ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜನವರಿ ಮತ್ತು ಫೆಬ್ರವರಿಯಲ್ಲಿ ಜಿಲ್ಲಾಮಟ್ಟದ ಹಿಂದುಳಿದ ವರ್ಗಗಳ ಸಮಾವೇಶ (ಒಬಿಸಿ) ಹಮ್ಮಿಕೊಳ್ಳಲಾಗುತ್ತಿದ್ದು, ಅಂತಿಮವಾಗಿ ರಾಜ್ಯದ ಮಧ್ಯಭಾಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾವೇಶಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಂಗಳೂರು (ಡಿ.20): ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜನವರಿ ಮತ್ತು ಫೆಬ್ರವರಿಯಲ್ಲಿ ಜಿಲ್ಲಾಮಟ್ಟದ ಹಿಂದುಳಿದ ವರ್ಗಗಳ ಸಮಾವೇಶ (ಒಬಿಸಿ) ಹಮ್ಮಿಕೊಳ್ಳಲಾಗುತ್ತಿದ್ದು, ಅಂತಿಮವಾಗಿ ರಾಜ್ಯದ ಮಧ್ಯಭಾಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾವೇಶಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದ್ದಾರೆ. ಜ.15ರ ನಂತರ ಹಾಗೂ ಫೆ.15ರ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಒಬಿಸಿ ಸಮಾವೇಶಗಳನ್ನು ಮಾಡಲಾಗುತ್ತಿದೆ. ನಂತರ ರಾಜ್ಯಮಟ್ಟದ ಸಮಾವೇಶ ಮಾಡುವಂತೆ ರಾಹುಲ್ ಗಾಂಧಿ ಅವರೇ ಸೂಚನೆ ನೀಡಿದ್ದು, ಆ ಸಮಾವೇಶಕ್ಕೆ ರಾಹುಲ್ ಗಾಂಧಿ ಅವರು ಆಗಮಿಸುವುದಾಗಿ ತಿಳಿಸಿದ್ದಾರೆ.
ಹೀಗಾಗಿ, ಫೆಬ್ರವರಿ ಅಂತ್ಯ ಅಥವಾ ಮಾಚ್‌ರ್ ಮೊದಲ ವಾರದಲ್ಲಿ ರಾಜ್ಯದ ಮಧ್ಯ ಭಾಗದಲ್ಲಿ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ ಎಂದರು. ಜಿಲ್ಲಾಮಟ್ಟದ ಸಮಾವೇಶಗಳಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಭಾಗವಹಿಸಬೇಕು ಎಂಬ ಆಸೆ ಇದೆ. ಆದರೆ, ಅವರು ರಾಜ್ಯ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳ ಸಮಾವೇಶದಲ್ಲಿ ಭಾಗವಹಿಸಲು ಆಗುವುದಿಲ್ಲ. ಹೀಗಾಗಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಶಾಸಕರನ್ನು ಸೇರಿಸಿಕೊಂಡು ಪ್ರತಿ ಜಿಲ್ಲೆಯಲ್ಲಿ ಒಂದು ಸಮಾವೇಶಗಳನ್ನು ಮಾಡಲಾಗುವುದು ಎಂದು ಹೇಳಿದರು.
ಸಿಎಂ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಪೈಪೋಟಿ: ಸಿ.ಎಂ.ಇಬ್ರಾಹಿಂ
ಎಲ್ಲ ಜಿಲ್ಲೆಗಳಲ್ಲಿ ಇರುವ ಸಣ್ಣ ಪುಟ್ಟಸಮುದಾಯಗಳನ್ನು ಮುಂಚೂಣಿಗೆ ತರಲು, ಪಕ್ಷದ ಸಂಘಟನೆಯಲ್ಲಿ ಅಧಿಕಾರ ನೀಡಿ ಅಧಿಕಾರದ ಪಾಲುದಾರನಾಗಿ ಮಾಡುವಂತೆ ಪಕ್ಷದ ನಾಯಕರು ನನಗೆ ಕಾರ್ಯಸೂಚಿ ನೀಡಿದ್ದಾರೆ. ಈ ಆಧಾರದ ಮೇಲೆ ಪದಾಧಿಕಾರಿಗಳ ನೇಮಕ ಮಾಡಲಾಗುತ್ತಿದೆ. ಒಬಿಸಿ ಮತಗಳು ಚದುರಿದ್ದಾವೆಯೇ ಇಲ್ಲವೇ ಎಂಬ ವಿಚಾರವಾಗಿ ಚರ್ಚೆ ಮಾಡಿ ಈ ಎಲ್ಲ ಮತಗಳನ್ನು ಪಕ್ಷದತ್ತ ಸೆಳೆಯಲು ಪೂರ್ವಯೋಜಿನತವಾಗಿ ಸಂಘಟನೆ ಮಾಡಲಾಗುತ್ತಿದೆ. ಸಮಾವೇಶಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ವಿಭಾಗದ 7 ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಿದ್ದು ತಮ್ಮ ಆಡಳಿತದಲ್ಲಿ ಬೆಳಗಾವಿ ಸಮಸ್ಯೆಯನ್ನು ಏಕೆ ಬಗೆಹರಿಸಲಿಲ್ಲ?: ಸಚಿವ ಕಾರಜೋಳ
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾತನಾಡಿ, ‘ಬೆಂಗಳೂರು ವಿಭಾಗದ 7 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸಮಾವೇಶವನ್ನು ಜನವರಿಯಲ್ಲಿ ಮಾಡಲಾಗುವುದು. ಯಾವಾಗ ಎಲ್ಲಿ ಯಾವ ಸಭೆ ಮಾಡಬೇಕು ಎಂದು ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು. ಬೆಂಗಳೂರಿನಲ್ಲಿ ಮೂರು ಜಿಲ್ಲಾ ಕಾಂಗ್ರೆಸ್ ಇದ್ದರೂ ಒಂದು ಕಡೆ ದೊಡ್ಡ ಮಟ್ಟದಲ್ಲಿ ಸಮಾವೇಶ ಮಾಡುತ್ತೇವೆ. ಉಳಿದಂತೆ ಗ್ರಾಮಾಂತರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಇತರ ಜಿಲ್ಲೆಗಳಲ್ಲಿ ಪ್ರತ್ಯೇಕ ಸಮಾವೇಶ ಮಾಡಲಾಗುವುದು’ ಎಂದು ತಿಳಿಸಿದರು.