* ಪಂಚಾಯಿತಿ ವ್ಯವಸ್ಥೆಗೆ ಶಕ್ತಿ ತುಂಬಲು ಕಾಂಗ್ರೆಸ್ ಶ್ರಮ
* ಗ್ರಾಪಂಗಳಿಗೆ ಯಾವುದೇ ಅಭಿವೃದ್ಧಿ ಅನುದಾನ ನೀಡುತ್ತಿಲ್ಲ
* ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ
ಹಾನಗಲ್ಲ(ಡಿ.20): ವಿಧಾನ ಪರಿಷತ್ ಚುನಾವಣೆಯಲ್ಲಿನ(Vidhan Parishat Election) ಗೆಲುವು ಕಾಂಗ್ರೆಸ್(Congress) ಪಕ್ಷದ ಸಿದ್ಧಾಂತದ, ವಿಚಾರಧಾರೆಯ ಗೆಲುವಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಂಚಾಯಿತಿ ವ್ಯವಸ್ಥೆಗೆ ಶಕ್ತಿ ತುಂಬಿ ಗ್ರಾಮೀಣಾಭಿವೃದ್ಧಿಗೆ ಶ್ರಮಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ(Saleem Ahmed) ಹೇಳಿದ್ದಾರೆ. ಭಾನುವಾರ ಹಾನಗಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುತ್ತಿಲ್ಲ. ಗ್ರಾಪಂಗಳಿಗೆ ಯಾವುದೇ ಅಭಿವೃದ್ಧಿ ಅನುದಾನ ನೀಡುತ್ತಿಲ್ಲ. ಸದಸ್ಯರ ಗೌರವಧನ ಕೂಡ ಬಿಡುಗಡೆ ಮಾಡಿಲ್ಲ. ಹೀಗಾಗಿ ಬಿಜೆಪಿ ಸರ್ಕಾರದ(BJP Government) ಬಗ್ಗೆ ಜನ ವಿಶ್ವಾಸ ಕಳೆದುಕೊಂಡಿದ್ದು, ಕಾಂಗ್ರೆಸ್ ಆಯ್ಕೆ ಮಾಡುವ ಮೂಲಕ ಬಿಜೆಪಿಗೆ(BJP) ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.
ಕಾಂಗ್ರೆಸ್ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬುವ ಮೂಲಕ ಗ್ರಾಮಿಣಾಭಿವೃದ್ಧಿಗೆ ಒತ್ತು ನೀಡಿದ್ದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಗೆ ಗ್ರಾಮಿಣಾಭಿವೃದ್ಧಿ ಬೇಕಾಗಿಲ್ಲ. ರಾಜ್ಯ ಸರ್ಕಾರದ ವೈಫಲ್ಯವನ್ನು ಜನರ ಮುಂದಿಟ್ಟು ಕಾಂಗ್ರೆಸ್ ಬೇರು ಮಟ್ಟದಲ್ಲಿ ಸಂಘಟಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಈಗಾಗಲೇ ಹಾನಗಲ್ಲ ತಾಲೂಕಿನ ಜನತೆ ಶ್ರೀನಿವಾಸ ಮಾನೆ(Srinivas Mane) ಅವರನ್ನು ಆಯ್ಕೆ ಮಾಡುವ ಮೂಲಕ ಹಾಗೂ ನನಗೆ ಹೆಚ್ಚು ಮತಗಳನ್ನು ನೀಡುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ಸಂದೇಶ ತಾಲೂಕಿನ ಜನ ನೀಡಿದ್ದಾರೆ ಎಂದ ಅವರು, ತಮಗೆ ಮತ ನೀಡಿ ಗೆಲುವಿಗೆ ಕಾರಣರಾದ ಮೂರೂ ಜಿಲ್ಲೆಯ ಎಲ್ಲ ಮತದಾರರಿಗೂ ಮುಖಂಡರಿಗೂ ಕೃತಜ್ಞತೆ ತಿಳಿಸಿದರು.
