ಸುಳ್ಳಿನ ಫ್ಯಾಕ್ಟರಿ ತಯಾರಿಸುತ್ತಿರುವ ಜೆಡಿಎಸ್‌: ಡಿ.ಕೆ. ಸುರೇಶ್‌ ವ್ಯಂಗ್ಯ

Published : Nov 20, 2022, 11:02 PM IST
ಸುಳ್ಳಿನ ಫ್ಯಾಕ್ಟರಿ ತಯಾರಿಸುತ್ತಿರುವ ಜೆಡಿಎಸ್‌: ಡಿ.ಕೆ. ಸುರೇಶ್‌ ವ್ಯಂಗ್ಯ

ಸಾರಾಂಶ

ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡು ಸಿಎಂ ಆಗುತ್ತೇನೆ ಎಂದು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಪರೋ​ಕ್ಷ​ವಾಗಿ ವಾಗ್ದಾಳಿ ನಡೆಸಿದ ಸಂಸದ ಡಿ.ಕೆ. ಸುರೇಶ್‌ 

ಮಾಗಡಿ(ನ.20):  ಸುಳ್ಳಿನ ಫ್ಯಾಕ್ಟರಿ ತಯಾರಿಸುವ ಕಂಪನಿ ಜೆಡಿಎಸ್‌ ಪಕ್ಷವಾಗಿದ್ದು, ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಂಸದ ಡಿ.ಕೆ. ಸುರೇಶ್‌ ಪರೋ​ಕ್ಷ​ವಾಗಿ ವಾಗ್ದಾಳಿ ನಡೆಸಿದರು.

ತಾಲೂಕಿನ ಬಿಸ್ಕೂರು ಗ್ರಾಮದಲ್ಲಿ ವಿಧಾನ ಪರಿಷತ್‌ ಸದಸ್ಯ ಪಿ.ಆರ್‌. ರಮೇಶ್‌ ರವರ ಅನುದಾನದಲ್ಲಿ ನಿರ್ಮಾಣವಾಗಲಿರುವ ತಿಗಳ ಸಮುದಾಯ ಭವನಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾಗಿದ್ದಾಗ ಅವರು ನೀಡಿದ ಭರವಸೆಯನ್ನು ಈಡೇರಿಸಲು ಆಗಲಿಲ್ಲ.. 5 ಸಾವಿರ ವೃದ್ಧಾಪ್ಯ ವೇತನ ನೀಡುತ್ತೇನೆಂದು ಹೇಳಿದರು. ಆ ಮಾತನ್ನು ಮರೆತು ಹೋದರು. ಈಗ ರಾಜ್ಯದಲ್ಲಿ ನಾವೇ ಮಳೆ ಬರಿಸಿದ್ದು ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ಮತ್ತೆ ರಾಜ್ಯದಲ್ಲಿ ಮುಖ್ಯಮಂತ್ರಿ ಆಗುತ್ತೇನೆಂದು ಮತ್ತೊಂದು ಯೋಜನೆ ಸಿದ್ಧ ಪಡಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಚುನಾವಣಾ ಆಯೋಗದ ಮೇಲೂ ಹಿಡಿತ ಸಾಧಿಸಲು ಹೊರಟ ಬಿಜೆಪಿ: ಡಿ.ಕೆ.​ಸು​ರೇಶ್‌

ಶಾಸಕ ಎ.ಮಂಜುನಾಥ್‌ರವರು ಕೂಡ ಸುಳ್ಳಿನ ನಾಯಕರ ಜೊತೆ ಸೇರಿಕೊಂಡು ಸುಳ್ಳನ್ನು ಹೇಳಿಕೊಂಡು ತಿರು​ಗಾ​ಡು​ತ್ತಿ​ದ್ದಾರೆ. 5 ವರ್ಷಗಳ ಅವ​ಧಿ​ಯಲ್ಲಿ ಕೇವಲ ಭಾಷಣಕ್ಕೆ ಸೀಮಿತರಾಗಿದ್ದು ಜನಗಳು ನಿಮ್ಮ ರಿಪೋರ್ಚ್‌ ಕಾರ್ಡ್‌ ನೋಡುತ್ತಿದ್ದು ಪಾಸಾ ಫೇಲಾ ಎಂಬುದನ್ನು ನಿರ್ಧಾರ ಮಾಡುತ್ತಾರೆ. ಯಾರದೊ ಅವಧಿಯ ಕಾಮಗಾರಿಗಳನ್ನು ನನ್ನದೇ ಎಂದು ಹೇಳುವುದು ಸರಿಯಲ್ಲ. ಭಾಷಣಕ್ಕೆ ಸೀಮಿತರಾಗುದು ಸರಿಯಲ್ಲ ಇಚ್ಛಾಶಕ್ತಿ ಬೆಳೆಸಿಕೊಳ್ಳಬೇಕೆಂದು ಶಾಸಕರ ವಿರುದ್ಧವೂ ಕಿಡಿಕಾರಿದರು.

