* ಬರುವ 2023ರ ವಿಧಾನಸಭಾ ಚುನಾವಣೆ ಬಗ್ಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಮಾತು
* ಮುಂದಿನ ಸಿಎಂ ಬಗ್ಗೆ ಪ್ರತಿಕ್ರಿಯೆ
* ಮತ್ತೆ ಕಾಂಗ್ರೆಸ್ ಅಧಿಕಾರ ತರುವ ಪ್ರಯತ್ನ ಮಾಡಲಾಗುವುದು ಎಂದು ವಿ
ಬೆಳಗಾವಿ, (ಜುಲೈ.16): ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಬೆಳಗಾವಿಯಲ್ಲಿ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಬೆಂಬಲಿತ ನಾಯಕರನ್ನು ಕಾಂಗ್ರೆಸ್‌ಗೆ ಕರೆ ತರಲಾಗುವದು ಎಂದರು.
ಸದಾನಂದಗೌಡ್ರನ್ನ ಭೇಟಿಯಾದ ಶ್ರೀರಾಮುಲು, ಜನಾರ್ದನ ರೆಡ್ಡಿ
ಲಿಂಗಾಯತ ನಾಯಕರನ್ನು ಕಾಂಗ್ರೆಸ್‌ನಲ್ಲಿ ಕಡೆಗಣನೆ ಮಾಡುತ್ತಿರುವ ವಿಷಯವನ್ನು ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್‌ಗೆ ತಿಳಿಸುವ ಕಾರ್ಯ ಮಾಡಲಾಗಿದೆ. ವಿರೇಂದ್ರ ಪಾಟೀಲ್ ಬಳಿಕ ಕಾಂಗ್ರೆಸ್‌ಗೆ ಸದ್ಯ ಹಿನ್ನಡೆಯಾಗಿದೆ. ಹಿರಿಯ ಕಾಂಗ್ರೆಸ್ ಲಿಂಗಾಯತ ನಾಯಕರ ಸಲಹೆ ಪಡೆದು ಮತ್ತೆ ಕಾಂಗ್ರೆಸ್ ಅಧಿಕಾರ ತರುವ ಪ್ರಯತ್ನ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸ್ವಯಂ ಘೋಷಿತ ನಾನೇ ಮುಖ್ಯಮಂತ್ರಿ, ನಾನೇ ಲಿಂಗಾಯತ ನಾಯಕ ಎಂದು ಹೇಳಲು ಸಾಧ್ಯವಿಲ್ಲ. ಅದು ಜನ ಬಯಸಬೇಕು ಎಂದ ಅವರು, ಕಾಂಗ್ರೆಸ್‌ಗೆ ಮೊದಲು ಜನಾದೇಶ ಬರಬೇಕು. 150 ಕ್ಷೇತ್ರಗಳನ್ನು ಗೆಲ್ಲಬೇಕು. ಸಿದ್ದರಾಮಯ್ಯನವರ ಆಡಳಿತದಲ್ಲಿ ಉತ್ತಮವಾದ ಸ್ಥಿರವಾದ ಆಡಳಿತ ನೀಡಿದ್ದರು. ಆ ನಿಟ್ಟಿನಲ್ಲಿ ಪಕ್ಷ ಅಧಿಕಾರಕ್ಕೆ ಬರಲಿ ಮುಂದೆ ಸಿಎಂ ವಿಷಯ. ನಮ್ಮಲ್ಲಿ ಹೈಕಮಾಂಡ್, ಕಾಂಗ್ರೆಸ್ ಶಾಸಕರು ಹೇಳಬೇಕು. ಸ್ವಯಂ ಘೋಷಣೆ ಮಾಡಿಕೊಂಡರೆ ಸಾಲದು ಎಂದು ತೀಕ್ಷ್ಣ ವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.