ಈಗ ಸತೀಶ್ ಜಾರಕಿಹೊಳಿಯಿಂದ ಹೊಸ ರಾಜಕೀಯ ಸಿದ್ಧತೆ : ರಹಸ್ಯ ಬಿಚ್ಚಿಟ್ಟರು

Kannadaprabha News   | Asianet News
Published : Dec 03, 2020, 09:43 AM IST
ಈಗ ಸತೀಶ್ ಜಾರಕಿಹೊಳಿಯಿಂದ ಹೊಸ ರಾಜಕೀಯ ಸಿದ್ಧತೆ :   ರಹಸ್ಯ ಬಿಚ್ಚಿಟ್ಟರು

ಸಾರಾಂಶ

ಈಗ ಸತೀಶ್ ಜಾರಕಿಹೊಳಿ ಇದೀಗ ಹೊಸ ರಾಜಕೀಯ ಸಿದ್ಧತೆ ಬಗ್ಗೆ ಮಾತನಾಡಿದ್ದಾರೆ. ಜಾರಕಿಹೊಳಿ ಹೇಳಿದ ಆ ಸುದ್ದಿ ಏನು..?

ಬೆಂಗಳೂರು (ಡಿ.03):  ಕಾಂಗ್ರೆಸ್‌ ಪಕ್ಷವನ್ನು ಬೇರುಮಟ್ಟದಿಂದ ಬಲವರ್ಧನೆ ಮಾಡಲು ರೂಪರೇಷೆ ಸಿದ್ಧಪಡಿಸುತ್ತಿದ್ದೇವೆ. ಪಕ್ಷವನ್ನು ಕೇಡರ್‌ ಬೇಸ್‌ ಪಕ್ಷ ಮಾಡಲು ಯುವಕರಲ್ಲಿ ಜಾಗೃತಿ ಹಾಗೂ ಗ್ರಾಮ ಮಟ್ಟದಲ್ಲಿ ಕಾರ್ಯಾಗಾರಗಳನ್ನು ನಡೆಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸನ್ನು ಕೇಡರ್‌ ಬೇಸ್‌ ಪಕ್ಷವನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಈಗಾಗಲೇ ಪೂರ್ವಭಾವಿ ತಯಾರಿ ನಡೆಸುತ್ತಿದ್ದೇವೆ. ಇದನ್ನು ಆರ್‌ಎಸ್‌ಎಸ್‌ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು. ಅವರದ್ದು ಹಿಂಸೆ, ಅಸಮಾನತೆ ಪ್ರತಿಪಾದಿಸುವ ಸಂಘಟನೆ. ನಮ್ಮ ಸಿದ್ಧಾಂತಗಳು ಹಾಗೂ ಅವರ ಸಿದ್ಧಾಂತಗಳು ಬೇರೆ ಬೇರೆ ಎಂದರು.

ಯಾವ್ ಕಾರಣಕ್ಕೂ ಹೀಗ್ ಮಾಡ್ಬೇಡಿ : BSY ಗೆ ಸಿದ್ದರಾಮಯ್ಯ ಪತ್ರ ...

ಕೆಪಿಸಿಸಿಯ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮಾತನಾಡಿ, ಗೋಹತ್ಯೆ ನಿಷೇಧ ಕಾಯಿದೆಯನ್ನು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಶೋಷಣೆ, ದಬ್ಬಾಳಿಕೆ, ಸುಳ್ಳು ದೂರುಗಳನ್ನು ದಾಖಲಿಸುವ ಸಲುವಾಗಿಯೇ ಜಾರಿಗೆ ತರಲಾಗುತ್ತಿದೆ. ಹೀಗಾಗಿ ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಮ್ಮ ನಿಲುವು ಏನು ಎಂಬುದನ್ನು ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಹೇಳಿದರು.

ಬಸವ ಕಲ್ಯಾಣ ಕ್ಷೇತ್ರದ ಬಗ್ಗೆ ಮಾತನಾಡಿದ ಅವರು, ನನ್ನ ಕ್ಷೇತ್ರಕ್ಕೆ ತುಂಬಾ ಹತ್ತಿರವಿರುವ ಕ್ಷೇತ್ರ. ಹೀಗಾಗಿ ನನ್ನ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆಗೆ ಸಮಿತಿ ರಚನೆ ಮಾಡಲಾಗಿದೆ. ಬಿಜೆಪಿ ಕೋಮುವಾದಿ ಪಕ್ಷ ಅಂತ ಜಗಜ್ಜಾಹೀರಾಗಿದೆ. ಹೀಗಾಗಿ ಬಸವ ಕಲ್ಯಾಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?