ವಿರೋಧ ಪಕ್ಷದ ನಾಯಕ ಹುದ್ದೆಗೆ ಸೂಕ್ತ ವ್ಯಕ್ತಿ ಬೇಕು: ಬಿಜೆಪಿ ಕಾಳೆಲೆದ ಕಾಂಗ್ರೆಸ್‌

Published : Jul 01, 2023, 09:55 AM ISTUpdated : Jul 01, 2023, 10:45 AM IST
ವಿರೋಧ ಪಕ್ಷದ ನಾಯಕ ಹುದ್ದೆಗೆ ಸೂಕ್ತ ವ್ಯಕ್ತಿ ಬೇಕು: ಬಿಜೆಪಿ ಕಾಳೆಲೆದ ಕಾಂಗ್ರೆಸ್‌

ಸಾರಾಂಶ

ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದ ಕಾಂಗ್ರೆಸ್‌ 

ಬೆಂಗಳೂರು(ಜು.01):  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆಯುತ್ತಾ ಬಂದರೂ ಬಿಜೆಪಿ ಮಾತ್ರ ವಿರೋಧ ಪಕ್ಷದ ನಾಯಕನನ್ನ ಇನ್ನೂ ಆಯ್ಕೆ ಮಾಡಿಲ್ಲ. ಹೀಗಾಗಿ ಖಾಲಿ ಇರುವ ಕರ್ನಾಟಕದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಹುದ್ದೆಗೆ ಸೂಕ್ತ ವ್ಯಕ್ತಿಯೊಬ್ಬರು ಬೇಕಾಗಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯವಾಡಿದೆ. 

 

ಈ ಸಂಬಂಧ ರಾಜ್ಯ ಕಾಂಗ್ರೆಸ್‌ ಟ್ಟಿಟ್ಟರ್‌ನಲ್ಲಿ ಬಿಜೆಪಿ ಕಾಳೆಲೆದ ಕಾಂಗ್ರೆಸ್‌,  ರಾಜ್ಯದಲ್ಲಿ ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ಬಿಜೆಪಿ ಪಕ್ಷ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಅಂತ ಬಿಜೆಪಿ ಕಾಳೆಲೆದಿದೆ ಕಾಂಗ್ರೆಸ್‌. 

ಪಕ್ಷಕ್ಕೆ ಮುಜುಗರ ತರುವ ಬಿಜೆಪಿಗರ ಬಾಯಿಗೆ ಬೀಗ..!

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸೀಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಆರ್‌ಎಸ್‌ಎಸ್‌ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯವಾಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