ಕಾಂಗ್ರೆಸ್‌ ಪಕ್ಷವು ಎಲ್ಲಾ ಸಮುದಾಯದ ನಾಯಕರಿಗೂ ಮನ್ನಡೆ ನೀಡುತ್ತಿದ್ದು ತಿಗಳ ಸಮುದಾಯದ ಪಿ.ಆರ್‌ ರಮೇಶ್‌ ಅವರಿಗೆ ಎಸ್‌.ಎಂ. ಕೃಷ್ಣರವರು ಮುಖ್ಯಮಂತ್ರಿ ಅವಧಿಯಲ್ಲಿ ಮೇಯರ್‌ ಮಾಡಲು ಡಿ.ಕೆ.ಶಿವಕುಮಾರ್‌ ಅವರ ಪಾತ್ರ ಮಹತ್ವದಾಗಿತ್ತು. ಈಗ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಲಾಗಿದೆ. ಅದೇ ಸಮುದಾಯದ ಮಾಜಿ ಶಾಸಕ ನರೇಂದ್ರಬಾಬುರವರು ಈಗ ಬಿಜೆಪಿಗೆ ಹೋಗಿ ಯಾವ ಸ್ಥಿತಿಯಲ್ಲಿದ್ದಾರೆ ಎಂಬುದನ್ನು ಅರಿಯಲಿ ಎಂದು ಸುರೇಶ್‌ ಹೇಳಿ​ದರು.

ಬಿಜೆಪಿಗೆ ಮಾಗಡಿಯಲ್ಲಿ ಠೇವಣಿ ಬಂದರೆ ದೀರ್ಘದಂಡ ನಮಸ್ಕಾರ: 

ಮಾಜಿ ಶಾಸಕ ಬಾಲಕೃಷ್ಣ ಮಾತ​ನಾಡಿ, ಮಾಗಡಿ ತಾಲೂಕಿನವರೇ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥ ನಾರಾ​ಯ​ಣ​ರ​ವರು ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಠೇವಣಿ ತೆಗೆದುಕೊಂಡರೆ ಮಾಗಡಿ ಬಸ್‌ ನಿಲ್ದಾಣದ ಬಳಿ ದೀರ್ಘದಂಡ ನಮಸ್ಕಾರ ಮಾಡುತ್ತೇನೆ. ಅವರು ಬಿಜೆಪಿ ಪಕ್ಷವನ್ನು ಸಂಘಟನೆ ಮಾಡುತ್ತಿಲ್ಲ. ಅವರ ಸಂಬಂಧಿಕರೇ ಜೆಡಿಎಸ್‌ ಪಕ್ಷದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಿಂತಿದ್ದಾರೆ. ಇದು ಬಿಜೆಪಿಯ ಸ್ಥಿತಿಯಾಗಿದ್ದು ಈಗ ಹರಕೆ ಕುರಿ ಪ್ರಸಾದ್‌ ಗೌಡ ಅವ​ರನ್ನು ಬಿಜೆಪಿ ಪಕ್ಷದಿಂದ ನಿಲ್ಲಿಸುತ್ತಿದ್ದು, ಠೇವಣಿಕೂಡ ಬರುವುದಿಲ್ಲ ಎಂದು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.

ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

ಪಲಾಯನ ಮಾಡುವುದಿಲ್ಲ : 

ತಿಪ್ಪಸಂದ್ರ ಹೋಬಳಿಯಲ್ಲಿ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿರೋಧಿಗಳು ಕಲ್ಲು ಹೊಡೆದರು ನಾನು ಎದುರಿಕೊಂಡು ಪಲಾಯನ ಮಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಪಲಾಯನ ಮಾಡುವ ಸ್ಥಿತಿಗೆ ಬಂದಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಕಾಮಗಾರಿಗಳು ಪೂರ್ಣವಾಗಿಲ್ಲ. ಶಾಸಕ ಎ.ಮಂಜುನಾಥ್‌ ರವರು 5 ವರ್ಷ ಅವಧಿ ಮುಗಿದಿದೆ. ಹೇಮಾವತಿ ಕಾಮಗಾರಿ ಯಾವ ಹಂತದಲ್ಲಿದೆ ಎಂಬುದನ್ನು ಉತ್ತರಿಸಬೇಕೆಂದು ಹೇಳಿದರು.

ಪ್ರಧಾನ ಮಂತ್ರಿ ಆದರ್ಶಗ್ರಾಮ ಯೋಜನೆಯಡಿ ಯಲ್ಲಾಪುರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಸಂಸದರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾಗಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಿಗಳೂರು ಗಂಗಾಧರ್‌, ವಿಜಯಕುಮಾರ್‌, ಜೆ.ಪಿ. ಚಂದ್ರೇಗೌಡ, ಬಮುಲ್‌ ನಿರ್ದೇಶಕ ಕೆಇಬಿ ರಾಜಣ್ಣ, ಮಾಜಿ ಅಧ್ಯಕ್ಷ ಎಂ.ಕೆ. ಧನಂಜಯ್ಯ, ಗ್ರಾಪಂ ಉಪಾಧ್ಯಕ್ಷ ಭಾಗ್ಯಮ್ಮ, ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷ ದೀಪ ಮುನಿರಾಜು, ಕಲ್ಪನಾ ಶಿವಣ್ಣ ಮರಿಗೌಡ, ನಾರಾಯಣಪ್ಪ, ದೊಡ್ಡಯ್ಯ, ಮಣಿಗನಹಳ್ಳಿ ಸುರೇಶ…, ಶೋಭಾ ಮತ್ತಿ​ತ​ರರು ಹಾಜ​ರಿ​ದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