ಪಕ್ಷದಲ್ಲಿ ನನ್ನ ಬಗ್ಗೆ ತಾರತಮ್ಯ, ಖರ್ಗೆಗೆ ಕೆಲವರ ಬಹಿರಂಗ ಬೆಂಬಲ: ತರೂರ್‌ ಕಿಡಿ

Published : Oct 14, 2022, 08:39 AM IST
ಪಕ್ಷದಲ್ಲಿ ನನ್ನ ಬಗ್ಗೆ ತಾರತಮ್ಯ, ಖರ್ಗೆಗೆ ಕೆಲವರ ಬಹಿರಂಗ ಬೆಂಬಲ: ತರೂರ್‌ ಕಿಡಿ

ಸಾರಾಂಶ

Congress Presidential Election: ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಗಳಲ್ಲಿ ಒಬ್ಬರಾದ ಶಶಿ ತರೂರ್‌ ಪಕ್ಷದ ಕೆಲವು ನಾಯಕರ ಕುರಿತಾಗಿ ಅಸಮಾಧಾನ ಹೊರಹಾಕಿದ್ದಾರೆ. 

ನವದೆಹಲಿ (ಅ. 14): ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಗಳಲ್ಲಿ ಒಬ್ಬರಾದ ಶಶಿ ತರೂರ್‌ (Shashi Tharoor) ಪಕ್ಷದ ಕೆಲವು ನಾಯಕರ ಕುರಿತಾಗಿ ಅಸಮಾಧಾನ ಹೊರಹಾಕಿದ್ದಾರೆ. ಕೆಲವು ನಾಯಕರು ನನ್ನ ಬಗ್ಗೆ ತಾರತಮ್ಯ ಎಸಗುತ್ತಿದ್ದಾರೆ ಎಂದು ಅವರು ಗುರುವಾರ ಆರೋಪಿಸಿದ್ದಾರೆ. ದೆಹಲಿಯ ಪ್ರದೇಶ ಕಾಂಗ್ರೆಸ್‌ ಕಮಿಟಿಯೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪ್ರಚಾರಕ್ಕೆ ಬಂದರೆ ಎಲ್ಲಾ ನಾಯಕರು ಅವರ ಪರವಾಗಿ ಪ್ರಚಾರಕ್ಕೆ ಹೋಗುತ್ತಾರೆ. ಬಹಿರಂಗವಾಗಿ ಅವರಿಗೆ ಬೆಂಬಲ ಸೂಚಿಸುತ್ತಾರೆ. ನನ್ನ ಸಭೆಗೆ ಯಾರೂ ಬರುವುದಿಲ್ಲ ಎಂದು ಆರೋಪಿಸಿದರು.

ನಾನು ಪಕ್ಷದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದೇನೆ. 2014 ಮತ್ತು 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾಗಿ ನಿಲ್ಲದ ಮತದಾರರನ್ನು ಸಹ ನಾನು ಪಕ್ಷದ ಬೆಂಬಲಕ್ಕೆ ತರಲು ಪ್ರಯತಿಸುತ್ತಿದ್ದೇನೆ ಎಂದು ಹೇಳಿದರು. ಪಕ್ಷದ ಪ್ರತಿನಿಧಿಗಳ ಪಟ್ಟಿಅಪೂರ್ಣತೆಯಿಂದ ಕೂಡಿದೆ. ಕೆಲವೊಂದರಲ್ಲಿ ಪ್ರತಿನಿಧಿಗಳ ಹೆಸರಿದ್ದರೆ, ಸಂಪರ್ಕ ಸಂಖ್ಯೆಗಳಿಲ್ಲ. 

ಹಾಗಾಗಿ ಎಲ್ಲರನ್ನು ಭೇಟಿ ಮಾಡಲು ನನಗೆ ಕಷ್ಟವಾಗುತ್ತಿದೆ. 22 ವರ್ಷಗಳಿಂದ ಚುನಾವಣೆ ನಡೆಯದ ಕಾರಣ ಇಂತಹವುಗಳು ಉಂಟಾಗಿವೆ. ಇವುಗಳೆಲ್ಲವನ್ನು ಸರಿಪಡಿಸುತ್ತೇನೆ ಎಂದು ಅವರು ಹೇಳಿದರು. ಅ.17ರಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್‌ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಅ.19ರಂದು ಫಲಿತಾಂಶ ಹೊರಬೀಳಲಿದೆ.

"ಸೋನಿಯಾ ಗಾಂಧಿ ನನ್ನ ಹೆಸರನ್ನು ಸೂಚಿಸಿದ್ದು ವದಂತಿಯಷ್ಟೆ"; ಎಐಸಿಸಿ ಅಧ್ಯಕ್ಷ ಚುನಾವಣೆ ಬಗ್ಗೆ ಖರ್ಗೆ

ಅಂತಿಮ ಕಣದಲ್ಲಿ ಖರ್ಗೆ ವರ್ಸಸ್‌ ತರೂರ್‌: ಕಾಂಗ್ರೆಸ್‌ ಅಧ್ಯಕ್ಷ  ಸ್ಥಾನಕ್ಕೆ ಅಂತಿಮ ವೇದಿಕೆ ಸಿದ್ಧಗೊಂಡಿದೆ. ಹಿರಿಯ ನಾಯಕರಾದ ಶಶಿ ತರೂರ್‌ ಮತ್ತು ಮಲ್ಲಿಕಾರ್ಜುನ ಖರ್ಗೆ  ಅಂತಿಮ ಕಣದಲ್ಲಿ ಉಳಿದುಕೊಂಡಿದ್ದಾರೆ.  ಚುನಾವಣೆ ಅಕ್ಟೋಬರ್‌ 17ರಂದು ನಡೆಯಲಿದ್ದು, ಅಕ್ಟೋಬರ್‌ 19ರಂದು ಫಲಿತಾಂಶವನ್ನು ಘೋಷಿಸಲಾಗುತ್ತದೆ. ದೆಹಲಿಯ ಕಾಂಗ್ರೆಸ್‌ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಸಮಿತಿಯ ಮುಖ್ಯಸ್ಥ ಮಧುಸೂಧನ ಮಿಸ್ತ್ರಿ ಹೇಳಿದ್ದಾರೆ.

ನನಗೆ ಅಂಬಾನಿ ಅದಾನಿ ಎಂದರೆ ಅಲರ್ಜಿ ಏನಿಲ್ಲ: ಶಶಿ ತರೂರ್

ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷರಾದರೆ ರಾಜಸ್ಥಾನದ ಉದಯಪುರದಲ್ಲಿ ನಡೆದ ಚಿಂತನಾ ಶಿಬಿರದಲ್ಲಿ ತೆಗೆದುಕೊಳ್ಳಲಾದ ಎಲ್ಲಾ ನಿರ್ಣಯಗಳನ್ನು ಜಾರಿಗೆ ತರುವುದಾಗಿ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ. ಇದೇ ವೇಳೆ ಸವಾಲಿನಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಕೊನೆಯವರೆಗೂ ಹೋರಾಡುವೆ ಎಂದು ಶಶಿ ತರೂರ್‌ ಹೇಳಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಗೆ ಸೆಪ್ಟಂಬರ್ 22ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಗಾಂಧಿ ಕುಟುಂಬದವರನ್ನು ಹೊರತುಪಡಿಸಿ ಉಳಿದವರನ್ನು ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆಯಂತೆ ಈ ಚುನಾವಣೆ ನಡೆದಿದೆ. ಅಲ್ಲದೆ, 22 ವರ್ಷ ನಂತರ ಅಧ್ಯಕ್ಷ ಗಾದಿಗೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!