ಬಿಜೆಪಿ ಸೇರಲು ಕಾಂಗ್ರೆಸ್ ಶಾಸಕರ ದುಂಬಾಲು: ಸ್ಫೋಟಕ ಹೇಳಿಕೆ ಕೊಟ್ಟ ಕಟೀಲ್

By Suvarna NewsFirst Published Feb 17, 2021, 2:32 PM IST
Highlights

ಸಚಿವ ರಮೇಶ್ ಜಾರಕಿಹೊಳಿ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಸ್ಫೋಟಕ ಹೇಳಿಕೆ ಕೊಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ವಿಜಯಪುರ, (ಫೆ.17): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಬಿಜೆಪಿ ಸೇರಲು ದುಂಬಾಲು ಬಿದ್ದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಬಲವರ್ಧನೆ, ಕೇಂದ್ರ-ರಾಜ್ಯ ಸರಕಾರಗಳು ನೀಡುತ್ತಿರುವ ಜನಪರ ಆಡಳಿತ ಮೆಚ್ಚಿ ಬಿಜೆಪೆ ಸೇರಲು ಕಾಂಗ್ರೆಸ್ ಶಾಸಕರು ಹಾತೊರೆಯುತ್ತಿದ್ದಾರೆ ಎಂದು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದರು.

24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಸಚಿವ

ರಾಜ್ಯದಲ್ಲಿ ಸಿಂದಗಿ ಕ್ಷೇತ್ರ ಸೇರಿದಂತೆ ಉಪ ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ಬಿಜೆಪಿ ಪಕ್ಷ ಅಭ್ಯರ್ಥಿಗಳನ್ನು ಅಂತಿಮ ಮಾಡಲಿದೆ ಎಂದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಮೇಲೂ ಕಾಂಗ್ರೆಸ್ ಮುಖಂಡರು ವಿವಾದಿತ ಸ್ಥಳ ಎಂದು ಹೇಳುವುದು ನ್ಯಾಯಾಲಯಕ್ಕೆ ಮಾಡಿದ ಅಪಮಾನ ಎಂದು ಟೀಕಿಸಿದರು.

ಮನಸ್ಸು ಮಾಡಿದ್ರೆ  ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕರೆತರುವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

click me!