
ಮದ್ದೂರು (ಆ.26): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವುದು ಖಚಿತ. ಮದ್ದೂರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಸದಸ್ಯ ಗುರುಚರಣ್‌ಗೆ ಕಿವಿಮಾತು ಹೇಳಿದರು. ಬೆಂಗಳೂರಿನಿಂದ-ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ಪಟ್ಟಣದ ಶಿವಪುರದಲ್ಲಿ ಎಸ್.ಗುರುಚರಣ್‌ರೊಂದಿಗೆ ಕ್ಷೇತ್ರದ ಪಕ್ಷ ಸಂಘಟನೆ ಬಗ್ಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಮದ್ದೂರು ಸೇರಿದಂತೆ ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬೇಕೆಂಬ ಉದ್ದೇಶದಿಂದ ಈಗಾಗಲೇ ಟಿಕೆಚ್ ಆಕಾಂಕ್ಷಿಗಳಿಗೆ ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಸೂಚನೆ ನೀಡಲಾಗಿದೆ ಎಂದರು.
ಚುನಾವಣಾ ಪೂರ್ವಭಾವಿಯಾಗಿ ಕೆಪಿಸಿಸಿ ವತಿಯಿಂದ ಮಂಡ್ಯ ಸೇರಿದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಬಗ್ಗೆ ಆಂತರಿಕ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯಲ್ಲಿ ಮತದಾರರು ಕಾಂಗ್ರೆಸ್ ಪರ ಹೆಚ್ಚು ಒಲವು ತೋರಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್, ಕಾಂಗ್ರೆಸ್ ವಕ್ತಾರ ಎಂ.ಪಿ.ಅಮರ್‌ಬಾಬು ಮುಖಂಡರಾದ ಎಂ.ಸಿ.ಸಿದ್ದು, ಕುರಿದೊಡ್ಡಿ ಶಿವಣ್ಣ, ರಮೇಶ್, ದೊರೆಸ್ವಾಮಿ, ಅಂಬರೀಶ್, ಯೋಗೇಶ್ ಮತ್ತಿತ್ತರರು ಇದ್ದರು.
ಸಿದ್ದು ಕಾರಿಗೆ ಮೊಟ್ಟೆ ಎಸೆದಿದ್ದು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ
ಅನ್ನಭಾಗ್ಯ ನಿಲ್ಲಿಸಿದರೆ ಹಸಿವಿನ ಬೆಂಕಿಯಲ್ಲಿ ಸುಟ್ಟುಹೋಗ್ತೀರಿ: ಕೇಂದ್ರ ಒಪ್ಪಿದರೆ ಅನ್ನಭಾಗ್ಯ ಯೋಜನೆ ಸ್ಥಗಿತಗೊಳಿಸಲಾಗುವುದು ಎಂಬ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಲೇ ಇದ್ದ ಬಿಜೆಪಿ ನಾಯಕರು ಈ ಯೋಜನೆ ನಿಲ್ಲಿಸಲು ನೆಪಗಳನ್ನು ಹುಡುಕುತ್ತಿರುತ್ತಾರೆ. ರಾಜ್ಯದ ಆಹಾರ ಸಚಿವ ಉಮೇಶ್ ಕತ್ತಿ ಅವರಿಗೆ ಅಂತಹದ್ದೊಂದು ನೆಪ ಸುಪ್ರೀಂಕೋರ್ಚ್‌ನ ಆದೇಶದಲ್ಲಿ ಸಿಕ್ಕಿದ್ದಕ್ಕೆ ಸಂತಸಪಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. 2.65 ಲಕ್ಷ ಕೋಟಿ ರು. ಗಾತ್ರದ ಬಜೆಟ್‌ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವ ಹಣ 2,800 ಕೋಟಿ ರು. ಮಾತ್ರ. ಇಷ್ಟುಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು ಎಂದು ಪ್ರಶ್ನಿಸಿದ್ದಾರೆ.
ಸಿದ್ದುಗೆ ಮೊಟ್ಟೆ ಎಸೆತ ಬಗ್ಗೆ ತನಿಖೆ: ಸಿಎಂ ಬೊಮ್ಮಾಯಿ
ಅಭಿವೃದ್ಧಿ ಚಟುವಟಿಕೆಗಳು ಸ್ಥಗಿತಗೊಂಡು, ಕಲ್ಯಾಣ ಕಾರ್ಯಕ್ರಮಗಳು ದುಡ್ಡಿಲ್ಲದೆ ನೆನೆಗುದಿಗೆ ಬೀಳಲು ಕಾರಣ ಈ ಸರ್ಕಾರದ ಕಮಿಷನ್ ದಾಹ. 40 ಪರ್ಸೆಂಟ್ ಕಮಿಷನ್ ಈಗ ಶೇ.50ಕ್ಕೆ ಏರಿಕೆಯಾಗಿದೆಯಂತೆ. ಈಗ ಉಮೇಶ್ ಕತ್ತಿಯಂತಹ ಬೇಜವಾಬ್ದಾರಿ ಸಚಿವರು ಅನ್ನಭಾಗ್ಯ ಯೋಜನೆ ನಿಲ್ಲಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಉಮೇಶ್ ಕತ್ತಿಯವರೇ, ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟುಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ, ಎಚ್ಚರ ಇರಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.