ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ಟಾಪ್‌ ಗೇರ್‌..!

Published : Apr 28, 2022, 04:31 AM IST
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ಟಾಪ್‌ ಗೇರ್‌..!

ಸಾರಾಂಶ

*    ಸುರ್ಜೇವಾಲಾ ನೇತೃತ್ವದಲ್ಲಿ ಮಹತ್ವದ ಸಭೆ *   ಮ್ಯಾಜಿಕ್‌ ನಂಬರ್‌ ತಲುಪಲು ಕಾರ್ಯಸೂಚಿ *   ರಾಜ್ಯ, ಜಿಲ್ಲಾ ಮಟ್ಟದಲ್ಲಿ ಪ್ರಚಾರ ಸಮಿತಿ ರಚನೆ  

ಬೆಂಗಳೂರು(ಏ.28):  ವಿಧಾನಸಭಾ ಚುನಾವಣೆಯನ್ನು(Karnataka Assembly Election) ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌(Congress), ಆಡಳಿತ ಚುಕ್ಕಾಣಿ ಹಿಡಿಯಲು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪ್ರಚಾರ ಸಮಿತಿ ರಚನೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಪ್ರಣಾಳಿಕೆ, ನೂತನ ಪದಾಧಿಕಾರಿಗಳಿಗೆ ಹೊಣೆ ನಿಗದಿ, ಪ್ರತಿ ತಿಂಗಳೂ ಎಲ್ಲ ಜಿಲ್ಲೆಯಲ್ಲೂ ಕಾರ್ಯಕರ್ತರ ಸಭೆ ಸೇರಿದಂತೆ ರಣತಂತ್ರಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದೆ.

ಬುಧವಾರ ಕೆಪಿಸಿಸಿ(KPCC) ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ(Randeep Surjewala) ನೇತೃತ್ವದಲ್ಲಿ ನಡೆದ ಮುಖಂಡರು, ನೂತನ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆದಿದ್ದು, ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್‌ ಸಂಖ್ಯೆ ತಲುಪಲು ಏನೆಲ್ಲಾ ಕಾರ್ಯಸೂಚಿ ಹಮ್ಮಿಕೊಳ್ಳಬೇಕು, ಅದನ್ನು ಅನುಷ್ಠಾನಕ್ಕೆ ತರುವುದು ಹೇಗೆ ಎಂಬ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ.
ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪ್ರಚಾರ ಸಮಿತಿ ರಚನೆ ಮಾಡಬೇಕು. ಪ್ರಚಾರ ಸಮಿತಿಗಳು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣವನ್ನೂ(Social Media) ನಿರ್ವಹಿಸಬೇಕು. ಮುಖಂಡರು ಎಲ್ಲ ಜಿಲ್ಲೆಯಲ್ಲೂ ಪ್ರತಿ ತಿಂಗಳೂ ಕಾರ್ಯಕರ್ತರ ಸಭೆ ನಡೆಸಬೇಕು. ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಪರಿಹರಿಸಲು ಮುಂದಾಗಬೇಕು. ರಾಜ್ಯ ಮಟ್ಟದ ನಾಯಕರು ಪ್ರತಿ ತಿಂಗಳೂ ಒಂದು ಬ್ಲಾಕ್‌ಗೆ ಭೇಟಿ ನೀಡಿ ಸಮಸ್ಯೆಗಳಿದ್ದರೆ ಪರಿಹರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ದಲಿತ ಸಿಎಂ ಮಾಡುತ್ತೇವೆಂದು ತಮ್ಮ ಮಕ್ಕಳ ಮೇಲೆ ಸಿದ್ದು ಪ್ರಮಾಣ ಮಾಡಲಿ: ಶ್ರೀರಾಮುಲು

ವಾಟ್ಸಾಪ್‌ ಗ್ರೂಪ್‌ಗೆ ಒತ್ತು:

ಹಗರಣ, ಅಕ್ರಮ ನಡೆದರೆ ಜಿಲ್ಲಾ ಮಟ್ಟದಲ್ಲೂ ಡಿಸಿಸಿಗಳು ಪ್ರತಿಭಟನೆ ನಡೆಸಬೇಕು. ಪ್ರತಿ ವಿಧಾನ ಸಭಾ ಕ್ಷೇತ್ರ ಸೇರಿದಂತೆ ವಾರ್ಡ್‌ವಾರು ವಾಟ್ಸಾಪ್‌ ಗ್ರೂಪ್‌ ರಚನೆ ಮಾಡಬೇಕು. ಎಲ್ಲ ನಾಯಕರ ಕಾರ್ಯಕ್ರಮಗಳನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಬೇಕು. ಜಿಲ್ಲಾ, ತಾಲೂಕು, ಬ್ಲಾಕ್‌ ಮಟ್ಟದ ಸಮಿತಿಗಳು ಪ್ರತಿ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ನಿರ್ಧರಿಸಲಾಗಿದೆ.

