ಬೆಳಗಾವಿ ಪರಿಷತ್ ಜಿದ್ದಾಜಿದ್ದಿ, ಅಭ್ಯರ್ಥಿ ಘೋಷಣೆ ಮೊದಲೇ ಲಕ್ಷ್ಮೀ-ಜಾರಕಿಹೊಳಿ ಭರ್ಜರಿ ಪ್ರಚಾರ

By Suvarna News  |  First Published Nov 18, 2021, 1:36 AM IST

* ರಾಜ್ಯದಲ್ಲಿ ರಂಗೇರಿದ ವಿಧಾನ ಪರಿಷತ್ ಚುನಾವಣೆ
* ಅಭ್ಯರ್ಥಿಗಳ ಆಯ್ಕೆ ಬಿಜೆಪಿ-ಕಾಂಗ್ರೆಸ್ ನಿರತ
* ಅಭ್ಯರ್ಥಿ ಘೋಷಣೆಗೂ ಮೊದಲೇ ಬೆಳಗಾವಿಯಲ್ಲಿ ಭರ್ಜರಿ ಪ್ರಚಾರ


ಬೆಳಗಾವಿ, (ನ.18): ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ  (MLC Election)ರಂಗೇರಿದ್ದು, ಕಾಂಗ್ರೆಸ್(Congress), ಬಿಜೆಪಿ9BJP) ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಆದ್ರೆ,  ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ಬೆಳಗಾವಿಯಲ್ಲಿ (Belagavi) ಭರ್ಜರಿ ಪ್ರಚಾರ ಶುರುವಾಗಿದೆ.

ಹೌದು....ಕಾಂಗ್ರೆಸ್‌ನಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹಾಗೂ ಬಿಜೆಪಿಯಿಂದ ರಮೇಶ್ ಜಾರಕಿಹೊಳಿ (Ramesh Jarkiholi) ಪ್ರಚಾರ ಶುರು ಮಾಡಿಕೊಂಡಿದ್ದಾರೆ. 

Latest Videos

undefined

ಪರಿಷತ್‌ ಚುನಾವಣೆಗೆ 98000 ಮತದಾರರು : ಚುನಾವಣೆ ಆಯೋಗ

ಟಿಕೆಟ್ ಘೋಷಣೆಗೂ ಮೊದಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪರವಾಗಿ ಪ್ರಚಾರ ಕೈಗೊಂಡಿದ್ರೆ, ಲಕ್ಷ್ಮೀ ಹೆಬ್ಬಾಳ್ಕರ್ ಚನ್ನರಾಜ ಹಟ್ಟಿಹೊಳಿ ಪರ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.

ಅಭ್ಯರ್ಥಿಗಳ ಘೋಷಣೆಯೇ ಆಗಿಲ್ಲ
ಯೆಸ್‌ ಬೆಳಗಾವಿ ವಿಧಾನ ಪರಿಷತ್ ಚುನಾವಣೆಗೆ ಇನ್ನೂ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಅಭ್ಯರ್ಥಿ ಘೋಷಣೆಯಾಗಿಲ್ಲ, ಆದ್ರೆ, ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ ಆಗಲೇ ಅಭ್ಯರ್ಥಿಗಳ ಆಯ್ಕೆ ಮಾಡಿಕೊಂಡು ಅವರು ಪರವಾಗಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಬಿಜೆಪಿಯಿಂದ ಲಖನ್ ಜಾರಕಿಹೊಳಿ?
ಡಿಸೆಂಬರ್ 10ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಟಿಕೆಟ್ ಘೋಷಣೆ ಮೊದಲೇ ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಗ್ರಾಮಪಂಚಾಯಿತಿ ಸದಸ್ಯರನ್ನು ಭೇಟಿಯಾಗಿ ಲಖನ್ ಜಾರಕಿಹೊಳಿ ಪರ ಪ್ರಚಾರ ನಡೆಸಿದ್ದಾರೆ.

ಖಾನಾಪುರದ ಹೋಟೆಲ್ ನಲ್ಲಿ ಮಾಜಿ ಶಾಸಕ ಅರವಿಂದ ಪಾಟೀಲ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮಹಾಂತೇಶ ಕವಟಗಿಮಠ ಅವರಿಗೆ ಒಂದು ಮತ, ಸಹೋದರ ಲಖನ್ ಗೆ ಒಂದು ಮತ ನೀಡುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆನ್ನಲಾಗಿದೆ.

ಎರಡು ದಿನಗಳ ಹಿಂದೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ದ್ವಿಸದಸ್ಯ ಕ್ಷೇತ್ರದಿಂದ ಸೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಎರಡನೇ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ನಿಂದ ಚನ್ನರಾಜ ಹಟ್ಟಿಹೊಳಿ?
ಬೆಳಗಾವಿ ವಿಧಾನ ಪರಿಷತ್ ಚುನಾವಣೆಗೆ  ಕಾಂಗ್ರೆಸ್‌ನಿಂದ ಚನ್ನರಾಜ ಹಟ್ಟಿಹೊಳಿ ಅಭ್ಯರ್ಥಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಯಾಕಂದ್ರೆ ಈಗಾಗಲೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚನ್ನರಾಜ ಹಟ್ಟಿಹೊಳಿ ಅವರೇ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಎಂದು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನ ಹಂಚಿಕೊಂಡಿದ್ದಾರೆ.

click me!