ಕಾಂಗ್ರೆಸ್ ಸಂಬಂಧವನ್ನೇ ಮುರಿದ್ಕೊಂಡು ಜೆಡಿಎಸ್‌ ಸೇರಲು ತೀರ್ಮಾನಿಸಿದ ಹಿರಿಯ ನಾಯಕ

Published : Dec 18, 2020, 08:15 PM IST
ಕಾಂಗ್ರೆಸ್ ಸಂಬಂಧವನ್ನೇ ಮುರಿದ್ಕೊಂಡು ಜೆಡಿಎಸ್‌ ಸೇರಲು ತೀರ್ಮಾನಿಸಿದ ಹಿರಿಯ ನಾಯಕ

ಸಾರಾಂಶ

ಕಾಂಗ್ರೆಸ್ ಸಂಬಂಧವನ್ನೇ ಮುರಿದುಕೊಳ್ಳಲು ತೀರ್ಮಾನಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಬೆಳಗಾವಿ, (ಡಿ.18): ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದು, ಬಹುತೇಕ ಅವರು ಪಕ್ಷದಿಂದ ಒಂದು ಕಾಲು ಆಚೆ ಇಟ್ಟಿದ್ದಾರೆ.

ಇದಕ್ಕೆ ಪೂರಕವಂಬತೆ ಈಗಾಗಲೇ ಎಚ್‌ಡಿ ಕುಮಾರಸ್ವಾಮಿ ಅವರು ಹೋಗಿ ಇಬ್ರಾಹಿಂದ ಜೊತೆ ಮಾತನಾಡಿದ್ದಾರೆ. ಅಲ್ಲದೇ ಸ್ವತಃ ಸಿ.ಎಂ. ಇಬ್ರಾಹಿಂ ಅವರು ದೇವೇಗೌಡ ಅವರನ್ನ ಭೇಟಿಯಾಗಿ ಅಂತಿಮ ಮಾತುಕತೆ ನಡೆಸಿದ್ದು, ಶೀಘ್ರದಲ್ಲಿಯೇ ಅವರು ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರ್ಪಡೆಯಾಗಲಿದೆ.

ದೇವೇಗೌಡ್ರ ಭೇಟಿ ಬಳಿಕ ಸ್ಪೋಟಕ ಹೇಳಿಕೆ ಕೊಟ್ಟ ಕಾಂಗ್ರೆಸ್ ಹಿರಿಯ ನಾಯಕ..!

ಪಕ್ಷ ತೊರೆಯುವ ಸುಳಿವು
ಬೆಳಗಾವಿಯಲ್ಲಿ  ಮಾತನಾಡಿದ ಸಿ.ಎಂ. ಇಬ್ರಾಹಿಂ,  ಬೆಳಗಾವಿಯಲ್ಲಿ ಹಳಬರು, ಹೊಸಬರ ಪರಿಚಯ ಮಾಡಿಕೊಂಡಿದ್ದೇನೆ. ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆ ಕೆಟ್ಟು ಹೋಗಿದೆ, ಹೀಗಾಗಿ ಎಲ್ಲಾ ಸಮುದಾಯದ ಮುಖಂಡರ ಜೊತೆಗೆ ಚರ್ಚೆ ಮಾಡಿರುವೆ. ಅವರಿಂದ ಒಳ್ಳೆಯ ಅಭಿಪ್ರಾಯ ಬಂದಿದೆ. ಮುಂದೆ ಒಂದು ರಾಜಕೀಯ ತೀರ್ಮಾನ ಮಾಡ್ತಿನಿ‌. ಕಾಂಗ್ರೆಸ್, ಜೆಡಿಎಸ್ ಯಥಾ ಪ್ರಕಾರ ನಡೆಯುತ್ತಿದೆ.. ಬದಲಾವಣೆಗೆ ಜನರು ಸ್ಪಂದಿಸಬೇಕು ಎಂದಿದ್ದಾರೆ.