ಮುಂಚೂಣಿ ಘಟಕಗಳು ಸಂಘಟನೆ ಬಲಪಡಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಜನರಿಗೆ ಮನಮುಟ್ಟುವಂತೆ ತಲುಪಿಸಬೇಕು. ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಮತದಾರರರಿಗೆ(Voters) ಮನನ ಮಾಡಿಕೊಡಬೇಕು. ಚುನಾವಣೆಗೆ ಇನ್ನೂ ಸಮಯವಿದೆ ಎಂದು ಸುಮ್ಮನಿರದೇ ಈಗಿನಿಂದಲೇ ಅಖಾಡಕ್ಕೆ ಇಳಿಯಬೇಕು. ಶತಾಯಗತಾಯ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಸಂಘಟಿತವಾಗಿ ಶ್ರಮಿಸಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದುಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌, ಕಾರ್ಯಾಧ್ಯಕ್ಷರಾದ ಈಶ್ವರ್‌ ಖಂಡ್ರೆ, ಸಲೀಂ ಅಹ್ಮದ್‌, ರಾಮಲಿಂಗಾರೆಡ್ಡಿ, ಸತೀಶ್‌ ಜಾರಕಿಹೊಳಿ, ಧ್ರುವನಾರಾಯಣ್‌, ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಶಾಸಕ ದಿನೇಶ್‌ ಗುಂಡೂರಾವ್‌ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜೂನ್‌ ತಿಂಗಳಲ್ಲಿ ಚಿಂತನಾ ಶಿಬಿರ

ತಳಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಲು ಜೂನ್‌ನಲ್ಲಿ ಮೂರು ದಿನಗಳ ಚಿಂತನಾ ಶಿಬಿರವನ್ನು ಕಾಂಗ್ರೆಸ್‌ ನಡೆಸಲಿದೆ. ಇದರಲ್ಲಿ ರಾಷ್ಟ್ರೀಯ ಮುಖಂಡರು ಭಾಗವಹಿಸಿ ಕೆಪಿಸಿಸಿಗೆ ಮಾರ್ಗದರ್ಶನ ನೀಡಲಿದ್ದಾರೆ. ರಾಜ್ಯದ ಯಾವ ಭಾಗದಲ್ಲಿ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು, ಮುಖಂಡರ ನಡುವೆ ಸಮನ್ವಯ ಹೇಗೆ ಸಾಧಿಸಬೇಕು, ಬೂತ್‌ ಮಟ್ಟದ ಸಂಘಟನೆ, ಡಿಜಿಟಲ್‌ ಸದಸ್ಯತ್ವ ಪಡೆದವರ ಬಳಸಿಕೊಳ್ಳುವಿಕೆ, ಸೋಷಿಯಲ್‌ ಮೀಡಿಯಾಗಳ ಬಳಕೆ ಬಗ್ಗೆ ಶಿಬಿರದಲ್ಲಿ ಚರ್ಚೆ ನಡೆಯಲಿದೆ.

Karnataka Politics: ಬಿಜೆಪಿ ಆಹ್ವಾನ ನೀಡಿದ್ರೆ ಕಾಂಗ್ರೆಸ್‌ ಪಕ್ಷವೇ ಖಾಲಿ: ಸಚಿವ ಮುನಿರತ್ನ

ಪ್ರತಿ ಕ್ಷೇತ್ರಕ್ಕೂ ಪ್ರಣಾಳಿಕೆ

ಭೌಗೋಳಿಕ ವಿಭಿನ್ನತೆ ಆಧಾರದಲ್ಲಿ ಪ್ರದೇಶಾವಾರು ಸಮಸ್ಯೆಗಳು ಬೇರೆ ಬೇರೆ ಆಗಿರುವುದರಿಂದ ಪ್ರತಿ ವಿಧಾನ ಸಭಾ ಕ್ಷೇತ್ರದ ಸ್ಥಳೀಯ ಆದ್ಯತೆಗಳನ್ನು ಪರಿಗಣಿಸಿ ಪ್ರತ್ಯೇಕ ಪ್ರಣಾಳಿಕೆ ಹೊರತರಲು ಕಾಂಗ್ರೆಸ್‌ ಮುಂದಾಗಿದೆ. ಪ್ರಣಾಳಿಕೆಗಾಗಿ ಸ್ಥಳೀಯ ಮುಖಂಡರು ಸಿದ್ಧತೆ ಕೈಗೊಳ್ಳಬೇಕು. ಸಂಘ-ಸಂಸ್ಥೆಗಳು, ವಿಧಾನ ಸಭಾ ಕ್ಷೇತ್ರಗಳ ಉಸ್ತುವಾರಿಗಳ ಜೊತೆ ಪ್ರಧಾನ ಕಾರ್ಯದರ್ಶಿಗಳು ಉತ್ತಮ ಬಾಂಧವ್ಯ ಹೊಂದಿರಬೇಕು. ಪ್ರಣಾಳಿಕೆ ತಯಾರಿಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯಸಭೆ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತಿತರರು ಹಾಜರಿದ್ದರು.

ರಣತಂತ್ರ ಏನು?

- ರಾಜ್ಯ, ಜಿಲ್ಲಾ ಮಟ್ಟದಲ್ಲಿ ಪ್ರಚಾರ ಸಮಿತಿ ರಚನೆ
- ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಪ್ರಣಾಳಿಕೆ
- ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಕಾರ‍್ಯಕರ್ತರ ಸಭೆ
- ಕಾರ‍್ಯಕರ್ತರ ಅಹವಾಲು ಸ್ವೀಕರಿಸಿ ಪರಿಹರಿಸಬೇಕು
- ವಾರ್ಡ್‌ವಾರು ವಾಟ್ಸಾಪ್‌ ಗ್ರೂಪ್‌ ರಚಿಸಬೇಕು
- ಸರ್ಕಾರಗಳ ವೈಫಲ್ಯ ಜನರಿಗೆ ತಲುಪಿಸಬೇಕು
- ಕಾಂಗ್ರೆಸ್‌ನ ಜನಪರ ಯೋಜನೆ ಬಗ್ಗೆ ಪ್ರಚಾರ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!