
ಶಿವಮೊಗ್ಗ(ಆ.29): ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಅಧ್ಯಕ್ಷರಾಗಿ ನಾಗರಾಜ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಅವರು ಆಯ್ಕೆಯಾಗಿದ್ದಾರೆ. ಇಂದು(ಗುರುವಾರ) ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು ಚುನಾಯಿತರಾಗಿದ್ದಾರೆ.
ಬೇಳೂರು ಆಪರೇಷನ್ ಸಕ್ಸಸ್
ಬೇಳೂರು ಗೋಪಾಲಕೃಷ್ಣ ಮಾಡಿದ ಆಪರೇಷನ್ ಸಕ್ಸಸ್ ಆಗಿದೆ. ಬಿಜೆಪಿ, ಜೆಡಿಎಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಅಧಿಕಾರ ಮಾತ್ರ ಕಾಂಗ್ರೆಸ್ ತೆಕ್ಕೆಗೆ ಜಾರಿಗದೆ. ಹೊಸನಗರ ಪಟ್ಟಣ ಪಂಚಾಯಿತಿಯ 11 ಸ್ಥಾನಗಳಲ್ಲಿ ನಾಲ್ಕು ಕಾಂಗ್ರೆಸ್ ನಾಲ್ಕು ಬಿಜೆಪಿ ಮೂರು ಜೆಡಿಎಸ್ ಸದಸ್ಯರಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಾಗರಾಜ್ ಗೆ ಬಿಜೆಪಿಯ ಇಬ್ಬರು ಜೆಡಿಎಸ್ ನ ಓರ್ವ ಸದಸ್ಯರು ಬೆಂಬಲಿಸುವ ಮೂಲಕ ಆಯ್ಕೆಯಾಗಿದ್ದಾರೆ.
ಭ್ರಷ್ಟಾಚಾರದಿಂದ ಮುಕ್ತವಾದರೆ ಸಹಕಾರ ಕ್ಷೇತ್ರ ಪ್ರಗತಿ: ಸಂಸದ ಬಿ.ವೈ.ರಾಘವೇಂದ್ರ
ತಹಶೀಲ್ದಾರ್ ಶ್ರೀಮತಿ ರಶ್ಮಿ ಹಾಲೇಶ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ಹೊಸನಗರ ಪಟ್ಟಣದ 11 ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.