* ರಾಜಭವನಕ್ಕೆ ಕಾಂಗ್ರೆಸ್ ಮುತ್ತಿಗೆ
* ರಸ್ತೆಯಲ್ಲೇ ಧರಣಿ ಕುಳಿತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ
* ರಸ್ತೆಯಲ್ಲೇ ಧರಣಿ ಕುಳಿತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ
ಬೆಂಗಳೂರು(ಜೂ.16): ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆ ಹೆಸರಿನಲ್ಲಿ ರಾಹುಲ್‌ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿರುವ ಬಿಜೆಪಿ ದ್ವೇಷದ ರಾಜಕಾರಣ ಖಂಡಿಸಿ ಗುರುವಾರ ಕಾಂಗ್ರೆಸ್ ನಾಯಕರು ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಇನ್ನು ಈ ರ್ಯಾಲಿ ವೇಳೆ ಭಾರೀ ಹೈಡ್ರಾಮಾ ನಡೆದಿದ್ದು, ಧರಣಿ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್‌ರನ್ನು ವಶಕ್ಕೆ ಪಡೆದಿದ್ದಾರೆ.
ಹೌದು ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಚೇರಿಯಿಂದ ರಾಜಭವನದೆಡೆ ರ್ಯಾಲಿ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ್ದರು. ಹೀಗಿರುವಾಗ ಕ್ವೀನ್ಸ್ ರಸ್ತೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಧರಣಿನಿರತ ಕಾರ್ಯಕರ್ತರನ್ನು ರಾಜಭವನದೆಡೆ ತೆರಳದಂತೆ ಪೊಲೀಸರು ರಸ್ತೆ ಮಧ್ಯೆ ತಡೆದಿದ್ದಾರೆ. ಹೀಗಿರುವಾಗ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ರಸ್ತೆಯಲ್ಲೇ ಧರಣಿ ಕುಳಿತಿದ್ದಾರೆ. ಆದರೆ ಅಷ್ಟರಲ್ಲಾಗಲೇ ರಸ್ತೆಯಲ್ಲೇ ಧರಣಿ ಕುಳಿತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಿರುವಾಗಲೇ ಅವರೊಂದಿಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ರನ್ನು ಮನವೊಲಿಸಲು ಪೊಲೀಸರು ಯತ್ನಿಸಿದ್ದಾರೆ. ಆದರೆ ಇದು ಸಾಧ್ಯವಾಗದಾಗ ಅವರನ್ನೂ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ಕಾರ್ಯಕರ್ತರೆಲ್ಲಾ ಕೆಪಿಸಿಸಿ ಅಧ್ಯಕ್ಷ ಡಿಕೆಶಿಯನ್ನು ಸುತ್ತುವರೆದು ಪೊಲೀಸರ ವಶಕ್ಕೆ ಸಿಗದಂತೆ ತಡೆದಿದ್ದಾರೆ. ಆದರೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಈ ಜಿದ್ದಾಜಿದ್ದಿನ ಬಳಿಕ ಹರಸಾಹಸಪಟ್ಟ ಪೊಲೀಸರು ಡಿಕೆಶಿಯನ್ನೂ ವಶಕ್ಕೆ ಪಡೆದಿದ್ದಾರೆ. ಇಷ್ಟಕ್ಕೇ ಸುಮ್ಮನಾಗದ ಡಿಕೆಶಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಜನಸಾಮಾನ್ಯರು ಮುಂದಿನ ಚುನಾವಣೆಯಲ್ಲಿ ಇದಕ್ಕೆ ಸೂಕ್ತ ಉತ್ತರ ಕೊಡುತ್ತಾರೆ, ಸೂಕ್ತ ಪಾಠ ಕಲಿಸುತ್ತಾರೆಂದು ಕಿಡಿ ಕಾರಿದ್ದಾರೆ.
ರಾಜ್ ಭವನ್ ಚಲೋ: ಪೊಲೀಸ್ ಭದ್ರತೆ
ಇನ್ನು ಖಾಂಗ್ರೆಸ್ ಆಯೋಜಿಸಿರುವ ರಾಜ್ ಭವನ್ ಚಲೋ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ರಾಜಭವನಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ರಾಜಭವನ ಬಳಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, 6 ಪೊಲೀಸ್ ಇನ್ಸ್ಪೆಕ್ಟರ್, 14 ಪೊಲೀಸ್ ಸಬ್ಇನ್ಸ್ಪೆಕ್ಟರ್, 100 ಪೊಲೀಸ್ ಕಾನ್ಸ್ಟೇಬಲ್ ಹಾಗೂ 3 ಕೆಎಸ್ಆರ್ಪಿ ತುಕಡಿ ಸೇರಿದಂತೆ ಒಟ್ಟು ನೂರಕ್ಕೂ ಹೆಚ್ಚು ಪೊಲೀಸರನ್ನ ರಾಜಭಾವನ ಬಳಿ ನಿಯೋಜನೆ ಮಾಡಲಾಗಿದೆ.
ಸಿಲಿಕಾನ್ ಸಿಟಿಯ ಜನರಿಗೆ ತಟ್ಟಲಿದೆ ಟ್ರಾಫಿಕ್ ಬಿಸಿ
ಈ ರ್ಯಾಲಿ ಬೆಳಗ್ಗೆ 9.30ಕ್ಕೆ ಕೆಪಿಸಿಸಿ ಕಚೇರಿಯಿಂದ ಆರಂಭವಾಗಲಿದ್ದು ರಾಜಭವನದವರೆಗೆ ಸಾಗಲಿದೆ. ಕಾಂಗ್ರಸ್ ರ್ಯಾಲಿ ಹಿನ್ನೆಲೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. ಕ್ವೀನ್ಸ್ ರೋಡ್- ಇಂಡಿಯನ್ ಎಕ್ಸ್ ಪ್ರೇಸ್, ಜಿಪಿಓ ಸಿಗ್ನಲ್ ಮೂಲಕ ಈ ರ್ಯಾಲಿ ಸಾಗಲಿದೆ.
ಹೀಗಿರುವಾಗ ಕ್ವೀನ್ಸ್ ರೋಡ್, ಇಂಡಿಯನ್ ಎಕ್ಸ್ ಪ್ರೆಸ್, ವಸಂತನಗರ, ಶಿವಾಜಿನಗರ, ಕೋಲ್ಸ್‌ಪಾರ್ಕ್, ನಂದಿ ದುರ್ಗ ರೋಡ್, ವಿಧಾನ ಸೌಧ, ಕೆ ಆರ್ ಸರ್ಕಲ್ ಸೇರಿದಂತೆ ಸಿಲಿಕಾನ್‌ಸಿಟಿಯ ಹೃದಯ ಭಾಗದಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಕೆಲಸವಿಟ್ಟುಕೊಂಡು ಪ್ರಯಾಣಿಸುವವರು ಈ ರಸ್ತೆಗಳನ್ನು ಬಿಟ್ಟು ಸಂಚರಿಸೋದೇ ಉತ್ತಮ
ಪ್ರತಿಭಟನೆ ಖಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡನೆ
ಇನ್ನು ರಾಜ್ಯ ಕಾಂಗ್ರೆಸ್ ನಾಯಕರ ಈ ಪ್ರತಿಭಟನೆಯನ್ನು ಖಂಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಇದು ಕಾಂಗ್ರೆಸ್ ನವರ ಗುಲಾಮಿತನದ ಸಂಕೇತ. ದೆಹಲಿಯಲ್ಲೂ, ಬೆಂಗಳೂರಿನಲ್ಲೂ ಪ್ರತಿಭಟನೆ ಮಾಡ್ತಿದಾರೆ. ವಿಚಾರಣೆಗೆ ಕರೆದಿದ್ದಾರೆ, ಹೋಗಿ ವಿಚಾರಣೆ ಎದುರಿಸಬೇಕು. ಅದು ಬಿಟ್ಟು ಪ್ರತಿಭಟನೆ ಮಾಡೋದು ಸರಿಯಲ್ಲ. ಕಾಂಗ್ರೆಸ್ ನವರು ಜನರೆದುರು ಬೆತ್ತಲಾಗುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.