಕ್ಷ ಪಟ್ಟ ಕೈತಪ್ಪುವ ಭೀತಿ!

By Suvarna NewsFirst Published Dec 2, 2022, 4:22 PM IST
Highlights

ಕಾಂಗ್ರೆಸ್ ಇತ್ತೀಚೆಗಷ್ಟೇ ಹರಸಾಹಸ ಪಟ್ಟು ಅಧ್ಯಕ್ಷೀಯ ಚುನಾವಣೆ ನಡೆಸಿತ್ತು. ಈ ಚುನಾವಣೆಯಲ್ಲಿ ನಿರೀಕ್ಷೆಯಂತೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದರು. ಇಷ್ಟೇ ಅಲ್ಲ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೇರಿ ಹಿಮಾಚಲ ಪ್ರದೇಶ ಹಾಗೂ ಇದೀಗ ಗುಜರಾತ್ ಚುನಾವಣೆ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಆದರೆ ಒಂದೇ ತಿಂಗಳಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಅಧ್ಯಕ್ಷ ಪಟ್ಟ ಕೈತಪ್ಪುವ ಭೀತಿ ಶುರುವಾಗಿದೆ.
 

ನವದೆಹಲಿ(ನ.02): ಬರೋಬ್ಬರಿ 24 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿಯೇತರ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.  ಬಂಡಾಯ, ಗುದ್ದಾಯ, ಆರೋಪ ಪ್ರತ್ಯಾರೋಪ, ಶಕ್ತಿ ಪ್ರದರ್ಶನಗಳ ನಡುವೆ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ನಡೆದಿತ್ತು. ಅಶೋಕ್ ಗೆಹ್ಲೋಟ್ ಬಂಡಾಯ, ಪ್ರತಿಸ್ಪರ್ಧಿ ಶಶಿ ತರೂರ್ ಕಡೆಗಣನೆ ಸೇರಿದಂತೆ ಹಲವು ಘಟನೆಗಳು ಕಾಂಗ್ರೆಸ್ ತಲೆನೋವಾಗಿ ಪರಿಣಮಿಸಿತ್ತು. ಎಲ್ಲವನ್ನೂ ಸುಧಾರಿಸಿಕೊಂಡ ಕಾಂಗ್ರೆಸ್ ಇದೀಗ ವಿಧಾನಸಭಾ ಚುನಾವಣೆಯತ್ತ ಗಮನಕೇಂದ್ರೀಕರಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದೇ ತಿಂಗಳಿಗೆ ಮಲ್ಲಿಕಾರ್ಜುನ ಖರ್ಗೆ ತಲೆನೋವು ಶುರುವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ. ಹೌದು, ರಾಜ್ಯಸಭೆಯಲ್ಲಿ ವಿರೋಧ ಪಕ್ಷ ನಾಯಕನಾಗಿ ಮಲ್ಲಿಕಾರ್ಜುನ್ ಖರ್ಗೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕಾಗಿದೆ.

ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಹೊಸ ಹುರುಪಿನೊಂದಿಗೆ ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಎದುರಿಸುತ್ತಿದೆ. ಇತ್ತ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಲೋಕಸಭಾ ಚುನಾವಣೆಗೆ ತಾಲೀಮು ಆರಂಭಿಸಿದ್ದಾರೆ.  ಆದರೆ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ  ರಾಜ್ಯಸಭೆಯ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಪಕ್ಷ ಯಾರನ್ನೂ ಆಯ್ಕೆ ಮಾಡಿಲ್ಲ. ಇದೀಗ ಖರ್ಗೆ ಮುಂದುವರಿಯಲಿದ್ದಾರೆ. ಕಾಂಗ್ರೆಸ್‌ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ಅನ್ನೋ ನಿಯಮ ಜಾರಿ ಮಾಡಿರುವ ಕಾರಣ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅನಿವಾರ್ಯವಾಗಿ ಕೆಳಗಿಳಿಯುವ ಸಾಧ್ಯತೆ ಇದೆ.

PM Modi Reply Ravana Jibe: ಕಾಂಗ್ರೆಸ್‌ ಎಂದಿಗೂ ರಾಮನನ್ನು ನಂಬಿಲ್ಲ, ನನ್ನ ನಿಂದನೆಗೆ ರಾವಣನ ತಂದಿದ್ದಾರೆ!

