ಸಿಬಿಐ ಪರಿಶೀಲನೆ ಅಂತ್ಯ: ಸಂಸದ ಡಿಕೆ ಸುರೇಶ್ ಫಸ್ಟ್ ರಿಯಾಕ್ಷನ್...!

By Suvarna News  |  First Published Oct 5, 2020, 4:31 PM IST

ಉಪಚುನಾವಣೆ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮಾಡಿರುವ ಬಗ್ಗೆ ಡಿಕೆ ಸುರೇಶ್ ಅವರ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ.


ಬೆಂಗಳೂರು, (ಅ.05) :  ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ನಿವಾದ ಮೇಲೆ ಸಿಬಿಐ ದಾಳಿ ಮಾಡಿದ್ದು, ಇದೀಗ ಅಧಿಕಾರಿಗಳ ಪರಿಶೀಲನೆ ಕಾರ್ಯ ಮುಗಿದಿದೆ.

ಈ ಹಿನ್ನೆಲೆಯಲ್ಲಿ ಡಿಕೆ ಸುರೇಶ್ ಅವರು ತಮ್ಮ ಸಹೋದಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದರು. ಇನ್ನು ಈ ದಾಳಿ ಬಗ್ಗೆ ಟ್ವೀಟ್ ಮೂಲಕ ಮೊದಲ ಪ್ರತಿಕ್ರಿಯೆ ನೀಡಿದ್ದು, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ ಎಂದು ಸಂಸದ ಡಿ ಕೆ ಸುರೇಶ್ ಕಿಡಿಕಾರಿದ್ದಾರೆ.

Tap to resize

Latest Videos

ಈ ಕುರಿತಂತೆ ಟ್ವಿಟ್ ಮಾಡಿರುವ ಡಿಕೆ ಶಿವಕುಮಾರ್ ಸಹೋದರ ಹಾಗೂ ಸಂಸದ ಡಿಕೆ ಸುರೇಶ್, ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ ಎಂದಿದ್ದಾರೆ.

FIR ಬೆನ್ನಲ್ಲೇ ಡಿಕೆಶಿ ಬಂಧನಕ್ಕೆ ಸಿದ್ಧತೆ; ಸಿಬಿಐ ಕಚೇರಿ ಮುಂದೆ ಬಿಗಿ ಭದ್ರತೆ

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ. ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ.

ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ.

— DK Suresh (@DKSureshINC)

ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

click me!