
ಬೆಂಗಳೂರು, (ಏ.27): ಬೆಂಗಳೂರಿನ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕೊರೋನಾ ನೆಗೆಟಿವ್ ಬಂದಿದೆ.
ಇತ್ತೀಚೆಗೆ ಕೊರೋನಾ ವೈರಸ್ ಸೋಂಕಿತೆ ಮಹಿಳೆಯೊಬ್ಬರು ಮೃತಪಟ್ಟಿದ್ದಾಗ, ಅವರ ಶವ ಸಂಸ್ಕಾರದಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಭಾಗಿಯಾಗಿದ್ದರು.
ಪಾದರಾಯನಪುರ ಗಲಭೆ: ಜಮೀರ್‌ಗೆ ಫುಲ್ ಕ್ಲಾಸ್ ತೆಗೆದುಕೊಂಡ ಬಾಸ್...!
ಈ ಹಿನ್ನೆಲೆಯಲ್ಲಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ನಗೆಟಿವ್ ಬಂದಿರುವ ಬಗ್ಗೆ ಟ್ವೀಟ್ ಮೂಲಕ ಸಚಿವ ಜಮೀರ್ ಅಹಮ್ಮದ್ ಸ್ಪಷ್ಟನೆ ನೀಡಿದ್ದಾರೆ.
ಬಲ ಬಂದಿದೆ ಎಂದ ಜಮೀರ್
ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಸಂಚಾರ ಮಾಡಿದ್ದೇನೆ. ಜನರ ಒಡನಾಟದಲ್ಲಿದ್ದೇನೆ. ಮೊನ್ನೆ ಅಗತ್ಯ ಮುಂಜಾಗ್ರತೆಯೊಂದಿಗೆ ಕೊರೋನಾಯಿಂದ ಸಾವಿಗೀಡಾದ ಮಹಿಳೆಯ ಅಂತ್ಯ ಸಂಸ್ಕಾರದಲ್ಲೂ ಭಾಗವಹಿಸಿದ್ದೆ. ಕೊರೋನಾವೆಂಬ ಮಾರಕ ಕಾಯಿಲೆ ಯಾರಿಗೆ ಬೇಕಾದರೂ ಹಬ್ಬುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದಷ್ಟೇ ಅಲ್ಲ ನನ್ನಿಂದ ಇತರರಿಗೆ ಬೇರೆ ಯಾವ ರೀತಿಯ ತೊಂದರೆಯಾಗಬಾರದು. ಆ ಉದ್ದೇಶದಿಂದ ಸ್ವತಃ ನಾನೇ ಕೊರೋನಾ ಪರೀಕ್ಷೆ ಮಾಡಿಸಿಕೊಂಡೆ. ವರದಿಯಲ್ಲಿ ನೆಗೆಟಿವ್ ಬಂದಿದೆ. ಇದರಿಂದ ಕಷ್ಟದಲ್ಲಿರುವ ಜನರಿಗೆ ಇನ್ನಷ್ಟು ಸಹಾಯ ಮಾಡಲು ನನಗೆ ಬಲ ಬಂದಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸ್ ಹಾಗೂ ವೈದ್ಯರ ಮೇಲೆ ಹಲ್ಲೆ ಯತ್ನ ಸಂಬಂಧ ಜಮೀರ್ ಅಹ್ಮದ್ ಪರೋಕ್ಷವಾಗಿ ಆರೋಪಿಗಳ ಪರ ಬ್ಯಾಟಿಂಗ್ ಮಾಡಿದ್ದರು. ಇದು ರಾಜ್ಯಾದ್ಯಂತೆ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಮೇಲೆ ದೇಶದ್ರೋಹಿ ಕೇಸ್ ದಾಖಲಿಸಬೇಕೆಂಬ ಆಗ್ರಹಗಳು ವ್ಯಕ್ತವಾಗಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.