ಸೋನಿಯಾ ಗಾಂಧಿ ನಾಳೆ(ಡಿ.3) ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಗೆ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಜೈರಾಮ್ ರಮೇಶ್ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ರಾಜ್ಯಸಭೆ ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಪಿ ಚಿದಂಬರಂ ಹಾಗೂ ದಿಗ್ವಿಜಯ್ ಸಿಂಗ್ ಹೆಸರು ಕೇಳಿಬರುತ್ತಿದೆ. ಆದರೆ ಇವರಿಬ್ಬರನ್ನೂ ಈ ಸಭೆಗೆ ಆಹ್ವಾನಿಸಿಲ್ಲ. 

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆ ಸ್ಪರ್ಧಿಸಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  ಚಳಿಗಾಲದ ಅಧಿವೇಶನದ ವರೆಗೆ ಮಲ್ಲಿಕಾರ್ಜುನ ಖರ್ಗೆಯನ್ನೇ ರಾಜ್ಯಸಭಾ ವಿರೋಧ ಪಕ್ಷ ನಾಯಕನಾಗಿ ಮುಂದುವರಿಯುವ ಸಾಧ್ಯತೆ ಇದೆ. ಬಳಿಕ ಖರ್ಗೆ ಮುಂದುವರಿದರೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೊಸ ಮುಖ ಆಯ್ಕೆಯಾಗುವ ಸಾಧ್ಯತೆ ಇದೆ.

ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದು ರಾಜ್ಯಸಭಾ ವಿರೋಧ ಪಕ್ಷ ನಾಯಕನಾಗಿ ಮುಂದುವರಿದರೆ, ಇತ್ತ ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಅನ್ನೋ ಚರ್ಚೆ ಶುರುವಾಗಿದೆ. ಮೂಲಗಳ ಪ್ರಕಾರ ಕಾಂಗ್ರೆಸ್ ಮತ್ತೆ ಅಶೋಕ್ ಗೆಹ್ಲೋಟ್ ಅಧ್ಯಕ್ಷ ಪಟ್ಟ ನೀಡಲು ಮುಂದಾಗಿದೆ. ಇತ್ತ ಶಶಿ ತರೂರ್ ಹೆಸರು ಕೂಡ ಕೇಳಿಬರುತ್ತಿದೆ. ಆದರೆ ಜಿ23 ಗುಂಪಿನಲ್ಲಿ ಕಾಣಿಸಿಕೊಂಡಿರುವ ಶಶಿ ತರೂರ್‌ಗೆ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಕಡಿಮೆ ಇದೆ.

ಕೇಂದ್ರ ಸರ್ಕಾರ ಸಂಪೂರ್ಣವಾಗಿ ಆರ್‌ಎಸ್‌ಎಸ್‌ಗೆ ಶರಣಾಗಿದೆ, ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ!

ಇತ್ತ ಅಶೋಕ್ ಗೆಹ್ಲೋಟ್ ಅಧ್ಯಕ್ಷರಾದರೆ, ರಾಜಸ್ಥಾನ ಸಿಎಂ ಸ್ಥಾನ ಕಳೆದುಕೊಳ್ಳುವು ಸಾಧ್ಯತೆ ಇದೆ. ಇದು ಮತ್ತೊಂದು ಸುತ್ತಿನ ಜಟಾಪಟಿಗೆ ಕಾರಣವಾಗಲಿದೆ. ರಾಜಸ್ಥಾನದಲ್ಲಿ ಸಚಿನ್ ಪೈಲೆಟ್‌ಗೆ ಸಿಎಂ ಸ್ಥಾನ ನೀಡುವ ಈ ಹಿಂದಿನ ಪ್ರಯತ್ನಕ್ಕೆ ಕಾಂಗ್ರೆಸ್ ಕೈ ಹಾಕುವ ಸಾಧ್ಯತೆಗಳಿಲ್ಲ. ಇತ್ತ ಗೆಹ್ಲೋಟ್ ಸಿಎಂ ಸ್ಥಾನ ತ್ಯಜಿಸಲು ಸಿದ್ಧರಿಲ್ಲ.

click me!