
ಬೆಂಗಳೂರು, (ಅ.06): ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಸಿಬಿಐ ಅಧಿಕಾರಿಗಳಿಗೂ ಆತಂಕ ಶುರುವಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಳಲ್ಲಿ ಡಿಕೆ ಸುರೇಶ್ ಅವರೇ ಬಹಿರಂಗೊಡಿಸಿದ್ದಾರೆ. ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.
ದಾಳಿ ಮಾಡಿದ್ದ ಸಿಬಿಐ ಅಧಿಕಾರಿಗಳಿಗೆ ಥ್ಯಾಂಕ್ಸ್ ಹೇಳಿದ ಡಿಕೆ ಸುರೇಶ್, ಏನಿದು ಅಚ್ಚರಿ..?
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇಲೆ CBI ಅಧಿಕಾರಿಗಳು ನಿನ್ನೆ (ಸೋಮವಾರ) ದಾಳಿ ನಡೆಸಿದ ಬೆನ್ನಲ್ಲೇ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ರ ನಿವಾಸದ ಮೇಲೂ ದಾಳಿ ನಡೆದಿತ್ತು. ಇದೇ ವೇಳೆ ಇಬ್ಬರೂ ಸಹೋದರರ ನಿವಾಸದ ಮುಂದೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು.
ಮನೆಯ ಬಳಿ ಅತಿಯಾಗಿ ಜನ ಸಂದಣಿ ಇದ್ದ ಹಿನ್ನೆಲೆಯಲ್ಲಿ ಸಂಸದ ಡಿ.ಕೆ. ಸುರೇಶ್ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದರು. ಆದ್ರೆ, ಪರೀಕ್ಷಾ ವರದಿಯಲ್ಲಿ ಕೊರೋನಾ ಪಾಸಿಟಿವ್ ಇರುವುದು ಖಚಿತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.