ಗದಗ (ಜ.18) : ಪ್ರಜಾಧ್ವನಿ ಕಾರ್ಯಕ್ರಮದ ಮೂಲಕ ರಾಜ್ಯದ ಜನರ ನಾಡಿಮಿಡಿತ ಅರಿಯುವುದಕ್ಕಾಗಿ ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಜ. 18 ರಂದು ಬುಧವಾರ ಸಂಜೆ 4ಕ್ಕೆ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ನಡೆಯಲಿದ್ದು ಆ ಬೃಹತ್ ವೇದಿಕೆಯಲ್ಲಿ ಕೈ ಶಕ್ತಿ ಪ್ರದರ್ಶನಕ್ಕೆ ಅಂತಿಮ ಸಿದ್ಧತೆ ಮಾಡಿಕೊಂಡಿದೆ.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್, ಪಕ್ಷದ ಮುಖಂಡರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ, ದ್ರುವನಾರಾಯಣ, ಮಯೂರ ಜಯಕುಮಾರ, ರಾಮಲಿಂಗರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಜಿಲ್ಲೆಯ ಶಾಸಕ ಎಚ್.ಕೆ. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ, ಮಾಜಿ ಸಚಿವ ಬಿ.ಆರ್. ಯಾವಗಲ್ಲ ಹಾಗೂ ಪಕ್ಷದ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ.
undefined
'ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಪ್ರಜಾಧ್ವನಿ ಯಾತ್ರೆ'
50 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ:
ಗದಗ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಈಗಾಗಲೇ ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಿದ್ದು, ಕಾರ್ಯಕ್ರಮಕ್ಕೆ ಜಿಲ್ಲೆಯ 7 ತಾಲೂಕುಗಳಿಂದ 50 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಕಾರ್ಯಕ್ರಮಕ್ಕೆ ಬರುವ ಜನತೆಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಗದಗ ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈ ಪ್ರಜಾಧ್ವನಿ ಕಾರ್ಯಕ್ರಮ ಪ್ರಮುಖ ಪಾತ್ರವಹಿಸಲಿದೆ. ಇದಕ್ಕಾಗಿ ಪಕ್ಷದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಎಲ್ಲ ನಾಯಕರು ಆಗಮಿಸುತ್ತಿದ್ದು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು.
- ಜಿ.ಎಸ್. ಪಾಟೀಲ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಶಾಸಕ
ಬಿಜೆಪಿ ಪಕ್ಷದ ದುರಾಡಳಿತವು ರಾಜ್ಯಕ್ಕೆ ಕಳಂಕವನ್ನು ತಂದಿದೆ. ಬಿಜೆಪಿಯ ದುರಾಡಳಿತ, ಬಡವಿರೋಧಿ ನೀತಿಯಿಂದ ರಾಜ್ಯದ ಜನತೆ ಬೇಸತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು 4 ಸ್ಥಾನಗಳಲ್ಲಿ ಬಹುಮತದಿಂದ ಗೆಲವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರಜಾಧ್ವನಿ ಕಾರ್ಯಕ್ರಮ ಪಕ್ಷ ಸಂಘಟನೆಗೆ ಭಾರಿ ಬಲ ನೀಡಲಿದೆ.
- ಬಸವರಾಜ ಸುಂಕಾಪುರ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು, ಬಿಜೆಪಿ ಸರ್ಕಾರದ ದುರಾಡಳಿತವನ್ನು ಸಾರ್ವಜನಿಕರಿಗೆ ತಿಳಿಸುವುದು, ಜನರ ನಾಡಿಮಿಡತ ಅರಿವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದ್ದು, ನಮ್ಮ ಪಕ್ಷದ ಹಿರಿಯರು ಜಿಲ್ಲೆಯ ಜನತೆಗೆ ಕಾಂಗ್ರೆಸ್ ಅಧಿಕಾರವಧಿಯಲ್ಲಿನ ಜನಪರ ಕಾರ್ಯಗಳ ಬಗ್ಗೆ ತಿಳಿಸಲಿದ್ದಾರೆ.
- ವಿ.ಬಿ. ಸೋಮನಕಟ್ಟಿಮಠ, ಜಿಲ್ಲಾ ಕಾಂಗ್ರೆಸ್‌ನ ಮಹಾ ಪ್ರಧಾನ ಕಾರ್ಯದರ್ಶಿ
ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಜನ ವಿರೋಧಿ ಆಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದಾರೆ. ಬೆಲೆ ಏರಿಕೆಯಿಂದಾಗಿ ಕಂಗೆಟ್ಟು ಹೋಗಿದ್ದಾರೆ. ಜನರಿಗೆ ಇದನ್ನು ತಿಳಿಸುವುದು, ಕಾಂಗ್ರೆಸ್ ಪಕ್ಷದ ಅಧಿಕಾರಾವಧಿಯಲ್ಲಿ ಬಡವರ ಪರವಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಲಾಗುವುದು.
- ಅಶೋಕ ಮಂದಾಲಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ
ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ಇಂದು ಪುನಾರಂಭ: ಹೊಸಪೇಟೆ, ಕೊಪ್ಪಳದಲ್ಲಿ ಬೃಹತ್ ಸಮಾವೇಶ