Congress guarantee scheme: ಕಾಂಗ್ರೆಸ್ ಗ್ಯಾರಂಟಿ ಜಾರಿಗೆ ಸಮಯಾವಕಾಶ ಬೇಕು: ಆರ್‌ವಿ ದೇಶಪಾಂಡೆ

By Kannadaprabha News  |  First Published May 31, 2023, 4:47 PM IST

ಕಾಂಗ್ರೆಸ್‌ ಬಹುಮತದ ಸರ್ಕಾರವು ಅಸ್ತಿತ್ವಕ್ಕೆ ಬಂದಿದೆ. ಸಚಿವ ಸಂಪುಟವನ್ನು ಸಹ ಪೂರ್ಣ ಪ್ರಮಾಣದಲ್ಲಿ ರಚಿಸಲಾಗಿದೆ. ರಾಜ್ಯದ ಜನತೆಗೆ ನೀಡಿರುವ ಉಚಿತ ವಿದ್ಯುತ್‌, ಗೃಹಲಕ್ಷ್ಮೇ, ಮಹಿಳೆಯರಿಗೆ ಬಸ್‌ ಪ್ರಯಾಣ ಸೇರಿದಂತೆ ಇತರ ಗ್ಯಾರಂಟಿಗಳ ಚಾಲನೆಗೆ ಪ್ರತಿ ವರ್ಷ ಸುಮಾರು 60 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಅದಕ್ಕಾಗಿ ಸ್ವಲ್ಪ ಸಮಯಾವಕಾಶ ಬೇಕು ಎಂದು ಆರ್ ವಿ ದೇಶಪಾಂಡೆ ಹೇಳಿದರು.


ಹಳಿಯಾಳ (ಮೇ.31) : ಕಾಂಗ್ರೆಸ್‌ ಬಹುಮತದ ಸರ್ಕಾರವು ಅಸ್ತಿತ್ವಕ್ಕೆ ಬಂದಿದೆ. ಸಚಿವ ಸಂಪುಟವನ್ನು ಸಹ ಪೂರ್ಣ ಪ್ರಮಾಣದಲ್ಲಿ ರಚಿಸಲಾಗಿದೆ. ರಾಜ್ಯದ ಜನತೆಗೆ ನೀಡಿರುವ ಉಚಿತ ವಿದ್ಯುತ್‌, ಗೃಹಲಕ್ಷ್ಮೇ, ಮಹಿಳೆಯರಿಗೆ ಬಸ್‌ ಪ್ರಯಾಣ ಸೇರಿದಂತೆ ಇತರ ಗ್ಯಾರಂಟಿಗಳ ಚಾಲನೆಗೆ ಪ್ರತಿ ವರ್ಷ ಸುಮಾರು 60 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಈ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸುತ್ತಿದ್ದು, ಜಾರಿಗೆ ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಶಾಸಕ ಆರ್‌.ವಿ. ದೇಶಪಾಂಡೆ(RV Deshpande) ಹೇಳಿದರು.

ಜೂನ್‌ 1ರಂದೇ ಗ್ಯಾರಂಟಿ ಜಾರಿಗೆ ಸಿಎಂ ಸಿದ್ದು ಸಿದ್ಧತೆ..!

Latest Videos

undefined

ಮಂಗಳವಾರ ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಯ ಆರ್ಶೀವಾದದಿಂದ ಕಾಂಗ್ರೆಸ್‌ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಬಹುಮತವನ್ನು ಗಳಿಸುವುದರ ಜೊತೆಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹಿರಿಯರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ರಾಜ್ಯದ ಜನತೆಗೆ ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿಗಳನ್ನು ಶೀಘ್ರದಲ್ಲಿಯೇ ಜಾರಿಗೆ ತರಲಿದೆ ಎಂದರು.

ಗ್ಯಾರಂಟಿಗಳಿಗೆ (Congress guaranteee) ಚಾಲನೆ ನೀಡಲು ನಿಯಮಗಳನ್ನು ರೂಪಿಸಲಾಗುತ್ತಿದೆ. ಇದರ ಜೊತೆಗೆ ಗ್ಯಾರಂಟಿಗಳಿಗೆ ಬೇಕಾಗುವ ಹಣಕ್ಕಾಗಿ ಸಂಪನ್ಮೂಲಗಳ ಕ್ರೂಡಿಕರಣಕ್ಕಾಗಿ ಶ್ರಮಿಸಲಾಗುತ್ತಿದೆ. ಕಾಂಗ್ರೆಸ ನೀಡಿರುವ ಗ್ಯಾರಂಟಿಗಳನ್ನು ಜನರಿಗೆ ನೀಡುವುದು ಶೇ. 100ರಷ್ಟುಗ್ಯಾರಂಟಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದವರು ತಕ್ಷಣ ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಒತ್ತಾಯ ಮಾಡುವುದರ ಜೊತೆಗೆ ಜನರಿಗೆ ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಕಾಂಗ್ರಸ್‌ ಶಾಂತಿ ಮತ್ತು ಸೌಹಾರ್ದತೆಗೆ ಹೆಚ್ಚಿನ ಆದ್ಯತೆ ನೀಡಲಿದ್ದು, ಪಕ್ಷವು ನೀಡಿರುವ ಮಾತನ್ನು ಉಳಿಸಿಕೊಳ್ಳಲಿದೆ ಎಂದು ದೇಶಪಾಂಡೆ ತಿಳಿಸಿದರು.

 

ಐದು ಗ್ಯಾರಂಟಿ ಜಾರಿಗೆ ತರುವಲ್ಲಿ ಅನುಮಾನವಿಲ್ಲ

click me!