
ಬೆಂಗಳೂರು, (ಆ.18): ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೂ ಕೊರೋನಾ ವೈರಸ್ ದೃಢಪಟ್ಟಿದೆ.
ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಲ ಮೂಲಕ ಖಚಿತಪಡಿಸಿದ್ದು, ನನ್ನ ಸಂಪರ್ಕದಲ್ಲಿದ್ದವರು ಕ್ವಾರಂರೈನ್ ಆಗಿ ಎಂದು ಮನವಿ ಮಾಡಿದ್ದಾರೆ.
'ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು'ಎಂದ ಜಮೀರ್ ವಿರುದ್ಧ ಡಿಕೆಶಿಗೆ ದೂರು
ಇದರಿಂದ ಅವರ ಬೆಂಬಲಿಗರಿಗೆ ಆತಂಕ ಶುರುವಾಗಿದೆ. ಯಾಂಕದ್ರೆ, ಜಮೀರ್ ಎಲ್ಲೊಂದಲ್ಲಿ ಬೆಂಗಲಿಗರೊಂದಿಗೆ ಸುತ್ತಾಡಿದ್ದಾರೆ. ಸದ್ಯ ಜಮೀರ್ ಅಹ್ಮದ್ ಖಾನ್ ಅವರು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
"
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.