ವಕ್ಫ್‌ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಆಮಿಷವೊಡ್ಡಿದ್ದು ಕಾಂಗ್ರೆಸ್‌: ಮಾಣಿಪ್ಪಾಡಿ

By Kannadaprabha News  |  First Published Dec 16, 2024, 8:35 AM IST

ವಕ್ಫ್‌ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್‌ ಮಾಣಿಪ್ಪಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು 150 ಕೋಟಿ ರು. ಆಮಿಷವೊಡ್ಡಿದ್ದರು.
 


ಮಂಗಳೂರು (ಡಿ.16): ವಕ್ಫ್‌ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್‌ ಮಾಣಿಪ್ಪಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು 150 ಕೋಟಿ ರು. ಆಮಿಷವೊಡ್ಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಬಿಐ ತನಿಖೆ ಮಾಡಿಸಲಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಕ್ಕೆ ಸ್ವತಃ ಮಾಣಿಪ್ಪಾಡಿ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಸುಳ್ಳು. ಬಿ.ವೈ.ವಿಜಯೇಂದ್ರ ಅವರು ನನಗೆ 150 ಕೋಟಿ ರು. ಆಫರ್‌ ನೀಡಿರಲಿಲ್ಲ. ವಕ್ಫ್‌ ಆಸ್ತಿ ಅಕ್ರಮದ ವರದಿ ಮುಚ್ಚಿ ಹಾಕಲು ಕಾಂಗ್ರೆಸ್‌ನಿಂದಲೇ ನನಗೆ ಕೋಟಿ ಕೋಟಿ ಆಫರ್‌ ಬಂದಿತ್ತು.

ವರದಿ ಸಲ್ಲಿಕೆ ನಂತರ ಕಾಂಗ್ರೆಸ್‌ನ ಅನೇಕರು ನನಗೆ ಈ ಆಫರ್‌ ಮಾಡಿದ್ದರು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಿ, ಎಲ್ಲವೂ ಹೊರಗೆ ಬರುತ್ತೆ ಎಂದಿದ್ದಾರೆ. ವಕ್ಫ್‌ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ವಿಜಯೇಂದ್ರ 150 ಕೋಟಿ ರು. ಆಮಿಷವೊಡ್ಡಿದ್ದಾರೆಂದು ಮಾಣಿಪ್ಪಾಡಿ ಮಾಡಿರುವ ಆರೋಪ ಸಂಬಂಧ ಪ್ರಧಾನಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕು. ಬಿಜೆಪಿ ಸರ್ಕಾರದಲ್ಲೇ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಮಾಣಿಪ್ಪಾಡಿಯವರು ವಿಜಯೇಂದ್ರ ಸಂಬಂಧಿಸಿ ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು.

Tap to resize

Latest Videos

ಪ್ರಧಾನಿ ಮೋದಿ ಕೇವಲ 3 ತಾಸು ನಿದ್ದೆ ಮಾಡ್ತಾರೆ: ನಟ ಸೈಫ್‌ ಅಲಿ ಖಾನ್‌ ಪ್ರಶಂಸೆ

ಸಿಎಂ ಸಿದ್ದರಾಮಯ್ಯ ಅವರು ನೈಜ ವಿಚಾರವನ್ನು ಮುಚ್ಚಿಹಾಕಲು 150 ಕೋಟಿ ರು. ಆಫರ್‌ ವಿಷಯವನ್ನು ಹೇಳತೊಡಗಿದ್ದಾರೆ. ಇದರ ಬದಲು ಸಿದ್ದರಾಮಯ್ಯ ಅವರಿಗೆ ಅಲ್ಪಸಂಖ್ಯಾತರ ಮೇಲೆ ಕಾಳಜಿ ಇದ್ದರೆ ನನ್ನ ವರದಿಯನ್ನು ಸಿಬಿಐಗೆ ಹಸ್ತಾಂತರ ಮಾಡಲಿ. ನಾನು 7 ಸಾವಿರ ಪುಟಗಳ ವರದಿ ನೀಡಿದ್ದೆ. ಸಿಬಿಐ ತನಿಖೆ ಮಾಡಿದರೆ ಸಾವಿರಾರು ಪುಟಗಳಿಗೆ ವಿಸ್ತರಿಸಲಿದೆ. ಅಷ್ಟೊಂದು ಅಕ್ರಮಗಳು ನಡೆದಿವೆ. ರಾಜ್ಯದಲ್ಲಿ ಒಟ್ಟು 54 ಸಾವಿರ ಎಕರೆ ವಕ್ಫ್‌ ಆಸ್ತಿಯಲ್ಲಿ 27 ಸಾವಿರ ಎಕರೆಯಷ್ಟು ಒತ್ತುವರಿ ಆಗಿದೆ ಎಂದರು.

click me!