ಆರ್‌ಎಸ್‌ಎಸ್‌ನವರು ಬ್ರಿಟಿಷರ ಏಜೆಂಟರಾಗಿ ಕೆಲಸ ಮಾಡಿದವರು: ಜಮೀರ್ ಅಹ್ಮದ್

By Govindaraj S  |  First Published Jul 25, 2022, 9:51 PM IST

‘ರಾಜ್ಯದಲ್ಲಿ ಬಿಜೆಪಿ ಹಿಂದೂ-ಮುಸ್ಲಿಂರ ಮಧ್ಯೆ ವಿಷಬೀಜ ಬಿತ್ತಿ ಭಾವೈಕ್ಯತೆಗೆ ಧಕ್ಕೆ ತರುತ್ತಿದೆ. ಬ್ರಿಟಿಷರ ಒಡೆದಾಳುವ ನೀತಿಯನ್ನೇ ಆರ್‌ಎಸ್‌ಎಸ್‌ ಜೊತೆಗೆ ಸೇರಿ ಬಿಜೆಪಿ ಮಾಡುತ್ತಿದೆ. ಆರ್‌ಎಸ್‌ಎಸ್‌ನವರು ಬ್ರಿಟಿಷರ ಏಜೆಂಟರಾಗಿ ಕೆಲಸ ಮಾಡಿದವರು. 


ವರದಿ: ಪವನ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾವೇರಿ 

ಹಾವೇರಿ (ಜು.25): ‘ರಾಜ್ಯದಲ್ಲಿ ಬಿಜೆಪಿ ಹಿಂದೂ-ಮುಸ್ಲಿಂರ ಮಧ್ಯೆ ವಿಷಬೀಜ ಬಿತ್ತಿ ಭಾವೈಕ್ಯತೆಗೆ ಧಕ್ಕೆ ತರುತ್ತಿದೆ. ಬ್ರಿಟಿಷರ ಒಡೆದಾಳುವ ನೀತಿಯನ್ನೇ ಆರ್‌ಎಸ್‌ಎಸ್‌ ಜೊತೆಗೆ ಸೇರಿ ಬಿಜೆಪಿ ಮಾಡುತ್ತಿದೆ. ಆರ್‌ಎಸ್‌ಎಸ್‌ನವರು ಬ್ರಿಟಿಷರ ಏಜೆಂಟರಾಗಿ ಕೆಲಸ ಮಾಡಿದವರು. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಕೊಡುಗೆಯಿದೆ. ನಾವೂ ಹಿಂದೂಸ್ತಾನಿಗಳೇ. ಈ ಕಾರಣಕ್ಕೇ ‘ಸಾರೇ ಜಹಾಂಸೆ ಅಚ್ಛಾ ಹಿಂದೂಸ್ತಾನ್ ಹಮಾರಾ’ ಎನ್ನುವ ಮೂಲ ಮಂತ್ರವನ್ನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿದರು.

Latest Videos

undefined

ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಗೆ ಇಂದು ಹಾವೇರಿಗೆ ಆಗಮಿಸಿದ್ದ ಜಮೀರ್ , ಸಭೆಯಲ್ಲಿ ಅಲ್ಪಸಂಖ್ಯಾತರನ್ನುದ್ದೇಶಿಸಿ ಮಾತನಾಡಿದರು. ‘ಸರ್ವ ಜನಾಂಗದ ಸಮೃದ್ಧಿಯ ಆಡಳಿತ ನೀಡಿದ ಸಿದ್ದರಾಮಯ್ಯ ಅವರು ನಮ್ಮೆಲ್ಲರ ನಾಯಕರು. ಅವರೆಂದೂ ಜನ್ಮದಿನ ಆಚರಿಸಿಕೊಂಡವರಲ್ಲ. 75ನೇ ವರ್ಷಕ್ಕೆ ಅವರು ಕಾಲಿಡುತ್ತಿರುವ ಈ ಸಂಭ್ರಮವನ್ನು ನಾವೆಲ್ಲಾ ನಾಡಹಬ್ಬದ ರೀತಿ, ನಮ್ಮೆಲ್ಲರ ಜನ್ಮದಿನವೆಂದು ಆಚರಿಸಬೇಕು’ ಎಂದು ಶಾಸಕ ಜಮೀರ ಅಹಮದ್‌ ಖಾನ್ ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವ ಆಚರಣೆ ಪೂರ್ವಭಾವಿಯಾಗಿ ನಗರದ ಶಿವಶಕ್ತಿ ಪ್ಯಾಲೇಸ್‍ನಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. 

