ಸೂಡಾನ್ ಆಂತರಿಕ ಸಂಘರ್ಷದ ಮಧ್ಯೆ ಸಿಕ್ಕಿಹಾಕಿಕೊಂಡಿದ್ದ ಭಾರತೀಯರ ರಕ್ಷಣೆ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿತು. ಅಲ್ಲಿ ಅತಂತ್ರ ಸ್ಥಿತಿಯಲ್ಲಿದ್ದ ಭಾರತೀಯರನ್ನು ಕರೆತರುವಲ್ಲಿ ಸಮಸ್ಯೆಯಾಗಿದ್ದರೆ ಅದನ್ನು ಚುನಾವಣಾ ವಿಚಾರವಾಗಿ ಬಳಸಲು ಕಾಂಗ್ರೆಸ್ ಮುಂದಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಬಳ್ಳಾರಿ (ಮೇ.06): ಸೂಡಾನ್ ಆಂತರಿಕ ಸಂಘರ್ಷದ ಮಧ್ಯೆ ಸಿಕ್ಕಿಹಾಕಿಕೊಂಡಿದ್ದ ಭಾರತೀಯರ ರಕ್ಷಣೆ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿತು. ಅಲ್ಲಿ ಅತಂತ್ರ ಸ್ಥಿತಿಯಲ್ಲಿದ್ದ ಭಾರತೀಯರನ್ನು ಕರೆತರುವಲ್ಲಿ ಸಮಸ್ಯೆಯಾಗಿದ್ದರೆ ಅದನ್ನು ಚುನಾವಣಾ ವಿಚಾರವಾಗಿ ಬಳಸಲು ಕಾಂಗ್ರೆಸ್ ಮುಂದಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ನಗರದ ಹೊರವಲಯದ ಸತ್ಯಂ ಕಾಲೇಜು ಮೈದಾನದಲ್ಲಿ ಶುಕ್ರವಾರ ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಸೂಡಾನ್ ಸಂತ್ರಸ್ತರ ರಕ್ಷಣೆಗಾಗಿ ಸರ್ಕಾರ ಕೈಗೊಂಡಿದ್ದ ‘ಆಪರೇಷನ್ ಕಾವೇರಿ’ ವಿಚಾರ ಪ್ರಸ್ತಾಪಿಸಿ ಪ್ರತಿಪಕ್ಷದ ವಿರುದ್ಧ ಹರಿಹಾಯ್ದರು. ಬಿಜೆಪಿ ಸರ್ಕಾರವು ಸೂಡಾನ್‌ನಲ್ಲಿ ಸಂತ್ರಸ್ತ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಪ್ರಯತ್ನಿಸುತ್ತಿದ್ದಾಗ ಕಾಂಗ್ರೆಸ್ ದೇಶದ ಜತೆ ನಿಲ್ಲಲಿಲ್ಲ. ಬದಲಾಗಿ ಸೂಡನ್ ಸಂತ್ರಸ್ತರ ವಿಚಾರದಲ್ಲೂ ರಾಜಕೀಯ ಮಾಡುವುದರಲ್ಲಿತ್ತು.
