
ಹೈದರಾಬಾದ್ : 10 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂಬ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿಕೆಯಿಂದ ಕಾಂಗ್ರೆಸ್‌ನ ಶಾಸಕರೊಬ್ಬರು ಅಸಮಾಧಾನಗೊಂಡಿದ್ದು, ಇದು ಪಕ್ಷದ ನೀತಿಗೆ ವಿರುದ್ಧ ಎಂದು ಕಿಡಿ ಕಾರಿದ್ದಾರೆ.
2023ರಲ್ಲಿ ಸಿಎಂ ಆದಾಗಿನಿಂದ ರೇವಂತ್ ವಿರುದ್ಧ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವುದು ಇದೇ ಮೊದಲು. ಶುಕ್ರವಾರ ನಾಗರಕುರ್ನೂಲ್ ಜಿಲ್ಲೆಯಲ್ಲಿ ಮಾತನಾಡುತ್ತಿದ್ದ ಸಿಎಂ ರೆಡ್ಡಿ, ‘ನಾನೇ 10 ವರ್ಷ(2023-2034) ಮುಖ್ಯಮಂತ್ರಿಯಾಗಿ ಇರುತ್ತೇನೆ’ ಎಂದು ಹೇಳಿದ್ದರು.
ಇದಕ್ಕೆ ನಲಗೊಂಡಾ ಜಿಲ್ಲೆಯ ಮನುಗೋಡೆ ಶಾಸಕ ರಾಜ್ ಗೋಪಾಲ್ ರೆಡ್ಡಿ ಪ್ರತಿಕ್ರಿಯಿಸಿ, ‘ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್‌ನಲ್ಲಿ, ಮುಖ್ಯಮಂತ್ರಿಯನ್ನು ಹೈಕಮಾಂಡ್ ನಿರ್ದೇಶನದಂತೆ ಪ್ರಜಾಸತ್ತಾತ್ಮಕವಾಗಿ ಆಯ್ಕೆ ಮಾಡಲಾಗುತ್ತದೆ. ತೆಲಂಗಾಣವನ್ನು ಸ್ವಂತ ಸಾಮ್ರಾಜ್ಯವಾಗಿಸಿಕೊಳ್ಳಲು ನಿಜವಾದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಅನುವು ಮಾಡಿಕೊಡುವುದಿಲ್ಲ’ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಮೀಸಲು ಶೇ.42ಕ್ಕೆ ಹೆಚ್ಚಳ: ತೆಲಂಗಾಣ
ಪ್ರಸ್ತುತ ರಾಜ್ಯದಲ್ಲಿ ಸರ್ಕಾರಿ ಉದ್ಯೋಗ, ಶಿಕ್ಷಣ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗ (ಬಿ.ಸಿ.)ಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಶೇ.23ರಿಂದ ಶೇ.42ಕ್ಕೆ ಏರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಜಾತಿಗಣತಿ ನಡೆಸಿ ಅದರ ಅಂಕಿ ಅಂಶಗಳನ್ನು ಬಹಿರಂಗಪಡಿಸಿದ ಬೆನ್ನಲ್ಲೇ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
‘ಪ್ರಸ್ತುತ ಹಿಂದುಳಿದ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಶೇ.23ರಿಂದ ಶೇ.42ಕ್ಕೆ ಏರಿಸಲಾಗುವುದು. ನಾವು ಇದನ್ನು ಧರ್ಮದ ಆಧಾರದ ಮೇಲೆ ಜಾರಿಗೆ ತರುತ್ತಿಲ್ಲ, ಬದಲಾಗಿ ಜಾತಿಯ ಆಧಾರದ ಮೇಲೆ ಜಾರಿಗೆ ತರುತ್ತಿದ್ದೇವೆ’ ಎಂದು ಹೇಳಿದರು.
ಈ ಮೊದಲು ಶೇ.34ರಷ್ಟಿದ್ದ ಮೀಸಲಾತಿಯನ್ನು ಹಿಂದಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಶೇ.23ಕ್ಕೆ ಇಳಿಸಿದ್ದರು. ರೇವಂತ್ ರೆಡ್ಡಿ ಅದನ್ನೀಗ ಪುನಃ 42ಕ್ಕೆ ಏರಿಸಲು ಮುಂದಾಗಿದ್ದಾರೆ.
ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ. ಆದರೆ ಉದ್ಯೋಗಿಗಳ ಕೆಸಲದ ಅವಧಿ ವಾರಕ್ಕೆ 48 ಗಂಟೆ ಮೀರಬಾರದು ಎಂದು ಸೂಚಿಸಿದೆ. ರಾಜ್ಯದಲ್ಲಿ ಉದ್ಯಮ ಸ್ನೇಹಿ ನೀತಿ ಜಾರಿ ನಿಟ್ಟಿನಲ್ಲಿ ಈ ಅನುಮತಿ ನೀಡಲಾಗಿದೆ.
ಅಂಗಡಿಗಳನ್ನು ಹೊರತು ಪಡಿಸಿ ಉಳಿದ ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಮಿಕರ ಸುರಕ್ಷತೆಯ ಎಲ್ಲಾ ನಿಯಮಗಳಿಗೆ ಒಳಪಟ್ಟು ಉದ್ಯೋಗಿಗಳು ನಿತ್ಯ 10 ಗಂಟೆ ಕೆಲಸ ಮಾಡುವ ಪ್ರಸ್ತಾವನೆಗೆ ಸರ್ಕಾರ ಅನುಮತಿ ನೀಡಿದೆ. ಜೊತೆಗೆ ವಾರಕ್ಕೆ 48 ಗಂಟೆಗಳ ಮಿತಿ ಹೇರಿರುವ ಸರ್ಕಾರ ಅಧಿಕ ಅವಧಿ ಕೆಲಸ ಮಾಡಿಸಿಕೊಂಡರೆ ಹೆಚ್ಚಿನ ವೇತನವನ್ನು ನೀಡಬೇಕು ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.