ತಮ್ಮ ಮನೆ, ಕಚೇರಿ ಮೇಲೆ ದಾಳಿ ಮಾಡಿದಕ್ಕೆ ಸಂಸದ ಡಿಕೆ ಸುರೇಶ್ ಅವರು ಸಿಬಿಐ ಅಧಿಕಾರಿಗಳ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.
ಬೆಂಗಳೂರು, (ಅ.06): ಬೆಂಗಳೂರು, ರಾಮನಗರ, ದೆಹಲಿ ಸೇರಿದಂತೆ 14 ಕಡೆಗಳಲ್ಲಿ ಡಿಕೆ ಬ್ರದರ್ಸ್ ಕಚೇರಿ, ಮನೆಗಳ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ದಾಳಿ ಮಾಡಿದ್ದರು. ದಾಳಿ ವೇಳೆ ನಗದು ಹಣ, ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ತೆಗೆದುಕೊಂಡು ಹೋಗಿರುವುದಾಗಿ ಸ್ವತಃ ಸಿಬಿಐ ಪತ್ರಿಕಾ ಪ್ರಕಟಣ ಹೊರಡಿಸಿದೆ.
ಆದ್ರೆ, ದಾಳಿ ವೇಳೆ ಡಿಕೆ ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಕಿರುಕುಳ ಕೊಟ್ಟಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಚಾರವಾಗಿ ಸ್ವತಃ ಸಂಸದ ಡಿಕೆ ಸುರೇಶ್ ಅವರು ಟ್ವಿಟ್ಟರ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.
ಡಿಕೆಶಿ ಕುಟುಂಬಸ್ಥರ ವಿರುದ್ಧ ಮತ್ತೊಂದು ಕೇಸ್ ಬುಕ್, ದಾಳಿಯ ವಿವರಣೆ ಕೊಟ್ಟ ಸಿಬಿಐ
ಡಿಕೆ ಸುರೇಶ್ ಸ್ಪಷ್ಟನೆ
ಪ್ರಮುಖವಾಗಿ ಕನಕಪುರ, ಬೆಂಗಳೂರು ಮತ್ತು ದೆಹಲಿಯ ನಮ್ಮ ಮನೆ ಮತ್ತು ಕಛೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೇ ವೃತ್ತಿಪರವಾಗಿ ನಡೆದುಕೊಂಡ CBI ಅಧಿಕಾರಿಗಳಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಮುಖವಾಗಿ ಕನಕಪುರ, ಬೆಂಗಳೂರು ಮತ್ತು ದೆಹಲಿಯ ನಮ್ಮ ಮನೆ ಮತ್ತು ಕಛೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೇ ವೃತ್ತಿಪರವಾಗಿ ನಡೆದುಕೊಂಡ CBI ಅಧಿಕಾರಿಗಳಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ.
1/8
ಇನ್ನು CBI ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ ಸಿಕ್ಕಿದ ಮಾಹಿತಿ ಕೊಟ್ಟಿದ್ದಾರೆ. ಇದರಲ್ಲಿ ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು ಎಂದು ಡಿಕೆ ಸುರೇಶ್ ಟ್ವಿಟ್ಟರ್ ಮೂಲಕ ಆಗ್ರಹಿಸಿದ್ದಾರೆ.
ಇನ್ನು CBI ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ ಸಿಕ್ಕಿದ ಮಾಹಿತಿ ಕೊಟ್ಟಿದ್ದಾರೆ. ಇದರಲ್ಲಿ ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು.
6/8