Political Fight: ಮುಖ್ಯಮಂತ್ರಿ ಎದುರೇ ಹೊಡೆದಾಟಕ್ಕೆ ಮುಂದಾದ ಸಂಸದ-ಮಿನಿಸ್ಟರ್

Published : Jan 03, 2022, 04:19 PM IST
Political Fight: ಮುಖ್ಯಮಂತ್ರಿ ಎದುರೇ ಹೊಡೆದಾಟಕ್ಕೆ ಮುಂದಾದ ಸಂಸದ-ಮಿನಿಸ್ಟರ್

ಸಾರಾಂಶ

* ಹೊಡೆದಾಟಕ್ಕೆ ಮುಂದಾದ ಸಂಸದ-ಮಿನಿಸ್ಟರ್ * ಕೈ ಕೈ ಹಂತಕ್ಕೆ ಹೋದ ಅಶ್ವತ್ಥನಾರಾಯಣ ಹಾಗೂ ಸಂಸದ‌ ಡಿ.ಕೆ.‌ ಸುರೇಶ್  * ಮುಖ್ಯಮಂತ್ರಿ ಎದುರೇ ಜನನಾಯಕರ ರಂಪಾಟ

ರಾಮನಗರ. (ಜ.03):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಎದುರೇ ಸಚಿವ  ಡಾ. ಸಿ.ಎನ್. ಅಶ್ವತ್ಥನಾರಾಯಣ(Dr CN Ashwath Narayan) ಹಾಗೂ ಸಂಸದ‌ ಡಿ.ಕೆ.‌ ಸುರೇಶ್ (DK Suresh) ಹೊಡೆದಾಟಕ್ಕೆ (Fight) ಮುಂದಾದ‌ ಪ್ರಸಂಗ ನಡೆದಿದೆ.

ಹೌದು ರಾಮನಗರ(Ramanagara) ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸೋಮವಾರ ನಡೆದ ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಎದುರೇ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ‌ ಡಿ.ಕೆ.‌ ಸುರೇಶ್ ನಡುವೆ ವಾಕ್ಸಮರ ನಡೆದಿದೆ. ಅಲ್ಲದೇ ಕೈ ಕೈ ಮಿಲಾಯಿಸುವ ಹಂತಕ್ಊ ಹೋಗಿದೆ.

Telangana BJP Chief ಬಂಡಿ ಸಂಜಯ್‌ ಅರೆಸ್ಟ್, ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ನಡ್ಡಾ!

ವೇದಿಕೆಯಲ್ಲಿ ಅಶ್ವತ್ಥನಾರಾಯಣರ ಮಾತಿನಿಂದ ಕೆರಳಿದ‌ ಸುರೇಶ್ ಅವರತ್ತ ನುಗ್ಗಿದರು. ಅತ್ತ ಅಶ್ವತ್ಥನಾರಾಯಣ ಸಹ‌ ಕೆರಳಿದರು. ನಂತರ ಇಬ್ಬರು‌ ಕೈ ಕೈ ಮಿಲಾಯಿಸಲು ಮುಂದಾದರು. ಕಾಂಗ್ರೆಸ್ ನ‌ವಿಧಾನ ಪರಿಷತ್ ಸದಸ್ಯ ರವಿ ಮೈಕ್ ಕಿತ್ತೆಸೆದರು. ಇದರಿಂದ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಯಿತು. 

ಸಂಸದ ಡಿ.ಕೆ.‌ ಸುರೇಶ್ ವೇದಿಕೆಯಲ್ಲೇ ಧರಣಿ ಕುಳಿತರು. ವೇದಿಕೆಯ ಕೆಳಗೂ‌ ಗದ್ದಲ‌ ಏರ್ಪಟ್ಟಿತು. ಮುಖ್ಯಮಂತ್ರಿ‌ ಬೊಮ್ಮಾಯಿ ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ‌ ಮಾಡಿದರು. ' ರಾಜಕೀಯ ಇದ್ದದ್ದೇ. ಆದರೆ‌‌ ನಾವು ಜನಪರವಾಗಿ‌‌ ಕೆಲಸ ಮಾಡಬೇಕೇ ಹೊರತು ಭಿನ್ನಾಭಿಪ್ರಾಯವನ್ನೇ ದೊಡ್ಡದು ಮಾಡಬಾರದು' ಎಂದು ಇಬ್ಬರಿಗೂ‌ ಕಿವಿಮಾತು‌ ಹೇಳಿದರು. ಆಗಿದ್ದನ್ನು ಮರೆತು ಎಲ್ಲರೂ ಒಂದೇ‌ ಮನಸ್ಸಿನಿಂದ ಮುಂದೆ ಹೋಗೋಣ ಎಂದರು.

