ಮತದಾರರ ಪಟ್ಟಿ ಪರಿಷ್ಕರಣೆ ಸರ್ಕಾರದ ಹೊಣೆ, ಅದನ್ನು ಖಾಸಗಿ ಸಂಸ್ಥೆಗೆ ನೀಡಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ: ಸಂಸದ ಸುರೇಶ್
ರಾಮನಗರ(ನ.19): ಬಿಜೆಪಿ ಪಕ್ಷ ಕೆಲವು ಸ್ವ ಹಿತ ಸಂಸ್ಥೆಗಳ ಮೇಲೆ ಮಾತ್ರ ಹಿಡಿತ ಸಾಧಿಸಿತ್ತು. ಇದೀಗ ಚುನಾವಣಾ ಆಯೋಗದ ಮೇಲೂ ಹಿಡಿತ ಸಾಧಿಸಲು ಹೊರಟಿದೆ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಪರಿಷ್ಕರಣೆ ಮಾಡುವುದು ಸರ್ಕಾರದ ಹೊಣೆ. ಆ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ನೀಡಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳ ಮೇಲೆ ಚುನಾವಣಾ ಆಯೋಗ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಈ ಅಕ್ರಮದ ಕುರಿತು ಸಮಗ್ರ ತನಿಖೆಯಾಗಬೇಕು. ತನಿಖೆ ಹೆಸರಿನಲ್ಲಿ ದಾರಿ ತಪ್ಪಿಸುವ ಕೆಲಸ ಮಾಡಬಾರದು. ಅಕ್ರಮದಲ್ಲಿ ಬೆಂಗಳೂರಿನ ಎಲ್ಲಾ ಸಚಿವರು ಪಾಲುದಾರರಾಗಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಇದರ ಪಾಲುದಾರಿಕೆ ಹೊಂದಿದ್ದಾರೆ. ಆದ್ದರಿಂದ ಈ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸತೀಶ್ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್
ಕೆಲವು ಬಿಜೆಪಿ ನಾಯಕರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಕೆಲಸವನ್ನು ಕಾನೂನು ಬಾಹಿರವಾಗಿ ಕೊಟ್ಟಿದ್ದಾರೆ. ಆ ಮುಖಾಂತರ ಮತದಾರರ ಪಟ್ಟಿಯಲ್ಲಿ ಸಾಕಷ್ಟುಗೊಂದಲವನ್ನು ಸೃಷ್ಟಿಮಾಡಿದ್ದಾರೆ. ಸಾಕಷ್ಟುಮತಗಳನ್ನು ಡಿಲೀಟ್ ಮಾಡಿದ್ದಾರೆ. ಜೊತೆಗೆ ಅವರಿಗೆ ಬೇಕಾದ ಮತದಾರರನ್ನು ಸೇರಿಸಿದ್ದಾರೆ ಎಂದು ಆರೋಪಿಸಿದರು.
ನಮ್ಮ ಪಕ್ಷದ ಉಸಾಬರಿ ಬೇರೆ ಪಕ್ಷದವರಿಗೆ ಬೇಡ. ನಮ್ಮ ಪಕ್ಷದಲ್ಲಿ ಸೂಕ್ತ ಅಭ್ಯರ್ಥಿ ಇದ್ದಾರೆ. ನೀವು ನಿರೀಕ್ಷೆ ಮಾಡದಂತಹ ರೀತಿಯಲ್ಲಿ ಸ್ಥಳೀಯರೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಾರೆ ಕಾದು ನೋಡಿ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ಗೆ ತಿರುಗೇಟು ನೀಡಿದರು.
Ramanagara: ಬಿಜೆಪಿಯೇ ವಸೂಲಿ ಪಕ್ಷ: ಸಂಸದ ಸುರೇಶ್ ವಾಗ್ದಾಳಿ
ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿರುವ ಪ್ರಶ್ನೆಗೆ ಉತ್ತರಿಸಿದ ಸಂಸದರು, ಬೇರೆ ಬೇರೆ ಪಕ್ಷದವರು ಪಕ್ಷ ಸಂಘಟನೆಗೆ ಅವರದ್ದೇ ಸ್ಟಾಟರ್ಜಿ ಮಾಡುತ್ತಾರೆ. ಅವರ ಪಕ್ಷದ ಸಿದ್ಧಾಂತಗಳ ಮೇಲೆ ಕಾರ್ಯಕ್ರಮಗಳನ್ನು ರೂಪಿಸುತ್ತಾರೆ. ನಮ್ಮ ಪಕ್ಷ ಸಂಘಟನೆ ಮಾಡಲು ನಾವು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಅವರ ಪಕ್ಷದ ಆಂತರಿಕ ವಿಚಾರ ನಮಗೇಕೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ಮಾಜಿ ಶಾಸಕ ಕೆ.ರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿಯಾವುಲ್ಲಾ, ಜಿಪಂ ಮಾಜಿ ಅಧ್ಯಕ್ಷರಾದ ಇಕ್ಬಾಲ್ ಹುಸೇನ್, ಕೆ.ರಮೇಶ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಸಿಎನ್‌ಆರ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೇತನ್‌ಕುಮಾರ್ ಇತರರಿದ್ದರು.