undefined
Mahadayi Project: ಮಹದಾಯಿ ವಿಚಾರದಲ್ಲಿ ಬಿಜೆಪಿಯಿಂದ ರಾಜಕಾರಣ: ಸಲೀಂ ಅಹ್ಮದ್
ಶಾಸಕ ಶ್ರೀನಿವಾಸ ಮಾನೆ, ಮಾಜಿ ಸಚಿವ ಮನೋಹರ ತಹಸೀಲ್ದಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಎಸ್. ಪಾಟೀಲ, ಪುರಸಭೆ ಅಧ್ಯಕ್ಷ ನಾಗಪ್ಪ ಸವದತ್ತಿ ಈ ಸಂದರ್ಭದಲ್ಲಿ ಇದ್ದರು.
ವಿಧಾನ ಪರಿಷತ್ ಫಲಿತಾಂಶ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ
ರಾಣಿಬೆನ್ನೂರು: ವಿಧಾನ ಪರಿಷತ್ ಫಲಿತಾಂಶ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಿದೆ ಎಂದು ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ಸಂಜೆ ಏರ್ಪಡಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕೃಷಿ ಕಾಯ್ದೆ, ನಿರುದ್ಯೋಗ, ಜನ ವಿರೋಧಿ ಯೋಜನೆಗಳ ವಿರುದ್ಧ ಜನ ದಂಗೆ ಎದ್ದಿದ್ದಾರೆ. ಪೆಟ್ರೊಲ್ ಹಾಗೂ ಗ್ಯಾಸ್ ಬೆಲೆ ಗಗನಮುಖಿಯಾಗಿದೆ. ಮೋದಿ ಮನ್ ಕಿ ಬಾತ್ ಕೈಬಿಟ್ಟು ಜನರ ಸಂಕಷ್ಟಗಳನ್ನು ಆಲಿಸಿ ಪರಿಹಾರ ಒದಗಿಸುವ ಕೆಲಸ ಮಾಡಬೇಕು. ರಾಜ್ಯದಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು ಸಾಕಷ್ಟುಮನೆಗಳು ಬಿದ್ದಿವೆ. ಆದರೆ ಇಲ್ಲಿಯವರೆಗೂ ಯಾರಿಗೂ ಪರಿಹಾರ ನೀಡಿಲ್ಲ. ಭೂ ಹಗರಣದಲ್ಲಿ ಶಾಮೀಲಾಗಿರುವ ಸಚಿವ ಬೈರತಿ ಬಸವರಾಜ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು. ಇಲ್ಲವಾದಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕು. ಕಾಂಗ್ರೆಸ್ ಸಮಾಜದ ಎಲ್ಲಾ ಜನರಿಗೆ ನ್ಯಾ¿å ಒದಗಿಸುತ್ತದೆ. ಪಕ್ಷದ ಕಾರ್ಯಕರ್ತರು ಜಿಪಂ, ತಾಪಂ, ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ತನಕ ಪಕ್ಷವನ್ನು ಇದೇ ರೀತಿ ಹೋರಾಟವನ್ನು ಮುಂದುವರೆಸಿಕೊಂಡು ಹೋಗಬೇಕು.
ವಿಧಾನಸಭಾ ಅಧ್ಯಕ್ಷ ಕೆ.ಬಿ. ಕೋಳಿವಾಡ, ಜಿಪಂ ಮಾಜಿ ಅಧ್ಯಕ್ಷ ಏಕನಾಥ ಭಾನುವಳ್ಳಿ, ನಗರಸಭಾ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ಮಾತನಾಡಿದರು. ಕೆಪಿಸಿಸಿ ವೀಕ್ಷಕರಾದ ನಾಗರಾಜ, ಮೌನೇಶ, ಪಕ್ಷದ ಚುನಾವಣಾ ಉಸ್ತುವಾರಿ ಬಸವರಾಜ ಮತ್ತಿತರರಿದ್ದರು.