ಬೆಳಗಾವಿಯಲ್ಲಿ ಆರಂಭವಾಗಿರುವ ಕಾಂಗ್ರೆಸ್‌ನ ‘ಪ್ರಜಾಧ್ವನಿ’ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು, ಅಂದು ಸಂಜೆ 4 ಗಂಟೆಗೆ ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರು (ಜ.21) : ಬೆಳಗಾವಿಯಲ್ಲಿ ಆರಂಭವಾಗಿರುವ ಕಾಂಗ್ರೆಸ್‌ನ ‘ಪ್ರಜಾಧ್ವನಿ’ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು, ಅಂದು ಸಂಜೆ 4 ಗಂಟೆಗೆ ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಸರಿಯಾಗಿ ಜನಸ್ಪಂದನೆ ಮಾಡುತ್ತಿಲ್ಲ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸ್ಕಾಲರ್‌ಶಿಪ್ ನಿಲ್ಲಿಸಿದ್ದಾರೆ. ಇದನ್ನೆಲ್ಲ ವಿರೋಧಿಸಲು ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆ(Prajadhwani yatre) ಹಮ್ಮಿಕೊಂಡಿದೆ ಎಂದು ಹೇಳಿದರು.
ವೈದ್ಯರ ಗಾಂಜಾಲೋಕ: ವಿದ್ಯಾರ್ಥಿಗಳು ಅಮಾನತು, ವೈದ್ಯರಿಗೆ ಗೇಟ್ ಪಾಸ್ ಕೊಟ್ಟ ಕೆಎಂಸಿ ಆಸ್ಪತ್ರೆ!
ಸಿದ್ದು, ಡಿಕೆಶಿ ಭಾಗಿ: ಜ.22ರಂದು ಬೆಳಗ್ಗೆ ಉಡುಪಿಯಲ್ಲಿ ಪ್ರಜಾಧ್ವನಿ ಯಾತ್ರೆ ಮುಗಿಸಿ ಮಂಗಳೂರಿಗೆ ಆಗಮಿಸಲಿದೆ. ಸಭಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಉಸ್ತುವಾರಿ ಸುರ್ಜೇವಾಲಾ, ರೋಜಿ ಜಾನ್, ಎಂ.ಬಿ. ಪಾಟೀಲ…, ಕೆಪಿಸಿಸಿ ಉಸ್ತುವಾರಿ ಸಲೀಂ ಮಹಮ್ಮದ್, ಮಧು ಬಂಗಾರಪ್ಪ, ಧ್ರುವ ನಾರಾಯಣ್, ಎಚ್.ಕೆ. ಪಾಟೀಲ್ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಮಾವೇಶಕ್ಕೆ ಜಿಲ್ಲೆಯ ಒಟ್ಟು 1860 ಬೂತ್‌ಗಳಲ್ಲಿ ಪ್ರತಿ ಬೂತ್‌ನಿಂದ 10- 20 ಮಂದಿ ಕಾರ್ಯಕರ್ತರು ಆಗಮಿಸಲಿದ್ದಾರೆ. ಸುಮಾರು 25ರಿಂದ 30 ಸಾವಿರದಷ್ಟುಸಕ್ರಿಯ ಕಾರ್ಯಕರ್ತರು ಭಾಗವಹಿಸುತ್ತಾರೆ. ಈ ಬೂತ್ ಕಾರ್ಯಕರ್ತರು ತಮ್ಮ ವ್ಯಾಪ್ತಿಯ 200- 300 ಮನೆಗಳಿಗೆ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಹರೀಶ್ ಕುಮಾರ್ ತಿಳಿಸಿದರು.
18 ದಿನಗಳಲ್ಲಿ ಕೋಟಿ ಮೌಲ್ಯದ ಚಿನ್ನ ವಶ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚಿದ ಗೋಲ್ಡ್ ಸ್ಮಗ್ಲಿಂಗ್!
ಸಮಾವೇಶದಲ್ಲಿ ಅಶೋಕ್ ರೈ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದ ಅವರು, ಕಾರ್ಯಕ್ರಮಕ್ಕೆ ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಮನೆಗೆ ತೆರಳಿ ಆಹ್ವಾನಿಸಿದ್ದೇವೆ. ಅವರು ಬರುವುದಾಗಿ ತಿಳಿಸಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಮನಪಾ ಸದಸ್ಯ ನವೀನ್ ಡಿಸೋಜ ಇದ್ದರು.