ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ತಯಾರಿ ನಡೆಯುತ್ತಿದೆ. ಹಿರಿಯ ನಾಯಕರಿಬ್ಬರು ಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ. ಇದರ ನಡುವೆ ಕಾಂಗ್ರೆಸ್ ವಿರುದ್ಧ ಬಂಡಾಯವದ್ದ ಜಿ23 ನಾಯಕರ ಗುಂಪು ಖಡಕ್ ವಾರ್ನಿಂಗ್ ನೀಡಿದೆ.
ನವದೆಹಲಿ(ಸೆ.24): ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಘೋಷಣೆ ಕಾಂಗ್ರೆಸ್‌ನಲ್ಲಿ ತೀವ್ರ ತಳಮಳ ಸೃಷ್ಟಿಸಿದೆ. ಬಣಗಳ ತಿಕ್ಕಾಟ ಹೆಚ್ಚಾಗಿದೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಸಂಸದ ಶಶಿ ತರೂರ್ ಕಣದಲ್ಲಿದ್ದಾರೆ. ಇತ್ತ ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು ಅನ್ನೋ ಬಣವೂ ಹೆಚ್ಚಾಗಿದೆ. ಇದರ ನಡುವೆ ಕಾಂಗ್ರೆಸ್‌ಗೆ ಬಂಡಾಯವೆದ್ದ ಜಿ23 ನಾಯಕರು ಇದೀಗ ಹೊಸ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಕೇವಲ ಹೆಸರಿಗೆ ಮಾತ್ರ ಆಗಬಾರದು. ಇಷ್ಟೇ ಅಲ್ಲ ಕಾಂಗ್ರೆಸ್ ಪಕ್ಷಕ್ಕೆ ಆಯ್ಕೆಯಾಗುವ ಅಧ್ಯಕ್ಷ ಪೂರ್ಣ ಪ್ರಮಾಣದ ಅಧ್ಯಕ್ಷನಾಗಿರಬೇಕು. ಅಲ್ಪಾವಧಿಗೆ ಅಧ್ಯಕ್ಷರನ್ನಾಗಿ ಮಾಡಬಾರದು ಎಂದು ಜಿ23 ನಾಯಕ ಪೃಥ್ವಿರಾಜ್ ಚೌವ್ಹಾಣ್ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು ಗಾಂಧಿ ನಾಯಕತ್ವದ ಹೊರತಾಗಿ ಸಮರ್ಥರ ಅಗತ್ಯವಿದೆ ಎಂದು ಜಿ23 ನಾಯಕರು ಈ ಹಿಂದೆ ಆಗ್ರಹಿಸಿದ್ದಾರೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್‌ನಿಂದ ಬಂಡಾಯ ಎದ್ದು ಜಿ23 ಗುಂಪು ಆರಂಭಿಸಿ ಕಾಂಗ್ರೆಸ್ ಬದಲಾವಣೆಗೆ ಪಟ್ಟು ಹಿಡಿದಿದ್ದರು. ಇದೀಗ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಾರದರ್ಶಕವಾಗಿ ನಡೆಯಬೇಕು ಎಂದು ಚವ್ಹಾಣ್ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಸ್ವಾಗತಿಸುತ್ತೇವೆ. ಆದರೆ ಚುನಾವಣೆ ಇಲ್ಲದೆ ರಾಹುಲ್ ಗಾಂಧಿ ಅಧ್ಯಕ್ಷನಾಗಲಿ ಎಂದು ನಿರ್ಣಯ ಕೈಗೊಳ್ಳುವುದು ಸೂಕ್ತವಲ್ಲ ಎಂದು ಚವ್ಹಾಣ್ ಹೇಳಿದ್ದಾರೆ.
ಸಿದ್ದರಾಮಯ್ಯ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ: ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಮಾಹಿತಿ
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ ಎರಡೆರಡು ಹುದ್ದೆಯಲ್ಲಿರುವುದಾದರೆ ಗೆಹ್ಲೋಟ್ ಬೆಂಬಲಿಸುವುದಿಲ್ಲ ಎಂದು ಚವ್ಹಾಣ್ ಹೇಳಿದ್ದಾರೆ.