ನಾನು ಆದಿಚುಂಚನಗಿರಿ ಮಠದ ಸ್ವಾಮೀಜಿ ಶಿಷ್ಯ, ರಾಜಕೀಯಕ್ಕೆ ಬರಲು ಅವರೇ ಕಾರಣ: ಜಮೀರ್ ಟಾಂಗ್

ಸಿದ್ದರಾಮಯ್ಯ ಅವರು ಕುರುಬ ಸಮುದಾಯದವರಾದರೂ ಎಲ್ಲರಿಗಿಂತಲೂ ಅಲ್ಪಸಂಖ್ಯಾತರ ಮೇಲೆ ಹೆಚ್ಚು ಪ್ರೀತಿ ಹೊಂದಿದ್ದರು. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದ ಕೀರ್ತಿಯೂ ಅವರದಾಗಿದೆ. ಹೀಗಾಗಿ ಅವರ ಜನ್ಮದಿನವನ್ನು ನಮ್ಮೆಲ್ಲರ ಹುಟ್ಟುಹಬ್ಬ ಎಂದು ಭಾವಿಸಬೇಕು. ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯುವ ಅಮೃತ ಮಹೋತ್ಸವಕ್ಕೆ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಐತಿಹಾಸಿಕ ದಾಖಲೆಯಾಗಬೇಕು ಎಂಬ ಆಶಯ ನನ್ನದಾಗಿದೆ. 

ಈಗಾಗಲೇ ನಾನು ರಾಜ್ಯದ ವಿವಿಧೆಡೆ ಪ್ರವಾಸ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿದ್ದು, ಸಾಕಷ್ಟು ಅಭಿಮಾನಿಗಳು ಪಾದಯಾತ್ರೆ ಮೂಲಕ ಕಾರ್ಯಕ್ರಮಕ್ಕೆ ಬರುವುದಾಗಿ ವಾಗ್ದಾನ ಮಾಡಿದ್ದಾರೆ ಎಂದರು. ಮಾಜಿ ಶಾಸಕ ಸಯ್ಯದ್ ಅಜೀಮಪೀರ್ ಖಾದ್ರಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯನವರು ಯಾವುದೇ ಒಂದು ಸಮಾಜಕ್ಕೆ ಸೀಮಿತ ನಾಯಕರಲ್ಲ. ಅವರ ಸುದೀರ್ಘ ರಾಜಕೀಯ ಜೀವನದಲ್ಲಿ ಜನ್ಮದಿನ ಆಚರಿಸಿಕೊಂಡಿಲ್ಲ. ಅವರ ಅಭಿಮಾನಿಗಳೆಲ್ಲ ಸೇರಿಕೊಂಡು 75ನೇ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಇದು ದೇಶದಲ್ಲಿಯೇ ಐತಿಹಾಸಿಕ ಕಾರ್ಯಕ್ರಮವಾಗಲಿದೆ. 

Karnataka Politics ಯಡಿಯೂರಪ್ಪ ಬೆನ್ನಲ್ಲೇ ಕಾಂಗ್ರೆಸ್‌ ನಾಯಕನಿಂದ ಪುತ್ರನಿಗೆ ಕ್ಷೇತ್ರ ತ್ಯಾಗ

ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಅವರು ಕೊಟ್ಟ ಯೋಜನೆಗಳು ಎಲ್ಲರನ್ನು ತಲುಪಿವೆ. ಅವರೇ ಮತ್ತೇ ಸಿಎಂ ಆಗಬೇಕು ಎಂಬ ಕನಸನ್ನು ಎಲ್ಲರೂ ಕಾಣುತ್ತಿದ್ದಾರೆ ಎಂದರು. ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಜ್ಯಾತ್ಯತೀತ ಶಕ್ತಿಗೆ ಅಲ್ಪಸಂಖ್ಯಾತರು ಬಲು ತುಂಬುತ್ತಾ ಬಂದಿದ್ದೀರಿ. ಸಿದ್ದರಾಮಯ್ಯ ಜಾತಿ ಸಮುದಾಯದ ನಾಯಕರಲ್ಲ. ಅವರು ಸರ್ವರ ನಾಯಕರು. ಅಧಿಕಾರದಲ್ಲಿದ್ದಾಗ ಎಲ್ಲರಿಗೂ ಯೋಜನೆಗಳನ್ನು ಕೊಟ್ಟಿದ್ದಾರೆ. ಬಿಜೆಪಿಯವರು ರಾಜ್ಯದಲ್ಲಿ ಒಡಕು, ಅಜಾಗ್ರತೆ ಹುಟ್ಟು ಹಾಕುತ್ತಿದ್ದಾರೆ. ಇನ್ನು ಮುಂದಿನ ಆರು ತಿಂಗಳ ಅವಧಿಯಲ್ಲಿ ಹೆಚ್ಚಿನ ವಿಷಬೀಜ ಬಿತ್ತುವ ಕೆಲಸ ಮಾಡಬಹುದು. ಅದಕ್ಕೆ ಯಾರು ಆಸ್ಪದ ನೀಡಬಾರದು ಎಂದರು.

click me!