ಇಲ್ಲಿಂದ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯಗೆ ಆಹ್ವಾನ ಕೊಟ್ಟ ಶಾಸಕ!

Published : Mar 28, 2021, 07:07 PM IST
ಇಲ್ಲಿಂದ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯಗೆ ಆಹ್ವಾನ ಕೊಟ್ಟ ಶಾಸಕ!

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರ ಜಿಲ್ಲೆಯಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಕೋಲಾರ, (ಮಾ.28): ಜಿಲ್ಲೆಯ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರನ್ನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ಒತ್ತಾಯಿಸಿದ್ದೇವೆ ಎಂದು ಬಂಗಾರಪೇಟೆ ಶಾಸಕ ಎಸ್​.ಎನ್​.ನಾರಾಯಣಸ್ವಾಮಿ ಹೇಳಿದರು. 

ಇಂದು (ಭಾನುವಾರ) ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ನಾರಾಯಣಸ್ವಾಮಿ, ಕೋಲಾರ ಜಿಲ್ಲೆಯಿಂದ ಸ್ಪರ್ಧಿಸುವಂತೆ ಶಾಸಕ ರಮೇಶ್ ಕುಮಾರ್,ಎಂಎಲ್​ಸಿ ನಜೀರ್ ಅಹ್ಮದ್, ಮಾಲೂರು ಶಾಸಕ ನಂಜೇಗೌಡ ಎಲ್ಲರೂ ಕೂಡಿ ಮನವಿ ಮಾಡಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಒದಗಿಸಿದ್ದಾರೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಬೇಕು ಎಂದು ನಾವೆಲ್ಲರೂ ಕೂಡಿ ಒತ್ತಾಯಿಸಿದ್ದೇವೆ ಎಂದರು.

'ಈ ಬಾರಿ ಸಿದ್ದರಾಮಯ್ಯ ಸೋಲು ಖಚಿತ'

ಆದ್ರೆ, ಈಗಾಗಲೇ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಪರ್ಧೆ ಮಾಡುತ್ತೇನೆಂದು ಘೋಷಣೆ ಮಾಡಿದ್ದಾರೆ. ಇದೀಗ ಕೆಲ ಶಾಸಕರು ಸಿದ್ದರಾಮಯ್ಯನವರಿಗೆ ಕ್ಷೇತ್ರ ತ್ಯಾಗ ಮಾಡಿಕೊಡಲು ಮುಂದಾಗಿದ್ದಾರೆ. ಜಮೀರ್ ಅಹಮ್ಮದ್ ಖಾನ್ ತಮ್ಮ ಬೆಂಗಳೂರಿನ ಚಾಮರಾಜಪೇಟೆ ತ್ಯಾಗಕ್ಕೆ ಸಿದ್ಧರಾಗಿದ್ದಾರೆ. ಇದೀಗ ನಾರಾಯಣಸ್ವಾಮಿ ಅವರು ಕೋಲಾರಕ್ಕೆ ಆಹ್ವಾನ ಕೊಟ್ಟಿದ್ದಾರೆ.

ಆದ್ರೆ, ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಸ್ಪರ್ಧೆ ಮಾಡುವುದಾಗಿ ಈ ಹಿಂದೆ ಹೇಳಿದ್ದಾರೆ. ಆದ್ರೆ, ಚುನಾವಣೆ ಸಂದರ್ಭದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೋ ಎನ್ನುವುದನ್ನು ಕಾದುನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಆಗಮನ, ರಾಜ್ಯದ 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್!
Modern Muslim League: ಕಾಂಗ್ರೆಸ್‌ ಆಧುನಿಕ ಮುಸ್ಲಿಂ ಲೀಗ್‌; ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ!