ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಅಕ್ಕಿಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು(ಜೂ.20): ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು. ನಗರದ ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕದರು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಅಕ್ಕಿಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
undefined
ಅಕ್ಕಿಯಲ್ಲಿ ರಾಜಕೀಯ :
ಪ್ರತಿಭಟನೆನಿತರನ್ನು ಉದ್ದೇಶಿಸಿ ಮಾತಾಡಿದ ಶಾಸಕ ಎಚ್.ಡಿ.ತಮ್ಮಯ್ಯ ಕೇಂದ್ರ ಸರ್ಕಾರ ಸ್ವಯಂಘೋಷಿತವಾಗಿ ರಾಜಗುರುಗಳು ಎಂದು ಘೋಷಣೆ ಮಾಡಿಕೊಂಡಿದೆ. ಅವರಿಗೆ ಬಡವರು, ಅಲ್ಪಸಂಖ್ಯಾತರು, ರೈತರ ಬಗ್ಗೆ ಕಾಳಜಿ ಇದಿದ್ದರೇ, ರಾಜ್ಯಕ್ಕೆ ಸಲ್ಲಬೇಕಾದ ಅಕ್ಕಿಯನ್ನು ನೀಡಲಾಗುತ್ತಿತ್ತು. ಅಕ್ಕಿಯಲ್ಲಿ ರಾಜಕೀಯ ಮಾಡುತ್ತಿರಲಿಲ್ಲ ಎಂದು ದೂರಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶ ಕಂಡ ಅಪ್ರತಿಮ ಮುಖ್ಯಮಂತ್ರಿ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 7ಕೆ.ಜಿ. ಅಕ್ಕಿ ನೀಡುತ್ತಿದ್ದರು. ಚುನಾವಣೆ ಪೂರ್ವದಲ್ಲಿ ಐದು ಗ್ಯಾರೆಂಟಿಗಳನ್ನು ನೀಡಿದ್ದರು. ಐದು ಗ್ಯಾರೆಂಟಿಗಳಲ್ಲಿ ಉಚಿತ ಬಸ್ ಪ್ರಯಾಣ ಗ್ಯಾರೆಂಟಿಯನ್ನು ಪೂರೈಸಿದ್ದಾರೆ. ಜುಲೈ 1 ರಿಂದ 10 ಕೆ.ಜಿ. ಅಕ್ಕಿ ನೀಡುವುದಾಗಿ ತಿಳಿಸಿದ್ದರು. ಇದನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಹೊಟ್ಟೆ ನೋವಿಗೆ ಔಷಧಿ ನೀಡಬಹುದು ಆದರೆ, ಹೊಟ್ಟೆಕಿಚ್ಚಿಗೆ ಔಷಧಿ ಕೊಡಲು ಸಾಧ್ಯವಿಲ್ಲ. ಹಾಗೇ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಮುಖಂಡರಿಗೆ ಕಾಂಗ್ರೆಸ್ ನೀಡಿದ ಗ್ಯಾರೆಂಟಿಗಳನ್ನು ಪೂರೈಸುತ್ತಿ ರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
ಸುಳ್ಳು ಹೇಳುವುದು, ಅಪಪ್ರಚಾರ ಮಾಡುವುದೇ ಬಿಜೆಪಿ ಜಾಯಮಾನ: ಸಚಿವ ಜಾರ್ಜ್
ಹಸಿದ ಹೊಟ್ಟೆಗೆ ಅನ್ನ ಕೊಡುವ ಕಾರ್ಯಕ್ರಮ :
ಕೇಂದ್ರ ಸರ್ಕಾರದ ಇಂತಹ ಧೋರಣೆಯಿಂದ ರಾಜ್ಯದ ಜನರು ಮತ್ತು ಚಿಕ್ಕಮಗಳೂರಿನ ಜನರು ನಿಮನ್ನು ಮನೆಗೆ ಕಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ಇದೇ ಧೋರಣೆಯನ್ನು ಮುಂದೂವರೆಸಿದರೇ ಮುಂಬರುವ ಚುನಾವಣೆಗಳಲ್ಲೂ ಜನರು ನಿಮ್ಮನ್ನು ಮನೆಗೆ ಕಳಿಸುತ್ತಾರೆಂದು ಹೇಳಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ|ಕೆ.ಪಿ.ಅಂಶುಮಂತ್ ಮಾತನಾಡಿ, ಬಿಜೆಪಿಯವರು ಅಕ್ಕಿಯಲ್ಲಿ ರಾಜಕೀಯ ಮಾಡುವ ಮೂಲಕ ಕನಿಷ್ಟ ಮಟ್ಟದ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ. ಹಸಿದ ಹೊಟ್ಟೆಗೆ ಅನ್ನ ಕೊಡುವ ಕಾರ್ಯಕ್ರಮವನ್ನು ರೂಪಿಸಿದ್ದರೇ ಅದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸರ್ಕಾರ ಎಂದರು. ಈಗ ಹಣ ಕೊಡುತ್ತೇವೆ ಅಕ್ಕಿ ನೀಡಿ ಎಂದರು ಕೇಂದ್ರ ಸರ್ಕಾರ ಅಕ್ಕಿ ನೀಡ ದೆ ಅಕ್ಕಿಯಲ್ಲಿ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದರು. ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ಡಾ|ಡಿ.ಎಲ್.ವಿಜಯಕುಮಾರ್, ಎಚ್.ಎಚ್.ದೇವರಾಜ್, ಎಚ್.ಪಿ.ಮಂಜೇಗೌಡ, ಹಿರೇ ಮಗಳೂರು ರಾಮಚಂದ್ರ, ಬಿ.ಬಿ.ನಿಂಗಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.