ಅಲ್ಲದೇ ಕಾಂಗ್ರೆಸ್ ಅನ್ನ ಜನರು ಕೈ ಬಿಟ್ಟಿದ್ದಾರೆ. ಬೆಂಗಳೂರು, ದೆಹಲಿಯಲ್ಲಿ ಕುಳಿತು ಚರ್ಚೆ ಮಾಡ್ತಾರೆ. ಇದರಿಂದ ಕಾಂಗ್ರೆಸ್ ಜನರಿಂದ ದೂರವಾಗಿದೆ ಎಂದರು.

ಡಿಕೆಶಿ ಖುದ್ದು ಭೇಟಿಯಾಗಿ ಬೇಡವೆಂದ್ರೂ ದೇವೇಗೌಡ್ರ ಮನೆಗೆ ಹೋದ ಕಾಂಗ್ರೆಸ್ ಹಿರಿಯ ನಾಯಕ...!

ಕಾಂಗ್ರೆಸ್​ನಲ್ಲಿ ರಾಜಕೀಯವಾಗಿ ತುಳಿದ್ರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ತುಳಿಯಲು ನಾನು ಹಗುರವಾಗಿಲ್ಲ. ನಾನು 110 ಕೆ.ಜಿ. ಇರುವೆ. ಆದ್ರೆ ಕಾಂಗ್ರೆಸ್​ನಲ್ಲಿ ನನಗೆ ಪರದೆ ಹಾಕಿದ್ರು, ಅದರಿಂದ ಹೊರಗೆ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

‌. ಸಿದ್ದರಾಮಯ್ಯನ್ನವರು ನನ್ನ ಸ್ನೇಹಿತರು. ಅವರ ಬಗ್ಗೆ ಏನೂ ಮಾತನಾಡಲ್ಲ. ಆದ್ರೆ ಮನೆ ಕಟ್ಟಿದವರು ಮನೆಯಲ್ಲಿ ಇರಲ್ಲ. ಮನೆ ಕಟ್ಟಿದವರನ್ನ ಒಂದೆರಡು ಮೋಸಂಬಿ ಕೊಟ್ಟು, ಶಾಲು ಹಾಕಿ ಹೊರಗೆ ಹಾಕ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಬಿಜೆಪಿ ಸೇರಲ್ಲ. ನನ್ನದು ಬಸವ ಕೃಪಾ ಅದು ಕೇಶವ ಕೃಪಾ. ರಾಜಕೀಯ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದೆ. ಬಿಜೆಪಿಯಲ್ಲಿ ಕೆಲವರು ಒಳ್ಳೆಯವರು ಇದ್ದಾರೆ. ಹಸಿದವರಿಗೆ ಕೇಂದ್ರ, ರಾಜ್ಯ ಸರ್ಕಾರ ಅನ್ನ ಕೊಟ್ಟಿಲ್ಲ ಎಂದು ಬಿಜೆಪಿ ಸರ್ಕಾರಗಳ ವಿರುದ್ಧ ಕಿಡಿಕಾರಿದರು,

ದೆಹಲಿ ಬಹುತ್ ದೂರ್ ಹೈ ಅನ್ನುವಂತೆ ಈ ರಾಷ್ಟ್ರೀಯ ಪಕ್ಷಗಳಿಂದ ಆಗಿದೆ. ಪ್ರಾದೇಶಿಕ ಪಕ್ಷದಿಂದ ಜನರ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿದೆ. ದೇವೇಗೌಡರು, ಕುಮಾರಸ್ವಾಮಿ ಇಬ್ಬರದ್ದು ಒಂದು ವ್ಯಕ್ತಿತ್ವ ಇದೆ. ಇವರೆಲ್ಲರನ್ನ ಸಂಗಮ ಮಾಡಿ ಏನು ಮಾಡಲು ಸಾಧ್ಯವಿದೆ ಅನ್ನೋದನ್ನ ನೋಡೋಣಾ ಎಂದು ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವ ಕುರಿತು ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!