ಗಾಂಧಿ ಕುಟುಂಬದಿಂದ ಈ ಸಲ ಯಾರೂ ಸ್ಪರ್ಧಿಸಲ್ಲ: ಗೆಹ್ಲೋಟ್
ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಗಾಂಧಿ ಕುಟುಂಬದಿಂದ ಯಾರೂ ಈ ಬಾರಿ ಸ್ಪರ್ಧಿಸಲ್ಲ. ಹಾಗಂತ ನನಗೆ ರಾಹುಲ್ ಗಾಂಧಿ ಅವರೇ ತಿಳಿಸಿದ್ದಾರೆ’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಅಲ್ಲದೆ, ‘ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ’ ಎಂದು ಅಧಿಕೃತ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ನಾನು ರಾಹುಲ್ ಗಾಂಧಿ ಅವರನ್ನು ಅನೇಕ ಬಾರಿ ಸ್ಪರ್ಧಿಸಲು ಕೋರಿದೆ. ಆದರೆ ಅವರು ಒಪ್ಪಲಿಲ್ಲ. ಗಾಂಧಿ ಕುಟುಂಬದವರು ಮುಂದಿನ ಅಧ್ಯಕ್ಷ ಆಗುವುದಿಲ್ಲ ಎಂದು ಸ್ಪಷ್ಟವಾಗಿ ನನಗೆ ಹೇಳಿದರು’ ಎಂದು ತಿಳಿಸಿದರು. ‘ನಾನು ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲಿದ್ದೇನೆ. ಕೇರಳದಿಂದ ರಾಜಸ್ಥಾನಕ್ಕೆ ತೆರಳುವೆ. ಅಲ್ಲಿ ನಾಮಪತ್ರ ಹಾಕುವ ದಿನಾಂಕ ಘೋಷಣೆ ಞಅಡುವೆ’ ಎಂದು ಗೆಹ್ಲೋಟ್ ನುಡಿದರು.
ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ, Bharat Jodo Yatra ವಿರುದ್ಧ ಹೈಕೋರ್ಟ್‌ಗೆ ಅರ್ಜಿ!
ರಾಹುಲ್ ಪರ ಮತ್ತೆ ಬಹುಪರಾಕ್
ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕಕಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಮತ್ತೆ ರಾಹುಲ್ ಗಾಂಧಿ ಅವರನ್ನೇ ಅಧ್ಯಕ್ಷ ಹುದ್ದೆಯಲ್ಲಿ ಕೂರಿಸಲು ಹಲವು ರಾಜ್ಯ ಘಟಕಗಳು ಬಹಿರಂಗವಾಗಿಯೇ ಒತ್ತಾಯ ಆರಂಭಿಸಿವೆ. ಜೊತೆಗೆ ಈ ಕುರಿತು ಗೊತ್ತುವಳಿಯನ್ನೇ ಅಂಗೀಕರಿಸಿವೆ. ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವ ಹೊತ್ತಿನಲ್ಲೇ ಪಿ.ಚಿದಂಬರಂ, ಜೈರಾಮ್ ರಮೇಶ್ ಸೇರಿದಂತೆ ಹಲವು ನಾಯಕರು, ಯಾರು ನೂತನ ಅಧ್ಯಕ್ಷರಾದರೂ, ಪಕ್ಷದಲ್ಲಿ ರಾಹುಲ್ ಸ್ಥಾನಕ್ಕೆ ಯಾವುದೇ ಚ್ಯುತಿ ಇಲ್ಲ ಎಂಬ ಹೇಳಿಕೆಗಳ ನಡುವೆಯೇ ಇದೀಗ ರಾಜ್ಯ ಘಟಕಗಳಿಂದಲೂ ಇಂಥದ್ದೇ ಒತ್ತಾಯ, ಆಗ್ರಹ ಕೇಳಿಬಂದಿದೆ.