ಸಿಎಂ ಹುದ್ದೆ ತಿಕ್ಕಾಟ ನಡುವೆಯೇ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಭರ್ಜರಿ ಲಾಬಿ

Published : May 16, 2023, 05:37 AM IST
ಸಿಎಂ ಹುದ್ದೆ ತಿಕ್ಕಾಟ ನಡುವೆಯೇ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಭರ್ಜರಿ ಲಾಬಿ

ಸಾರಾಂಶ

ಖರ್ಗೆ, ಸಿದ್ದು, ಡಿಕೆಶಿ ಮನೆಗೆ ಆಕಾಂಕ್ಷಿಗಳ ಪರೇಡ್‌, ಮಂತ್ರಿಗಿರಿ ನೀಡುವಂತೆ ದುಂಬಾಲು, ಡಿಕೆಶಿಗೆ ಜನ್ಮದಿನ ಶುಭ ಕೋರುವ ನೆಪದಲ್ಲಿ ಹಲವರ ಭೇಟಿ. 

ಬೆಂಗಳೂರು(ಮೇ.16):  ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ನಡುವೆ 10ಕ್ಕೂ ಹೆಚ್ಚು ಸಚಿವ ಸ್ಥಾನದ ಆಕಾಂಕ್ಷಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನೆಗಳಿಗೆ ಪರೇಡ್‌ ನಡೆಸಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಡಿ.ಕೆ. ಶಿವಕುಮಾರ್‌ ಅವರಿಗೆ ಶುಭಾಶಯ ಕೋರುವ ನೆಪದಲ್ಲಿ ಹಲವು ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ ಮಾಡಿದರು. ಈ ವೇಳೆ ತಮಗೆ ಸಚಿವ ಸ್ಥಾನ ನೀಡುವಂತೆ ಲಾಬಿ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಕೆ.ಎನ್‌.ರಾಜಣ್ಣಗೆ ಸಚಿವ ಸ್ಥಾನ ನೀಡಿ: ಸೈಯದ್‌ ಮನವಿ

ಇನ್ನು ಸೋಮವಾರ ಬೆಳಗ್ಗೆ ಕೆ.ಜೆ. ಜಾರ್ಜ್‌, ಜಮೀರ್‌ ಅಹಮದ್‌ ಖಾನ್‌, ಟಿ.ಬಿ. ಜಯಚಂದ್ರ, ವಿಜಯಾನಂದ ಕಾಶಪ್ಪನವರ್‌, ಶಿವಲಿಂಗೇಗೌಡ, ವಿನಯ ಕುಲಕರ್ಣಿ ಸೇರಿ ಹಲವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನದ ಬಗ್ಗೆ ಚರ್ಚೆ ನಡೆಸಿದ್ದಾರೆ. ಇವರಲ್ಲಿ ವಿನಯ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್‌ ಸೇರಿ ಹಲವರು ಶಿವಕುಮಾರ್‌ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಇನ್ನು ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ ಮಟ್ಟದಲ್ಲೂ ಲಾಬಿ ನಡೆಸಿದ್ದು, ಹಲವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಎಂಎಲ್‌ಸಿ ಪ್ರಕಾಶ್‌ ಹುಕ್ಕೇರಿ ಈಗಾಗಲೇ ದೆಹಲಿಗೆ ತೆರಳಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಪುತ್ರ ಗಣೇಶ್‌ ಹುಕ್ಕೇರಿ ಅಥವಾ ತಮಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ದಿಲ್ಲಿಯಲ್ಲೂ ಮಂತ್ರಿ ಸರ್ಕಸ್‌ ಯಾರ ಬಳಿಗೆ ಯಾರು?

ಖರ್ಗೆ: ಪುತ್ರ ಗಣೇಶ್‌ ಹುಕ್ಕೇರಿ ಅಥವಾ ತಮಗೆ ಸಚಿವ ಸ್ಥಾನ ಬೇಕೆಂದು ಪ್ರಕಾಶ್‌ ಹುಕ್ಕೇರಿ
ಸಿದ್ದು: ಜಾರ್ಜ್‌, ಜಮೀರ್‌, ಜಯಚಂದ್ರ, ಕಾಶಪ್ಪನವರ್‌, ಶಿವಲಿಂಗೇಗೌಡ ಸೇರಿ ಹಲವರು
ಡಿಕೆಶಿ: ವಿನಯ್‌ ಕುಲಕರ್ಣಿ, ಕಾಶಪ್ಪನವರ್‌ ಸೇರಿದಂತೆ ಹಲವರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಪ್ರೆಗ್ನಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ - ಯುವತಿ ಆತ್ಮ*ಹತ್ಯೆ