ಅಷ್ಟಕ್ಕೂ ಆಗಿದ್ದೇನು?
ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಚಿವ ಅಶ್ವತ್ಥನಾರಾಯಣ ' ಇವತ್ತು ಏನು ತಪ್ಪಾಗಿದೆ ಎಂದು ನಾಲ್ಕು ಜನರನ್ನು‌‌ ಸೇರಿಸಿ ಘೋಷಣೆ ಕೂಗುತ್ತೀರಿ.  ನಾನೇನು ಯಾರ ಜಮೀನಿಗೂ ಕೈ ಹಾಕಿಲ್ಲ. ಯಾವನೋ ಅವನು‌ ಗಂಡಸು ಅನ್ನೋನು' ಎಂದು ಪ್ರಚೋದಿಸಿದರು.

ಇದರಿಂದ ಕುಪಿತಗೊಂಡ ಸುರೇಶ್ ' ನನ್ನ ಗಂಡಸ್ಥನ ತೋರಿಸಲ' ಎಂದು ಅಶ್ವತ್ಥನಾರಾಯಣರತ್ತ ನುಗ್ಗಿದರು. ಇದರಿಂದ ಗಲಾಟೆ ಜೋರಾಯಿತು. ಬಳಿಕ‌ ಸುರೇಶ್ ವೇದಿಕೆಯಲ್ಲೇ ಧರಣಿ‌‌ ಕುಳಿತರು.

ಡಿಕೆ ಸುರೇಶ್ ಸ್ಪಷ್ಟನೆ
ಮಂತ್ರಿಗಳು ಮಂತ್ರಿಗಳ ರೀತಿ ನಡೆದುಕೊಳ್ಳಲಿಲ್ಲ. ಸಚಿವರು ಸವಾಲೆಸೆದು ಕರೆದಾದ ಸುಮ್ಮನೆ ಕೂರಲು ಆಗಲಿಲ್ಲ. ಇದು ರಾಜ್ಯ ಸರ್ಕಾರದ ವತಿಯಿಂದ ನಡೆದ ಕಾರ್ಯಕ್ರಮ. ಆದರೆ, ಇದು ಬಿಜೆಪಿ ಕಾರ್ಯಕ್ರಮದಂತೆ ಕಾಣುತ್ತಿತ್ತು. ರಾಮನಗರ ಜಿಲ್ಲಾ ಪಂಚಾಯತ್ ವತಿಯಿಂದ ಅನುದಾನ ಪಡೆದಿದ್ದಾರೆ. ಇಲ್ಲಿ ಹಾಕಿರುವ ಎಲ್ಲಾ ಕಲ್ಲುಗಳನ್ನು ನಾವು ತಂದಿದ್ದೆವು. ಸಚಿವರು ಎಲ್ಲವನ್ನು ನಾವೇ ಮಾಡಿದ್ದೇವೆಂದು ವೀರಾವೇಷ ಪ್ರದರ್ಶಿಸಿದಾಗ ಸುಮ್ಮನಿರಲಾಗಲಿಲ್ಲ. ಸಿಎಂ ಸಮ್ಮುಖದಲ್ಲಿ ವೇದಿಕೆಯಲ್ಲೇ ಅವರಿಗೆ ಉತ್ತರ ಕೊಟ್ಟಿದ್ದೇವೆ ಎಂದು ಘಟನೆ ಬಳಿಕ ರಾಮನಗರದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್​ ಹೇಳಿಕೆ ನೀಡಿದ್ದಾರೆ.

ಸಿಎಂಗೆ ಕ್ಷಮೆಯಾಚಿಸಿದ ಡಿ.ಕೆ. ಸುರೇಶ್
ವೇದಿಕೆಯಲ್ಲಿ ನಡೆದ ಘಟನೆಗೆ ಸಿಎಂರಲ್ಲಿ ಕ್ಷಮೆಯಾಚಿಸುವೆ. ಸಿಎಂ ಬಸವರಾಜ ಬೊಮ್ಮಾಯಿಗೆ ಮಾತ್ರ ಕ್ಷಮೆಯಾಚಿಸುವೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಕ್ಷಮೆಯಾಚನೆ ಮಾಡಿದ್ದಾರೆ. ನಾವು ಯಾರಿಂದಲೂ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆಯಿಲ್ಲ. ರಾಮನಗರ ಜಿಲ್ಲೆಯ ಜನ ಯಾರಿಗೂ ಹೆದರಿಕೊಳ್ಳುವ ಜನರಲ್ಲ ಎಂದು ರಾಮನಗರದ ವೇದಿಕೆ ಕಾರ್ಯಕ್ರಮದಲ್ಲಿ ಡಿ.ಕೆ.ಸುರೇಶ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು - Jaya Bachchan ಬಾಯ್ಕಾಟ್‌ ಆಗ್ತಾರಾ?