ಇಂದಿನಿಂದ ವಿಧಾನ ಮಂಡಲ ಮಳೆಗಾಲದ ಅಧಿವೇಶನ ಆರಂಭವಾಗುತ್ತಿದೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಮತ್ತೋರ್ವ ವಿಧಾನಪರಿಷತ್ ಸದಸ್ಯ ಗೈರಾಗಿದ್ದಾರೆ.
ಬೆಂಗಳೂರು, (ಸೆ.21): ವಿಧಾನ ಪರಿಷತ್ ಸದಸ್ಯ ಜಿ ರಘು ಆಚಾರ್ ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಇಂದಿನಿಂದ ಆರಂಭಗೊಂಡಿರುವ ವಿಧಾನಮಂಡಲದ ಅಧಿವೇಶನಕ್ಕೆ ಗೈರು ಅಗಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಜಿ ರಘು ಆಚಾರ್ ಅವರಿಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ವಿಧಾನ ಪರಿಷತ್ ಕಲಾಪದಲ್ಲಿ ಪಾಲ್ಗೊಳ್ಳುತ್ತಿಲ್ಲ.
undefined
ಕೊರೋನಾ ಲಸಿಕೆ ಉತ್ಪಾದನೆ; ಭಾರತದ ಮುಂದೆ ಹಲವು ಸವಾಲು!
ಈ ಬಾರಿ ವಿಧಾನ ಪರಿಷತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೋವಿಡ್ 19 ಪರೀಕ್ಷೆ ಕಡ್ಡಾಯ ಮಾಡಿದ್ದರ ಹಿನ್ನೆಲೆಯಲ್ಲಿ ರಘು ಆಚಾರ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ಸಂಬಂಧ ವಿಧಾನ ಪರಿಷತ್ ಸಭಾಪತಿಗಳಿಗೆ ಜಿ. ರಘು ಆಚಾರ್ ಪತ್ರ ಬರೆದು ತಮಗೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಸದನದ ಕಲಾಪದಲ್ಲಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಇಂದಿನಿಂದ ವಿಧಾನ ಮಂಡಲ ಮಳೆಗಾಲದ ಅಧಿವೇಶನ ಆರಂಭವಾಗುತ್ತಿದೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಮೊದಲ ದಿನವೇ 18ಕ್ಕು ಹೆಚ್ಚು ಶಾಸಕರು ಗೈರಾಗಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಎಲ್ಲರೂ ಸದನಕ್ಕೆ ಗೈರುಹಾಜರಾಗಲಿದ್ದು, ಅವರಲ್ಲಿ ಐವರು ಸಚಿವರೂ ಸೇರಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ಹಾಗೂ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ಆಗಿದೆ.