undefined
ಪ್ರಧಾನಿ ಮೋದಿ ಬೆಂಗ್ಳೂರು ಮೆಗಾ ರೋಡ್ ಶೋಗೆ ಹೈಕೋರ್ಟ್ ಅಸ್ತು
ಈ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ರಾಜಕೀಯ ಲಾಭ ಪಡೆಯುವ ಯೋಜನೆ ಹಾಕಿಕೊಂಡಿತ್ತು. ಅದೃಷ್ಟವಶಾತ್ ನಾವು ಅಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಹಕ್ಕಿಪಿಕ್ಕಿ ಸಮುದಾಯದವರನ್ನು ಸೇರಿ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದ್ದೇವೆ. ಈ ರೀತಿಯ ಸಂಕಷ್ಟದ ಸಮಯದಲ್ಲೂ ರಾಜಕೀಯ ಮಾಡಿದ್ದಕ್ಕಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಮೋದಿ ಹೇಳಿದರು. ವಿಶ್ವದ ಯಾವುದೇ ಭಾಗದಲ್ಲಿ ಭಾರತೀಯರು ಸಂಕಷ್ಟದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ನಾವು ಮಾಡಿಯೇ ತೀರುತ್ತೇವೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
ಮೋದಿ ಇದ್ದರೆ ದೇಶವಾಸಿಗಳನ್ನು ಕಷ್ಟಕಾಲದಲ್ಲಿ ಕೈಬಿಡಲ್ಲ ಎಂದು ಅಭಯ ನೀಡಿದ ಪ್ರಧಾನಿ, ಕೋವಿಡ್ ಸಂದರ್ಭಗಳಲ್ಲಿ ಲಕ್ಷಾಂತರ ಮಂದಿಯನ್ನು ಕಾಪಾಡಿದೆವು. ಉಕ್ರೇನ್ ಯುದ್ಧ ಸಂದರ್ಭದಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆಸಿಕೊಂಡೆವು. ಅಷ್ಘಾನಿಸ್ತಾನ, ಯೆಮೆನ್ ಸಂಘರ್ಷದ ಸಂದರ್ಭದಲ್ಲೂ ನಾವು ಸಾವಿರಾರು ಮಂದಿ ಭಾರತೀಯರನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾದೆವು. ಪಾಕಿಸ್ತಾನದ ವಶದಲ್ಲಿದ್ದ ವಾಯುಸೇನೆಯ ಪೈಲಟ್ ಅಭಿನಂದನ್‌ನನ್ನೂ ಸುರಕ್ಷಿತವಾಗಿ ಕರೆತಂದೆವು. ನಾವು ಸಂಕಷ್ಟದ ಸಮಯದಲ್ಲಿ ರಾಜಕೀಯ ಮಾಡುವುದಿಲ್ಲ. ಇದು ನಮ್ಮ ಬದ್ಧತೆ. ಆದರೆ ಕಾಂಗ್ರೆಸ್‌ಗೆ ಆ ಬದ್ಧತೆ ಇಲ್ಲ ಎಂದರು.
ಹಾವೇರಿಲ್ಲಿಂದು ಮೋದಿ ಮೇನಿಯಾ: ವಿಧಾನಸಭೆ ಚುನಾವಣೆ ಪ್ರಚಾರದ ಅಬ್ಬರ ಹೆಚ್ಚುತ್ತಿದ್ದು, ಮತದಾನಕ್ಕೆ ದಿನಗಣನೆ ಶುರುವಾಗಿರುವ ಈ ಸಂದರ್ಭದಲ್ಲಿ ಏ. 6ರಂದು ಪ್ರಧಾನಿ ನರೇಂದ್ರ ಮೋದಿ ಹಾವೇರಿಗೆ ಭೇಟಿ ನೀಡುತ್ತಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಬೆಂಗಳೂರಲ್ಲಿಂದು ಮೋದಿ 26.5 ಕಿ.ಮೀ. ರೋಡ್ ಶೋ: ಸಂಚಾರದಲ್ಲೂ ಬದಲಾವಣೆ
ನಗರದ ಹೊರವಲಯದ ಅಜ್ಜಯ್ಯನ ಗುಡಿ ಎದುರಿನ ಕೆಲ ತಿಂಗಳ ಹಿಂದೆ ಸಾಹಿತ್ಯ ಸಮ್ಮೇಳನ ನಡೆದ ಸ್ಥಳದಲ್ಲಿ ಮೋದಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶನಿವಾರ ಸಂಜೆ 4 ಗಂಟೆಗೆ ಮೋದಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚಾರ ಭಾಷಣ ಮಾಡಲಿದ್ದಾರೆ. ಜಿಲ್ಲೆಯ 6 ಕ್ಷೇತ್ರಗಳ ಹಾಗೂ ಧಾರವಾಡ ಮತ್ತು ಗದಗ ಜಿಲ್ಲೆಗಳ ಸೇರಿದಂತೆ ಬಿಜೆಪಿಯ ಒಟ್ಟು 13 ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ಮಾಡಲಿದ್ದಾರೆ. ಮೋದಿ ಕಾರ್ಯಕ್ರಮಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಕಳೆದ ಎರಡು ದಿನಗಳಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.