ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದ್ದು, ದಿನೇ ದಿನೇ ದಯನೀಯ ಸ್ಥಿತಿಗೆ ಹೋಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ (ಆ.02): ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದ್ದು, ದಿನೇ ದಿನೇ ದಯನೀಯ ಸ್ಥಿತಿಗೆ ಹೋಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಈ ವರೆಗೂ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲಾಗುತ್ತಿಲ್ಲ. ಎರಡೂ ಕಡೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಇಂದಿಗೂ ಸಾಧ್ಯವಾಗದಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ನೂರಾರು ಕಡೆ ಪ್ರಚಾರ ಮಾಡಿದರು. ಆದರೆ, ಫಲಿತಾಂಶ ಏನಾಯ್ತು? ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಇದೇ ರೀತಿ ಬಿಜೆಪಿಗೆ ಆಗುತ್ತೆ. ಈ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವರಿಷ್ಠರ ಸಭೆ ಕುರಿತು ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ದೆಹಲಿಯಲ್ಲಿ ವರಿಷ್ಠರೊಂದಿಗೆ ರಾಜ್ಯದ ಪರಿಸ್ಥಿತಿ ಕುರಿತಂತೆ ಚರ್ಚೆ ಆಗಲಿದೆ.
undefined
ಸೌಜನ್ಯ ಕೇಸ್: ಭಕ್ತರು ಗೊಂದಲಕ್ಕೆ ಈಡಾಗದಂತೆ ಡಾ.ಹೆಗ್ಗಡೆ ಮನವಿ
ಒಂದು ಕ್ಷೇತ್ರದ ಬಗ್ಗೆ ಅಲ್ಲ, ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಂಘಟನೆ ಹಾಗೂ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆಯಾಗಲಿದೆ. ಜೊತೆಗೆ ಮುಂದಿನ ಲೋಕಸಭೆ ಚುನಾವಣೆ, ಸಂಘಟನೆ ದೃಷ್ಟಿಯಿಂದ ದೆಹಲಿಯಲ್ಲಿ ವರಿಷ್ಠರು ಸಭೆ ಕರೆದಿದ್ದು, ವರಿಷ್ಠರ ಕರೆ ಮೇರೆಗೆ ನಾನೂ ದೆಹಲಿಗೆ ಹೊರಟಿದ್ದೇನೆ ಎಂದರು. ಹಾಲಿನ ಬೆಲೆಯಲ್ಲಿ ಏರಿಕೆ ಕುರಿತು ಸಮರ್ಥನೆ ನೀಡಿದ ಜಗದೀಶ ಶೆಟ್ಟರ್, ಕಳೆದ ಐದಾರು ವರ್ಷಗಳಿಂದ ಬೆಲೆ ಏರಿಕೆ ಬಗ್ಗೆ ಚಿಂತನೆ ಇತ್ತು. ಇದೀಗ ರೈತರ ಅನುಕೂಲಕ್ಕಾಗಿ ಹಾಗೂ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಲಾಗಿದೆ ಎಂದರು.
ನಾನು ಬಿಜೆಪಿಗೆ ಮರಳುವ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದೆ. ಗೌರವದಿಂದಲೇ ಕಾಣುತ್ತಿದೆ. ಹೀಗಾಗಿ, ನಾನು ಮರಳಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ, ಆ ಕುರಿತು ಚರ್ಚೆಯೂ ಇಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗದ ಸ್ಥಿತಿ ಬಿಜೆಪಿಗೆ ಬಂದಿದೆ. ನಾನು ಜನಸಂಘದಿಂದಲೇ ಪಕ್ಷದಲ್ಲಿ ಇದ್ದೇನೆ. ಯಾವೊಬ್ಬ ಲಿಂಗಾಯತ ನಾಯಕರು ಇಲ್ಲದ ವೇಳೆಯಲ್ಲಿ ನಾನು ಅಲ್ಲಿ ಪಕ್ಷಕ್ಕಾಗಿ ದುಡಿದಿದ್ದೇನೆ. ಆದರೆ, ನನ್ನನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡರು.
ಸ್ವಾಭಿಮಾನಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡರು. ನನ್ನನ್ನು ಸೋಲಿಸಲು ಯತ್ನಿಸಿದ ಬಿಜೆಪಿ, ರಾಜ್ಯದಲ್ಲಿ ತಾನೇ ಅಧಿಕಾರ ಕಳೆದುಕೊಂಡಿತು. ಬಿಜೆಪಿಯಲ್ಲಿ ಯಾವುದೇ ತತ್ವ, ಸಿದ್ಧಾಂತ ಈಗ ಉಳಿದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ನಮ್ಮಂತವರಿಗೆ ಟಿಕೆಟ್ ನೀಡಲಿಲ್ಲ. ಆದರೆ, ಕಲಬುರಗಿಯಲ್ಲಿ ರೌಡಿಶೀಟರ್‌ಗೆ ಟಿಕೆಟ್ ನೀಡಿದ್ದಾರೆ ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಬೇಕೋ, ಬೇಡವೋ ಎನ್ನುವುದನ್ನು ಪಕ್ಷ ತೀರ್ಮಾನಿಸುತ್ತದೆ.
ಸಿದ್ದು ಆಪ್ತೆ, ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿರುದ್ಧ ಎಫ್‌ಐಆರ್
ಆದರೆ, ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ. ಸದ್ಯದ ಬೆಳವಣಿಗೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ. ಕಾಂಗ್ರೆಸ್ ಸಂಘಟನೆ ಉತ್ತಮವಾಗಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ 15-20 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಎಂದರು. ಈಗಂತೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರವಾಗಿ ತಿಳಿಸಿದರು.