ಪ್ರಚಾರಕ್ಕಾಗಿ ಏನೇನೋ ಮಾತನಾಡ್ತಾರೆ, ಎಚ್‌ಡಿಕೆ ಮಾತಿಗೆ ನಾನು ಉತ್ತರ ನೀಡಲ್ಲ: ಡಿ.ಕೆ. ಸುರೇಶ್‌

Published : Mar 21, 2024, 06:23 AM ISTUpdated : Mar 21, 2024, 06:26 AM IST
ಪ್ರಚಾರಕ್ಕಾಗಿ ಏನೇನೋ ಮಾತನಾಡ್ತಾರೆ, ಎಚ್‌ಡಿಕೆ ಮಾತಿಗೆ ನಾನು ಉತ್ತರ ನೀಡಲ್ಲ:  ಡಿ.ಕೆ. ಸುರೇಶ್‌

ಸಾರಾಂಶ

ನಾವು ಯಾರ ಕತ್ತನ್ನೂ ಕೊಯ್ದಿಲ್ಲ. ಕಾಂಗ್ರೆಸ್ ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ ಕಾರಣಕ್ಕೆ ಇಡೀ ದೇಶ ಅವರನ್ನು ನೆನೆಸಿಕೊಳ್ಳುವುದು. ಜೆಡಿಎಸ್‌ನವರನ್ನು ಈ ದೇಶ ಗುರುತಿಸುವಂತಹ ಕೆಲಸಗಳನ್ನು ಮಾಡಿರುವುದು ನಮ್ಮ (ಕಾಂಗ್ರೆಸ್) ಪಕ್ಷ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ ಎಂದು ಹೇಳಿದ ಸಂಸದ ಡಿ.ಕೆ. ಸುರೇಶ್‌ 

ಬೆಂಗಳೂರು(ಮಾ.21): ‘ಜೆಡಿಎಸ್‌ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ ಮಾಡಿದ್ದೇವೆ. ಈ ದೇಶ ಗುರುತಿಸಿರುವಂತಹ ಕೆಲಸಗಳನ್ನು ಕಾಂಗ್ರೆಸ್‌ ಪಕ್ಷ ಮಾಡಿದೆ. ಕಾಂಗ್ರೆಸ್‌ ಪಕ್ಷವು ದೇವೇಗೌಡರನ್ನು ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಮುಖ್ಯಮಂತ್ರಿಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ’ ಎಂದು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಸದ ಡಿ.ಕೆ. ಸುರೇಶ್‌ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕುಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಯಾರ ಕತ್ತನ್ನೂ ಕೊಯ್ದಿಲ್ಲ. ಕಾಂಗ್ರೆಸ್ ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ ಕಾರಣಕ್ಕೆ ಇಡೀ ದೇಶ ಅವರನ್ನು ನೆನೆಸಿಕೊಳ್ಳುವುದು. ಜೆಡಿಎಸ್‌ನವರನ್ನು ಈ ದೇಶ ಗುರುತಿಸುವಂತಹ ಕೆಲಸಗಳನ್ನು ಮಾಡಿರುವುದು ನಮ್ಮ (ಕಾಂಗ್ರೆಸ್) ಪಕ್ಷ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ ಎಂದು ಹೇಳಿದರು.

ರಾಜಕೀಯವಾಗಿ ನನಗೆ ಡಿಕೆಶಿ ವಿಷ ಹಾಕಿದ್ರು -ಎಚ್‌ಡಿಕೆ; ಯಾರಿಗೂ ವಿಷ ಹಾಕಿಲ್ಲ ಒಳ್ಳೇದು ಮಾಡಿದ್ದೇವೆ: ಡಿಕೆ ಸುರೇಶ್

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಈ ಹಿಂದೆ, ‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆʼ, ‘ಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆʼ, ‘ರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆʼ ಎಂಬೆಲ್ಲ ಹೇಳಿಕೆಗಳನ್ನು ನೀಡಿದ್ದರು. ಅವುಗಳನ್ನು ಜನರಿಗೆ ತೋರಿಸಿ. ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಸಂಬಂಧವನ್ನು ಜನರೇ ತೀರ್ಮಾನಿಸುತ್ತಾರೆ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದರು.

ಕುಕ್ಕರ್‌ ಹಂಚಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವರು ಪ್ರಚಾರಕ್ಕಾಗಿ ಏನೇನೋ ಮಾತನಾಡುತ್ತಾರೆ. ಕುಮಾರಸ್ವಾಮಿ ಅವರ ಮಾತುಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ
ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