
ಬೆಂಗಳೂರು(ಏ.03): ರಾಜ್ಯದಿಂದ ಏಕೈಕ ಮಾಜಿ ಪ್ರಧಾನಿ ಎಂದು ಹೇಳಿಕೊಳ್ಳಲು ಕಾರಣವಾದ ಹಾಗೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ ಕಾಂಗ್ರೆಸ್ ಎಲ್ಲಿದೆ ಎಂದು ಕೇಳುವ ದೇವೇಗೌಡರ ಹೇಳಿಕೆ ಖಂಡನೀಯ. ಕಾಂಗ್ರೆಸ್ ಪಕ್ಷದ ಋಣ ದೇವೇಗೌಡರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದ್ದಾರೆ.
ದೇವೇಗೌಡರನ್ನು ಪ್ರಧಾನಿ ಮಾಡಿದ, ಅವರ ಮಗನನ್ನು ಮುಖ್ಯಮಂತ್ರಿ ಮಾಡಿದ ಕಾಂಗ್ರೆಸ್ ಈಗಲೂ ಹಾಗೆಯೇ ಇದೆ. 140 ವರ್ಷಗಳ ಇತಿಹಾಸ ಹೊಂದಿ ಇಂದು 140 ಕೋಟಿ ಜನತೆ ಮನಸ್ಸಿನಲ್ಲಿದೆ. ಆದರೆ, ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಕೇಳಿದ ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರ ಹೇಳಿಕೆ ಖಂಡನೀಯ ಎಂದಿದ್ದಾರೆ.
ಮೋದಿಯವರನ್ನು ಟೀಕಿಸಿದಾಗಲೆಲ್ಲ ಅವರ ಜನಪ್ರಿಯತೆ ಹೆಚ್ಚಾಗಿದೆ: ಬೊಮ್ಮಾಯಿ
ದೇಶಕ್ಕೆ ಅನೇಕ ಮಹಾನ್ ನಾಯಕರನ್ನು ಕೊಟ್ಟ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲುತ್ತದೆ. ಪ್ರಸ್ತುತ ದೇವೇಗೌಡರು ಕುಟುಂಬ ರಕ್ಷಣೆಗಾಗಿ ಬಿಜೆಪಿ ಜೊತೆ ಸೇರಿ ಜಾತ್ಯತೀತ ಸಿದ್ಧಾಂತವನ್ನೇ ಬಲಿ ಕೊಟ್ಟಿದ್ದಾರೆ. ಜಾತ್ಯತೀತ ಪಕ್ಷ ಎಂಬ ಕಾರಣಕ್ಕೆ ಹಿಂದೆ ಕಾಂಗ್ರೆಸ್ ಜೆಡಿಎಸ್ ಜೊತೆ ಕೈ ಜೋಡಿಸಿತ್ತು. ಆದರೆ, ಜನತಾದಳ ಇಂದು ಕೋಮುವಾದಿ ಜನತಾದಳವಾಗಿ ಪರಿವರ್ತನೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.